ಕರ್ನಾಟಕ

karnataka

2ಎ ಮೀಸಲಾತಿಗೆ ಒತ್ತಾಯಿಸಿ ನ. 10ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ಬಸವ ಜಯಮೃತ್ಯುಂಜಯ ಶ್ರೀ

By ETV Bharat Karnataka Team

Published : Nov 2, 2023, 5:06 PM IST

Updated : Nov 2, 2023, 5:35 PM IST

ಜಾತಿ ಗಣತಿ ಬಿಡುಗಡೆ ಬಗ್ಗೆ ಯಾವುದೇ ವಿರೋಧ ಇಲ್ಲ. ಜಾತಿ ಗಣತಿ ಪ್ರಾಮಾಣಿಕವಾಗಿರಲಿ. ಎಲ್ಲ ಸಮುದಾಯದ ಜನರಿಗೂ ನ್ಯಾಯ ಸಿಗಲಿ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

Basava Jaya mruthyunjaya Swamiji spoke at the news conference.
ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಬಸವ ಜಯಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು

ದಾವಣಗೆರೆ:2ಎ ಮೀಸಲಾತಿಗೆ ನವೆಂಬರ್ 10 ರಂದು ರಾಷ್ಟ್ರೀಯ ಹೆದ್ದಾರಿ ತಡೆ ಮಾಡಲಾಗುವುದು. ದಾವಣಗೆರೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸುವ ಮೂಲಕ ಪ್ರತಿಭಟನೆ ಮಾಡ್ತೇವಿ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, 2 ಎ ಮೀಸಲಾತಿ ಜೊತೆ ಲಿಂಗಾಯತ ಉಪಪಂಗಡಗಳನ್ನು ಸೇರಿಸಿ ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸಲಾಗುವುದು. ಹಿಂದಿನ ಸರ್ಕಾರ ಮೀಸಲಾತಿ ಘೋಷಣೆ ಮಾಡಿತು. ಅದರೆ ನೀತಿ ಸಂಹಿತೆ ಹಿನ್ನೆಲೆ ಜಾರಿಯಾಗಲಿಲ್ಲ. 2D ಮೀಸಲಾತಿ ಆಗ ಅನುಷ್ಟಾನಕ್ಕೆ ಬರಲು ಸಾಧ್ಯವಾಗಲಿಲ್ಲ.

ಈ ಸರ್ಕಾರಕ್ಕೆ ಕೂಡ ಪಂಚಮಸಾಲಿ ಸಮಾಜದ ಋಣ ಇದೆ. ಸರ್ಕಾರದ ಮನೆ ಬಾಗಿಲಿಗೆ ಹೋಗಿ ಕೇಳುವುದಕ್ಕಿಂತ ಹೋರಾಟ ಮಾಡುವುದು ಲೇಸು ಎಂದು ಕೊಂಡಿದ್ದೇವೆ. ಸರ್ಕಾರ ಈಗ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಾಗಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೂತು ಇಷ್ಟಲಿಂಗ ಪೂಜೆಯ ಮೂಲಕ ಪ್ರತಿಭಟನೆ ಶುರು ಮಾಡಲಾಗುವುದು ಎಂದು ತಿಳಿಸಿದರು.

ಈ ಸರ್ಕಾರ ಗ್ಯಾರೆಂಟಿ ಯೋಜನೆ ಬಗ್ಗೆ ಯೋಚಿಸದೇ. ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ, ನಮ್ಮ‌ ಸಮುದಾಯಕ್ಕೆ 2ಎ ಮೀಸಲಾತಿ ಕೊಡಿ ಎಂದು ಮನವಿ ಮಾಡುತ್ತೇವೆ. ಲೋಕಸಭೆ ಚುನಾವಣೆಯೊಳಗೆ ನಮಗೆ ಮೀಸಲಾತಿ ನೀಡಬೇಕು. ಇಲ್ಲವಾದರೆ ಲೋಕಸಭೆ ಚುನಾವಣೆಗೆ ಬಹಳ ಹೊಡೆತ ಬೀಳುತ್ತದೆ. 2 ಎ ಮೀಸಲಾತಿಗೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯಲ್ಲಿ ಎಲ್ಲ ಕಡೆ ಸಭೆ ಮಾಡಿ‌ ಜಾಗೃತಿ ಮೂಡಿಸಲಾಗುವುದು ಎಂದು ಸರ್ಕಾರಕ್ಕೆ ಕೂಡಲಸಂಗಮದ ಶ್ರೀಗಳು ಎಚ್ಚರಿಕೆ ನೀಡಿದರು.‌

ಜಾತಿಗಣತಿ ಪ್ರಾಮಾಣಿಕವಾಗಿರಲಿ:ಜಾತಿ ಗಣತಿ ಬಿಡುಗಡೆ ಬಗ್ಗೆ ಯಾವುದೇ ವಿರೋಧ ಇಲ್ಲ. ಲಿಂಗಾಯತ - ಒಕ್ಕಲಿಗ ಸಮಾಜದ ಜನರಲ್ಲಿ ಆತಂಕ ಇದೆ. ಎಲ್ಲಿ ನಮ್ಮ ಸಮಾಜ ಕಡಿಮೆ ತೋರಿಸಿದ್ದಾರೆ ಎಂದು ಅತಂಕದಲ್ಲಿ ಇದ್ದಾರೆ. ಸರ್ಕಾರ ಎರಡು ಸಮಾಜದ ಶಾಸಕರನ್ನು ಸೇರಿಸಿ ಸಭೆ ಮಾಡಿ ಮನವರಿಕೆ ಮಾಡಿಕೊಳ್ಳಲಿ. ಲಿಂಗಾಯತ ಒಳ ಪಂಗಡದವರು ಎಲ್ಲಿ ಸೌಲಭ್ಯ ಕಟ್ ಆಗುತ್ತದೆ ಎಂದು ಲಿಂಗಾಯತ ಎಂದು ಬರೆಸಿಲ್ಲ,‌‌ ಇದರಿಂದ ಲಿಂಗಾಯತ ಸಮುದಾಯದ ಸಂಖ್ಯೆ ಕಡಿಮೆಯಾಗಿದೆ ಎನ್ನುವುದು ನಮ್ಮ ಆತಂಕ. ಜಾತಿ ಗಣತಿ ಪ್ರಾಮಾಣಿಕವಾಗಿರಲಿ ಎಲ್ಲಾ ಸಮುದಾಯಕ್ಕೂ ನ್ಯಾಯ ಸಿಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

2ಎ ಮೀಸಲಾತಿ ನ್ಯಾ ಜಯಪ್ರಕಾಶ್ ಹೆಗಡೆ ವರದಿ .. ಜಯಪ್ರಕಾಶ್ ಹೆಗಡೆಯವರ ಮಧ್ಯಂತರ ವರದಿ ನಮ್ಮ‌ಪರ ಬಂದಿದೆ. ಆದರೆ ಆಗ ಕೊಡಬೇಕಿತ್ತು ಕೊಟ್ಟರೂ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. 2ಎ ಮೀಸಲಾತಿಯಿಂದ ಅಲ್ಲಿರುವ ಜಾತಿಗಳಿಗೆ ಅನ್ಯಾಯವಾಗುತ್ತವೆ ಎಂದುಕೊಂಡಿದ್ದಾರೆ. ಯಾರಿಗೂ ಅನ್ಯಾಯವಾಗದಂತೆ ಮೀಸಲಾತಿ ನೀಡಿ ಎಂದು ಆಗ್ರಹಿಸಿದರು.

ಇದನ್ನೂಓದಿ:ನಿರುದ್ಯೋಗ ನಿವಾರಣೆಗೆ ಶ್ರಮಿಸುವಂತೆ ಸಿಎಂಗೆ ನಿವೃತ್ತ ನ್ಯಾ.ಗೋಪಾಲಗೌಡ ಮನವಿ

Last Updated : Nov 2, 2023, 5:35 PM IST

ABOUT THE AUTHOR

...view details