ಕರ್ನಾಟಕ

karnataka

ಮಂಗಳೂರು ಕೊಲೆ ಪ್ರಕರಣಗಳು: ಎಡಿಜಿಪಿ ನೇತೃತ್ವದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ

By

Published : Aug 4, 2022, 12:07 PM IST

Updated : Aug 4, 2022, 12:33 PM IST

ಮಂಗಳೂರು ಕೊಲೆ ಪ್ರಕರಣಗಳು ಮತ್ತು ಸದ್ಯದ ಪರಿಸ್ಥಿತಿ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಯಿತು.

Mangalore Police meeting
ಮಂಗಳೂರು ಪೊಲೀಸ್ ಸಭೆ

ಮಂಗಳೂರು (ದಕ್ಷಿಣ ಕನ್ನಡ):ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಬಳಿಕ ಉಂಟಾದ ಉದ್ವಿಗ್ನ ಸ್ಥಿತಿಯೀಗ ಸಹಜ ಸ್ಥಿತಿಗೆ ಮರಳುತ್ತಿದ್ದು, ಪರಿಸ್ಥಿತಿ ಅವಲೋಕನ ಮಾಡಲು ಇಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಯಿತು.

ಎಡಿಜಿಪಿ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್, ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಡಿಸಿಪಿ ಅಂಶುಕುಮಾರ್, ಉಡುಪಿ ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ಮತ್ತು ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳ ಇನ್ಸ್​ಪೆಕ್ಟರ್​ಗಳು ಭಾಗಿಯಾಗಿದ್ದರು.

ಮಂಗಳೂರಲ್ಲಿ ಹಿರಿಯ ಪೊಲೀಸ್​ ಅಧಿಕಾರಿಗಳ ಸಭೆ

ಇದನ್ನೂ ಓದಿ:ಅಮಿತ್ ಶಾ ಭೇಟಿಯಾದ ಸಿಎಂ ಬೊಮ್ಮಾಯಿ‌..!

ಸಭೆಯಲ್ಲಿ ಇತ್ತೀಚೆಗೆ ನಡೆದ ಘಟನೆಗಳ ಬಗ್ಗೆ ಅವಲೋಕನ ಮಾಡಲಾಯಿತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಯಿತು. ಸಭೆಗೂ ಮುನ್ನ ಎಡಿಜಿಪಿ ಅಲೋಕ್ ಕುಮಾರ್ ಅವರು ಸುರತ್ಕಲ್ ಮತ್ತು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮತ್ತು ಪೊಲೀಸರೊಂದಿಗೆ ಸಂವಹನ ನಡೆಸಿದರು.

Last Updated : Aug 4, 2022, 12:33 PM IST

ABOUT THE AUTHOR

...view details