ಕರ್ನಾಟಕ

karnataka

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಶಫೀಕ್​ಗೆ ನ್ಯಾಯಾಂಗ ಬಂಧನ

By

Published : Aug 7, 2022, 9:38 PM IST

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಬಂಧಿತ ಆರೋಪಿ ಶಫೀಕ್​​ಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Etv Bharatpraveen-nettaru-murder-case-judicial-custody-for-accused-shafiq
Etv Bharatಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಶಫೀಕ್​ಗೆ ನ್ಯಾಯಾಂಗ ಬಂಧನ

ಸುಳ್ಯ(ದಕ್ಷಿಣ ಕನ್ನಡ):ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದ ಆರೋಪಿ ಶಫೀಕ್ ಬೆಳ್ಳಾರೆ ಎಂಬಾತನನ್ನು ಶುಕ್ರವಾರ ಸಂಜೆ ಮತ್ತೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ಕೋರ್ಟ್​​ ನ್ಯಾಯಾಂಗ ಬಂಧನ ವಿಧಿಸಿದೆ.

ಸುಳ್ಯ ನ್ಯಾಯಾಲಯದ ನ್ಯಾಯಾಧೀಶರು 15 ದಿನಗಳ ವಿಚಾರಣಾ ಹಂತದ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಶಫೀಕ್​ ಮತ್ತು ಝಕೀರ್ ಸವಣೂರು ಎಂಬುವರನ್ನು ಪೊಲೀಸರು 5 ದಿನಗಳ ಕಾಲ ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡಿದ್ದರು.

ನಂತರ ಅವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಝಕೀರ್​ಗೆ ನ್ಯಾಯಾಂಗ ಬಂಧನ ವಿಧಿಸಿ, ಶಫೀಕ್​ನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ ಮತ್ತೆ ಶಫೀಕ್‌ಗೆ ಕೂಡ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ:ಶಿಳ್ಳೆ ಹೊಡೆದ ಗಿಳಿ.. ಮಾಲೀಕರ ವಿರುದ್ಧ ಪ್ರಕರಣ ದಾಖಲು!

ABOUT THE AUTHOR

...view details