ಕರ್ನಾಟಕ

karnataka

ಬೆಳ್ಳಂಬೆಳಗ್ಗೆ ಬೆಣ್ಣೆನಗರಿಯಲ್ಲಿ ಎಸಿಬಿ ದಾಳಿ: ಉಪ ನಿರ್ದೇಶಕ ಕೆ.ಎಂ. ಪ್ರಥಮ್ ನಿವಾಸಗಳ ತಲಾಶ್​

By

Published : Mar 9, 2021, 9:50 AM IST

Updated : Mar 9, 2021, 10:08 AM IST

ದಾವಣಗೆರೆ ವಿಭಾಗದ ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆಯ ಉಪ ನಿರ್ದೇಶಕ ಕೆ.ಎಂ. ಪ್ರಥಮ್​ ಅವರ ಕಚೇರಿ ಹಾಗೂ ಬೆಂಗಳೂರಿನ ಸಂಜಯ ನಗರದ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

acb raids officials  in davangere
ಎಸಿಬಿ ದಾಳಿ

ದಾವಣಗೆರೆ: ಜಿಲ್ಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಬೆಳಗ್ಗೆಯಿಂದಲೇ ಎಸಿಬಿ ದಾಳಿ ಆರಂಭವಾಗಿದ್ದು, ಫ್ಯಾಕ್ಟರಿ ಮತ್ತು ಬಾಯ್ಲರ್​ ಇಲಾಖೆಯ ಉಪ ನಿರ್ದೇಶಕ ಕೆ.ಎಂ. ಪ್ರಥಮ್​ ಅವರ ಕಚೇರಿ ಮೇಲೆ ದಾಳಿ ಮಾಡಿದರು. ದಾವಣಗೆರೆ ಕಚೇರಿ ಹಾಗೂ ಬೆಂಗಳೂರಿನ ಸಂಜಯ ನಗರದ ಅವರ ಮನೆ ಮತ್ತು ಅವರ ತಾಯಿ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದರು.

ಎಸಿಬಿ ದಾಳಿ

ದಾವಣಗೆರೆ ಎಸಿಬಿ ಎಸ್​ಪಿ ಜಯಪ್ರಕಾಶ್ ನೇತೃತ್ವದಲ್ಲಿ ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿ ಅಧಿಕಾರಿಗಳು ಕಚೇರಿಯಲ್ಲಿ ಕಡತ ಪರಿಶೀಲನೆ ಮಾಡಿದರು. ದಾವಣಗೆರೆ ನಗರದ ಪಿಬಿ ರಸ್ತೆಯ ಹಳೇ ಅಪೂರ್ವ ಹೋಟೆಲ್ ಹಿಂಭಾಗ ಇರುವ ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆಯ ಮೇಲೂ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದರು.

ಇದನ್ನೂ ಓದಿ:ತಮಿಳುನಾಡು ಪಟಾಕಿ ಕಾರ್ಖಾನೆ ದುರಂತ: ಮೃತರ ಸಂಖ್ಯೆ 25ಕ್ಕೆ ಏರಿಕೆ

Last Updated : Mar 9, 2021, 10:08 AM IST

ABOUT THE AUTHOR

...view details