ಕರ್ನಾಟಕ

karnataka

ಅತ್ಯಂತ ಹೆಚ್ಚು‌ ಭ್ರಷ್ಟಾಚಾರದಲ್ಲಿ ಮುಳುಗಿದ ಪಾರ್ಟಿ ಕಾಂಗ್ರೆಸ್.. ಅರುಣ್ ಸಿಂಗ್ ವಾಗ್ದಾಳಿ

By

Published : Nov 9, 2022, 6:20 PM IST

ಸಿಎಂ ಬೊಮ್ಮಾಯಿ ಅಂದರೆ ಕಾಮನ್ ಮ್ಯಾನ್, ರೈತರಿಗೋಸ್ಕರ ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

kn_dvg
ಅರುಣ್ ಸಿಂಗ್

ದಾವಣಗೆರೆ:ದೇಶದದಲ್ಲಿ ಅತ್ಯಂತ ಹೆಚ್ಚು‌ ಭ್ರಷ್ಟಾಚಾರದಲ್ಲಿ ಮುಳುಗಿದ ಪಾರ್ಟಿ ಅಂದರೆ ಅದು ಕಾಂಗ್ರೆಸ್ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟೀಕಿಸಿದರು.

ದಾವಣಗೆರೆಯಲ್ಲಿ ನಡಯುತ್ತಿರುವ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಭೆಗೆ ತೆರಳುವ ಮುನ್ನ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಬಳಿ ಯಾವುದೇ ವಿಚಾರ ಇಲ್ಲ. ಅಂದು ನಮ್ಮ ವಿರುದ್ಧ ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ ಅಂತಾ ಸುಳ್ಳು ಆರೋಪ ಮಾಡುತ್ತಿದ್ದರು. ಭ್ರಷ್ಟಾಚಾರದ ತಾಯಿಬೇರು ಅಂದ್ರೆ ಕಾಂಗ್ರೆಸ್. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪಿಎಸ್ಐ, ಶಿಕ್ಷಕರ ನೇಮಕಾತಿ ಹಗರಣಗಳು ನಡೆದಿವೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಸಿಎಂ ಬೊಮ್ಮಾಯಿ ಅಂದ್ರೆ ಕಾಮನ್ ಮ್ಯಾನ್. ರೈತರಿಗೋಸ್ಕರ ಕೆಲಸ ಮಾಡುತ್ತಿದ್ದಾರೆ. ರೈತರ ಮಕ್ಕಳಿಗೆ ಶಿಷ್ಯವೇತನ ನೀಡಿದ್ದಾರೆ. ಸಿಎಂ ವಿರುದ್ಧ ಆರೋಪ ಮಾಡಿದರೆ ಅದು ಜನ ಸಾಮಾನ್ಯರ ವಿರುದ್ಧ ಆರೋಪ ಮಾಡಿದಂತೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಬಡ ಜನತೆಗೆ ನೀಡುವ ಅನ್ನ ಭಾಗ್ಯದ ಅಕ್ಕಿಯಲ್ಲಿ ಸಹ ಭ್ರಷ್ಟಾಚಾರ ನಡೆದಿದೆ ಎಂದು ಅರುಣ್​ ಸಿಂಗ್​ ಆರೋಪಿಸಿದರು.

ಇನ್ನು, ಈಗಾಗಲೇ ಬಿಜೆಪಿ ಹೈಕಮಾಂಡ್​ ಜೊತೆ ಮುನಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ ಅರುಣ್ ಸಿಂಗ್, ಈ ಬಗ್ಗೆ ನನಗೆ ಮಾಹಿತಿ ಇಲ್ಲಾ ಎಂದರು. ಬಳಿಕ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ಮಾಧ್ಯಮ‌ ಪ್ರತಿನಿಧಿಗಳು ಪ್ರಶ್ನೆ ಕೇಳುತ್ತಿದ್ದಂತೆ ಎಚ್ಚತ್ತುಕೊಂಡ ಅರುಣ್ ಸಿಂಗ್, ಎಲ್ಲರೂ ಸೇರಿ ಕರ್ನಾಟಕದಲ್ಲಿ ಬಿಜೆಪಿ‌ ಬಲಪಡಿಸಬೇಕಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಜಾರಕಿಹೊಳಿ ಸವಾಲನ್ನು ಬಿಜೆಪಿ ಸ್ವೀಕಾರ ಮಾಡಲಿ: ಪ್ರಿಯಾಂಕ್ ಖರ್ಗೆ

ABOUT THE AUTHOR

...view details