ಕರ್ನಾಟಕ

karnataka

ಆಂಧ್ರ ಸಿಎಂ ಪರಿಹಾರ ನಿಧಿಗೆ ಕನ್ನ ಹಾಕಲು ಯತ್ನ: ದ.ಕ ಜಿಲ್ಲೆಯ ಆರು ಮಂದಿಯ ಬಂಧನ

By

Published : Oct 6, 2020, 11:04 AM IST

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 117 ಕೋಟಿ ರೂ. ವಂಚಿಸಲು ಯೋಜನೆ ರೂಪಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ದ.ಕ ಜಿಲ್ಲೆಯ ಆರು ಮಂದಿಯ ಬಂಧನ
ದ.ಕ ಜಿಲ್ಲೆಯ ಆರು ಮಂದಿಯ ಬಂಧನ

ಮಂಗಳೂರು:ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಗೆ ವಂಚಿಸಲು ಯೋಜನೆ ರೂಪಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಆಂಧ್ರದ ಎಸಿಬಿ ಪೊಲೀಸರ ತಂಡ ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಆರು ಮಂದಿಯನ್ನು ಬಂಧಿಸಿದೆ. ಮೂಡಬಿದ್ರೆ ನಿವಾಸಿಗಳಾದ ಯೋಗೀಶ್ ಆಚಾರ್ಯ (40), ಉದಯ ಶೆಟ್ಟಿ ಕಾಂತಾವರ( 35), ಮಂಗಳೂರಿನ ಬ್ರಿಜೆಶ್ ರೈ(35) ಬೆಳ್ತಂಗಡಿಯ ಗಂಗಾಧರ ಸುವರ್ಣ (45) ಸೇರಿದಂತೆ ಆರು ಮಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 117 ಕೋಟಿ ರೂ. ವಂಚಿಸಲು ಇವರು ಯೋಜನೆ ರೂಪಿಸಿದ್ದರು. ಈ ವಂಚನೆಯ ಬಗ್ಗೆ ಆಂಧ್ರದ ಕಂದಾಯ ಇಲಾಖೆಯ ಸಹಾಯಕ ಕಾರ್ಯದರ್ಶಿ ಪಿ.ಮುರಳೀಕೃಷ್ಣ ರಾವ್ ನೀಡಿದ ದೂರಿನ ಆಧಾರ ಮೇರೆಗೆ ಸೆ. 21ರಂದು ಆಂಧ್ರ ಪ್ರದೇಶದ ತುಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಆಂಧ್ರ ಪ್ರದೇಶದ ಸರ್ಕಾರ, ಇದರ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನಗರ ಭ್ರಷ್ಟಾಚಾರ ಪತ್ತೆ ದಳ (ಎಸಿಬಿ)ಕ್ಕೆ ಆದೇಶಿಸಿತ್ತು. ಅದರಂತೆ ತನಿಖೆ ನಡೆಸಿದ ಎಸಿಬಿ, ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಆರು ಮಂದಿಯನ್ನು ಬಂಧಿಸಿ ಕರೆದೊಯ್ದಿದೆ.

ಈ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ದಕ್ಷಿಣ ಉಪ ವಿಭಾಗದ ಸಹಾಯಕ ಆಯುಕ್ತ ಕೆ.ಯು.ಬೆಳ್ಳಿಯಪ್ಪ, ಆಂಧ್ರ ಪ್ರದೇಶದ ಪೊಲೀಸರು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಆರು ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ಕಾರ್ಯಾಚರಣೆಗೆ ನಮ್ಮ ಪೊಲೀಸರು ಸಹಕಾರ ನೀಡಿದ್ದಾರೆ ಎಂದಿದ್ದಾರೆ.

ABOUT THE AUTHOR

...view details