ಕರ್ನಾಟಕ

karnataka

ಪುತ್ತೂರಿನ ಇಬ್ಬರ ವಿರುದ್ಧ ಪೋಕ್ಸೋ ಕೇಸ್​ ದಾಖಲು: ಪ್ರೀತ್ಸೇ ಅಂತ ಕಿರುಕುಳ ನೀಡುತ್ತಿದ್ದವನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ

By

Published : Jan 6, 2023, 5:31 PM IST

ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ - ಪುತ್ತೂರಿನ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು - ಇನ್ನೊಬ್ಬ ಯುವತಿಗೆ ಬೆದರಿಕೆಯೊಡ್ಡಿದ ಪ್ರಕರಣವೂ ದಾಖಲಾಗಿದೆ

Puttur Police Station
ಪುತ್ತೂರು ಪೊಲೀಸ್​ ಠಾಣೆ

ಪುತ್ತೂರು:ವಿದ್ಯಾರ್ಥಿನಿಯಾಗಿರುವ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತು ಕಾಲೇಜೊಂದರ ವಿದ್ಯಾರ್ಥಿನಿಯಾಗಿರುವ ಯುವತಿಗೆ ಕಿರುಕುಳ ನೀಡಿ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಪತ್ತೂರಿನ ಯುವಕನೊಬ್ಬನ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಬೆದರಿಕೆ ಹಾಕಿರುವ ಸೆಕ್ಷನ್​ ಅಡಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ. ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ಭುಜಂಗ ರೈ ಅವರ ಪುತ್ರ ನಿತೀಶ್ ರೈ ಆರೋಪಿಯಾಗಿದ್ದಾನೆ.

ನಿತೇಶ್ ರೈ 2020 ರ ಜನವರಿ ತಿಂಗಳಲ್ಲಿ ಬಾಲಕಿಯೊಬ್ಬಳನ್ನು ಪ್ರೀತಿ ಮಾಡುವಂತೆ ಒತ್ತಾಯಿಸಿ ಅವಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಪದೇ ಪದೆ ಆಕೆಯ ಮೊಬೈಲ್‍ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದನಲ್ಲದೇ , ನಿನ್ನ ಕುರಿತು ಅಪಪ್ರಚಾರ ಮಾಡುತ್ತೇನೆ ಎಂದು ಬ್ಲ್ಯಾಕ್‍ಮೇಲ್ ಕೂಡ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ವಿಚಾರವನ್ನು ಯಾರಲ್ಲಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ಆರೋಪಿಸಿದ್ದಾಳೆ.

ಕಿರುಕುಳ ನೀಡಿದ ಸಂದರ್ಭದಲ್ಲಿ ಅಪ್ರಾಪ್ತೆಯಾಗಿದ್ದು, ಇದೀಗ ಪ್ರಾಪ್ತ ವಯಸ್ಸಿಗೆ ಬಂದ ಬಳಿಕ ತಡವಾಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಆಕೆ ನೀಡಿದ ದೂರಿನಂತೆ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಮುಂದಾಗಿದ್ದಾರೆ.

ಪೋಕ್ಸೋ ಜೊತೆ ಬೆದರಿಕೆ ಪ್ರಕರಣವೂ ದಾಖಲು:ಪೋಕ್ಸೋ ಪ್ರಕರಣದ ಜತೆಗೆ ಆರೋಪಿ ನಿತೀಶ್ ರೈ ಅವರ ವಿರುದ್ಧ ಮತ್ತೊಂದು ಬೆದರಿಕೆ ಪ್ರಕರಣವೂ ದಾಖಲಾಗಿದೆ ಎಂದು ತಿಳಿದು ಬಂದಿದೆ. ಪುತ್ತೂರಿನ ಕಾಲೇಜೊಂದರಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯೊಬ್ಬಳ ಮೊಬೈಲ್‍ಗೆ ಕರೆ ಮಾಡಿ ಪದೇ ಪದೆ ಪ್ರೀತಿಸುವಂತೆ ಒತ್ತಾಯ ಮಾಡುತ್ತಿರುವುದಲ್ಲದೆ, ಕಳೆದ ಡಿ. 29 ರಂದು ವಿದ್ಯಾರ್ಥಿನಿಯ ಮನೆಯ ಬಳಿ ಹೋಗಿ ಬೆದರಿಕೆಯೊಡ್ಡಿರುವ ಕುರಿತು ವಿದ್ಯಾರ್ಥಿನಿ ಸಂಪ್ಯ ಠಾಣೆಗೆ ದೂರು ನೀಡಿದ್ದಾರೆ ಎಂದು ಗೊತ್ತಾಗಿದೆ. ಸಂಪ್ಯ ಪೊಲೀಸರು ಆರೋಪಿಯ ವಿರುದ್ಧ ಪ್ರತ್ಯೇಕ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ಆ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇನ್ನೊಬ್ಬ ಯುವಕನ ವಿರುದ್ದವೂ ಕೇಸು:ನಿತೇಶ್ ರೈ ವಿರುದ್ದ ದೂರು ನೀಡಿರುವವರ ಪೈಕಿ, ಪ್ರಕರಣದ ಸಂದರ್ಭದಲ್ಲಿ ಯುವತಿ ಅಪ್ರಾಪ್ತೆಯಾಗಿದ್ದಳು ಎನ್ನಲಾಗಿದೆ. ಇನ್ನು ಪುತ್ತೂರಿನ ಮತ್ತೊಬ್ಬ ವ್ಯಕ್ತಿಯ ವಿರುದ್ದವೂ ಆಕೆ ದೂರು ನೀಡಿದ್ದಾಳೆ ಎಂದು ಗೊತ್ತಾಗಿದೆ. ಪ್ರಸ್ತುತ ಪ್ರಾಪ್ತ ವಯಸ್ಕಳಾಗಿರುವ ಆಕೆ ನೀಡಿದ ದೂರಿನಂತೆ ಕೋಡಿಯಡ್ಕ ನಿವಾಸಿ ಬೆಳಿಯಪ್ಪ ಗೌಡ ಅವರ ಪುತ್ರ, ಪುತ್ತೂರಿನ ಪರ್ಲಡ್ಕದಲ್ಲಿ ಕೋಳಿ ಫಾರ್ಮ್ ಹೊಂದಿರುವ ರಾಹುಲ್ ಎಂಬಾತನ ವಿರುದ್ಧ ಕೂಡ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕೇಸ್​ ದಾಖಲಿಸಲು ವಿಳಂಬವೇಕೆ ಎಂದು ವಿವರಣೆ:ದೂರು ನೀಡಿರುವ ವಿದ್ಯಾರ್ಥಿನಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಸಂದರ್ಭದಲ್ಲಿ ಆರೋಪಿ ರಾಹುಲ್, ಯುವತಿಗೆ ಕೋಳಿ ಫಾರ್ಮ್‍ನಲ್ಲಿ ಲೈಂಗಿಕ ಕಿರುಕುಳ ನೀಡಿ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಲಾಗಿದೆ. ಇದೀಗ ಯುವಕ ರಾಹುಲ್ ತನ್ನ ಚರಿತ್ರೆ ಹಾಳು ಮಾಡುವುದಾಗಿ ಬೆದರಿಕೆಯೊಡ್ಡಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ತಡವಾಗಿ ದೂರು ನೀಡುತ್ತಿರುವುದಾಗಿ ಆಕೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತ ಯುವತಿ ತಿಳಿಸಿದ್ದಾಳೆ.

ಇದನ್ನೂ ಓದಿ:ಕೊಪ್ಪಳದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

ABOUT THE AUTHOR

...view details