ಕರ್ನಾಟಕ

karnataka

ಮಂಗಳೂರಿನಲ್ಲಿ ಹೈಟೆಕ್​ ವೇಶ್ಯಾವಾಟಿಕೆ ದಂಧೆ: ಕಾಲೇಜು ವಿದ್ಯಾರ್ಥಿನಿಯರು ಸೇರಿ ನಾಲ್ವರು ಯುವತಿಯರ ರಕ್ಷಣೆ

By

Published : Feb 3, 2022, 3:45 PM IST

Updated : Feb 3, 2022, 5:41 PM IST

Prostitution case in Mangaluru: ಮಂಗಳೂರಿನ ನಂದಿಗುಡ್ಡದ ರಿಯೋನಾ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಸೇರಿ ಮತ್ತಿಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.

Police Raid on Alleged Prostitution Racket at Mangaluru
ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ

ಮಂಗಳೂರು:ಇಬ್ಬರು ಅಪ್ರಾಪ್ತೆಯರು ಸೇರಿ ನಾಲ್ವರನ್ನು ಹೈಟೆಕ್​ ವೇಶ್ಯಾವಾಟಿಕೆಗೆ ತಳ್ಳಿರುವ ಆರೋಪದ ಮೇಲೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಆರೋಪಿಗಳು ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಸೇರಿ ಮತ್ತಿಬ್ಬರು ಯುವತಿಯರಿಗೆ ಬೆದರಿಕೆ, ಆಮಿಷಗಳನ್ನೊಡ್ಡಿ ವೇಶ್ಯಾವಾಟಿಕೆಗೆ ಪ್ರೇರೇಪಿಸಿದ್ದರು. ನಗರದ ನಂದಿಗುಡ್ಡದ ರಿಯೋನಾ ರೆಸಿಡೆನ್ಸಿಯ ಐದನೇ ಮಹಡಿಯ ಬಾಡಿಗೆ ಕೊಠಡಿಯಲ್ಲಿ ಆರೋಪಿಗಳು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಅಪ್ರಾಪ್ತೆಯರು!

ಇವರು ನಡೆಸುತ್ತಿದ್ದ ವೇಶ್ಯಾವಾಟಿಕೆಗೆ‌ ಕೇರಳ ಮೂಲದವರೇ ಗ್ರಾಹಕರಾಗಿದ್ದರು. ಅಪ್ರಾಪ್ತೆಯೊಬ್ಬಳು ಈ ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿರುವ ವಿಚಾರ ಆಕೆಯ ಕಾಲೇಜಿನ ಪ್ರಾಂಶುಪಾಲೆಗೆ ತಿಳಿದು ಅವರು ಚೈಲ್ಡ್ ಕೇರ್​​ಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ‌ ಪ್ರಕರಣ ಬಯಲಿಗೆ ಬಂದಿದೆ.

ಪ್ರಕರಣದ ಬಗ್ಗೆ ಮಂಗಳೂರು ಪೊಲೀಸ್​ ಕಮೀಷನರ್​ ಮಾಹಿತಿ

ತಕ್ಷಣ ಮಂಗಳೂರು ಪೊಲೀಸರು ಕಾರ್ಯಪ್ರವೃತ್ತರಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ರೆಸಿಡೆನ್ಸಿ ಮೇಲೆ ದಾಳಿ ನಡೆಸಿ ಇಬ್ಬರು ಮಹಿಳೆಯರು, ಓರ್ವ ಪುರುಷನನ್ನು ಬಂಧಿಸಿದ್ದಾರೆ. ‌

ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ, ವೇಶ್ಯಾವಾಟಿಕೆ ನಡೆಸಿರುವ ಪ್ರಕರಣ ದಾಖಲಿದೆ. ಈ ಕುರಿತಂತೆ ಹೆಚ್ಚಿನ ತನಿಖೆ ನಡೆಸಲು‌ ಪ್ರಕರಣವನ್ನು ಸಿಸಿಬಿಗೆ ಒಪ್ಪಿಸಲಾಗಿದೆ.

ಇದನ್ನೂ ಓದಿ:ಗಂಡನಿಗೆ ಅನುಮಾನದ ಗುಮ್ಮ.. ಬೆಂಗಳೂರಲ್ಲಿ ಪತ್ನಿ ಮೇಲೆ ಬಿಸಿ ಎಣ್ಣೆ ಸುರಿದಿದ್ದ ಆರೋಪಿ ಅರೆಸ್ಟ್

Last Updated : Feb 3, 2022, 5:41 PM IST

TAGGED:

ABOUT THE AUTHOR

...view details