ಕರ್ನಾಟಕ

karnataka

ಮಂಗಳೂರಲ್ಲಿನ ಗೂಂಡಾಗಿರಿ ಬಗ್ಗೆ ಅಧಿವೇಶನದಲ್ಲಿ ಪ್ರತಿಪಕ್ಷಗಳು ಗಂಭೀರ ಚರ್ಚೆ ನಡೆಸಲಿ: ಎಸ್​ಡಿಪಿಐ ಒತ್ತಾಯ

By

Published : Dec 21, 2022, 4:44 PM IST

ಕರಾವಳಿ ಭಾಗದಲ್ಲಿ ಹೆಚ್ಚಾಗುತ್ತಿರುವ ಅನೈತಿಕ ಗೂಂಡಾಗಿರಿ ಬಗ್ಗೆ ಅಧಿವೇಶನದಲ್ಲಿ ಪ್ರತಿಪಕ್ಷಗಳು ಗಂಭೀರ ಚರ್ಚೆ ನಡೆಸಬೇಕು ಎಂದು ಅಬ್ದುಲ್ ಮಜೀದ್ ಮೈಸೂರು ಆಗ್ರಹಿಸಿದರು.

SDPI State President Abdul Majeed Mysore
ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು

ಅಧಿವೇಶನದಲ್ಲಿ ಪ್ರತಿಪಕ್ಷಗಳು ಕರಾವಳಿ ಭಾಗದಲ್ಲಿ ಹೆಚ್ಚಾಗುತ್ತಿರುವ ಅನೈತಿಕ ಗೂಂಡಾಗಿರಿ ಬಗ್ಗೆ ಗಂಭೀರ ಚರ್ಚೆ ನಡೆಸಬೇಕು ಎಂದು ಅಬ್ದುಲ್ ಮಜೀದ್ ಮೈಸೂರು ಆಗ್ರಹಿಸಿದರು.

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅನೈತಿಕ ಗೂಂಡಾಗಿರಿ ಬಗ್ಗೆ ಅಧಿವೇಶನದಲ್ಲಿ ಪ್ರತಿಪಕ್ಷಗಳು ಗಂಭೀರ ಚರ್ಚೆ ನಡೆಸಬೇಕು ಎಂದು ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಆಗ್ರಹಿಸಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ಅನೈತಿಕ ಗೂಂಡಾಗಿರಿ ನಡೆಯುತ್ತಿರುವ ಬಗ್ಗೆ ಈಗಾಗಲೇ ಗೃಹ ಸಚಿವರು ಒಪ್ಪಿಕೊಂಡಿದ್ದಾರೆ. ಕಳೆದ ಎರಡು ವರ್ಷದ ಅವಧಿಯಲ್ಲಿ 31 ಪ್ರಕರಣಗಳು ನಡೆದಿವೆ ಎಂದು ತಿಳಿಸಿದ್ದಾರೆ. ದಾಖಲಾಗದ ಪ್ರಕರಣಗಳು ಮತ್ತಷ್ಟು ಇವೆ. ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆ ವಹಿಸಬೇಕು. ಪ್ರತಿಪಕ್ಷಗಳು ಈ ಬಗ್ಗೆ ಅಧಿವೇಶನದಲ್ಲಿ ಗಂಭೀರ ಚರ್ಚೆ ನಡೆಸಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅನೈತಿಕ ಗೂಂಡಾಗಿರಿಗೆ ಸರ್ಕಾರದ ಕುಮ್ಮಕ್ಕು ಇದೆ. ಇದನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಜನವರಿ 7 ರಂದು ಪ್ರಕಟಿಸಲಾಗುವುದು. ಅಂದು 100 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ (ಮಂಗಳೂರು) ಮತ್ತು ಬಂಟ್ವಾಳ ಕ್ಷೇತ್ರದಲ್ಲಿ ಸ್ಪರ್ಧಿಸಲು ತನ್ನ ಹೆಸರನ್ನು ಸೂಚಿಸಲಾಗಿದೆ ಎಂದು ಅಬ್ದುಲ್ ಮಜೀದ್ ಹೇಳಿದರು.

ಇದನ್ನೂ ಓದಿ :ಮಂಗಳೂರು: ಆಭರಣ ಮಳಿಗೆಯಲ್ಲಿ ನೈತಿಕ ಪೊಲೀಸ್ ಗಿರಿ; ಮೂರು ಪ್ರಕರಣ ದಾಖಲು

ABOUT THE AUTHOR

...view details