ಕರ್ನಾಟಕ

karnataka

ಮಂಗಳೂರು ಕಾಲೇಜಲ್ಲಿ ಹಿಜಾಬ್ ಪರ ವಿದ್ಯಾರ್ಥಿನಿಯರಿಗೆ ಶಿಸ್ತು ಕ್ರಮದ ನೋಟಿಸ್ ಜಾರಿ

By

Published : Jun 6, 2022, 6:56 PM IST

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಹಿಜಾಬ್ ಪರ ಇರುವ ವಿದ್ಯಾರ್ಥಿನಿಯರಿಗೆ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ನೋಟಿಸ್ ಜಾರಿ ಮಾಡಲಾಗಿದೆ. ಕಾಲೇಜಿನ ಪ್ರಾಂಶುಪಾಲರಾದ ಅನುಸೂಯ ಅವರು ವಿದ್ಯಾರ್ಥಿನಿಯರಿಗೆ ಮೂರು ದಿನಗಳೊಳಗೆ ಉತ್ತರಿಸುವಂತೆ ಮೇ 4 ರಂದು ನೋಟಿಸ್ ಜಾರಿ ಮಾಡಿದ್ದಾರೆ.

manglore-university-college-hijab-row-notice-issued-to-the-students
ಮಂಗಳೂರಿನ ಹಿಜಾಬ್ ಪರ ವಿದ್ಯಾರ್ಥಿನಿಯರಿಗೆ ಶಿಸ್ತು ಕ್ರಮದ ನೋಟೀಸ್ ಜಾರಿ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಹಿಜಾಬ್ ಪರ ಇರುವ ವಿದ್ಯಾರ್ಥಿನಿಯರಿಗೆ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ನೋಟಿಸ್ ಜಾರಿ ಮಾಡಲಾಗಿದೆ. ಕಾಲೇಜಿನ ಪ್ರಾಂಶುಪಾಲರಾದ ಅನುಸೂಯ ಅವರು ವಿದ್ಯಾರ್ಥಿನಿಯರಿಗೆ ಮೂರು ದಿನಗಳೊಳಗೆ ಉತ್ತರಿಸುವಂತೆ ಮೇ 4 ರಂದು ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

"ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಶಿರವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗುವಂತಿಲ್ಲ ಎಂಬ ಆದೇಶವಿರುತ್ತದೆ. ಈ ಬಗ್ಗೆ ವಿಶ್ವವಿದ್ಯಾಲಯದಿಂದ ಮಾರ್ಗಸೂಚಿ ಹಾಗೂ ಹೈಕೋರ್ಟಿನ ಆದೇಶವನ್ನು ಎಲ್ಲಾ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಗಿದೆ. ಈ ಕಾಲೇಜಿನಲ್ಲಿ ಸುಮಾರು 1600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಕೇವಲ ಬೆರಳೆಣಿಕೆಯ ವಿದ್ಯಾರ್ಥಿಗಳು ಕಾಲೇಜಿಗೆ ಬಂದು ತರಗತಿಗಳಿಗೆ ಹಾಜರಾಗದೆ ಕಾಲೇಜಿನ ಆವರಣದಲ್ಲಿ ಆತಂಕ, ಶಾಂತಿಭಂಗ ಮತ್ತು ಅಶಿಸ್ತು ಸೃಷ್ಟಿ ಮಾಡುತ್ತಿರುವುದು ಕಂಡುಬಂದಿರುತ್ತದೆ. ಮಾತ್ರವಲ್ಲದೆ ನೀವು ಬಾಹ್ಯಶಕ್ತಿಗಳ ಜೊತೆ ಸೇರಿಕೊಂಡು ಪತ್ರಿಕಾಗೋಷ್ಠಿ ನಡೆಸಿ ಕಾಲೇಜಿನ ವಿರುದ್ಧವಾಗಿ , ಪ್ರಾಂಶುಪಾಲರ ವಿರುದ್ಧ ಕೆಲವೊಂದು ಹೇಳಿಕೆ ನೀಡಿ ಕಾಲೇಜಿನ ಘನತೆಗೆ ಧಕ್ಕೆ ಉಂಟು ಮಾಡಿರುವುದನ್ನು ಗಮನಿಸಲಾಗಿದೆ. ಈ ರೀತಿಯ ವರ್ತನೆಯ ಬಗ್ಗೆ ನಿಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎನ್ನುವ ಬಗ್ಗೆ ಸಮಜಾಯಿಷಿಯನ್ನು ಈ ಪತ್ರ ತಲುಪಿದ ಮೂರು ದಿನಗಳೊಳಗೆ ಪ್ರಾಂಶುಪಾಲರಿಗೆ ನೀಡುವಂತೆ ಸೂಚಿಸಲಾಗಿದೆ " ಎಂದು ನೋಟಿಸ್ ನೀಡಲಾಗಿದೆ.

ಕಾಲೇಜಿನಿಂದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ನೋಟೀಸ್

ಓದಿ :ನಿಮ್ಮ ಚಡ್ಡಿ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಮಾಡಿ, ನಂತರ ಆರ್​ಎಸ್​ಎಸ್ ಚಡ್ಡಿ ಸುಡುವಂತ್ರಿ : ಪ್ರಲ್ಹಾದ್ ಜೋಶಿ

ABOUT THE AUTHOR

...view details