ಕರ್ನಾಟಕ

karnataka

ಶ್ಯಾಮನೂರು ಶಿವಶಂಕರಪ್ಪ ಪುತ್ರನಿಗೆ ಸಚಿವ ಸ್ಥಾನ: ಪ್ರಮಾಣವಚನ ಸ್ವೀಕರಿಸಿದ ಎಸ್​ ಎಸ್​ ಮಲ್ಲಿಕಾರ್ಜುನ್

By

Published : May 27, 2023, 1:23 PM IST

4 ಬಾರಿ ಶಾಸಕರಾಗಿ ಆಯ್ಕೆಯಾದ ಎಸ್‌.ಎಸ್‌. ಮಲ್ಲಿಕಾರ್ಜುನ್ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಸೇರುವಲ್ಲಿ ಯಶಸ್ವಿಯಾಗಿದ್ದಾರೆ.

ss mallikarjun take oath as cabinet minister
ಪ್ರಮಾಣ ವಚನ ಸ್ವೀಕರಿಸಿದ ಎಸ್.ಎಸ್ ಮಲ್ಲಿಕಾರ್ಜುನ

ಪ್ರಮಾಣ ವಚನ ಸ್ವೀಕರಿಸಿದ ಎಸ್ ಎಸ್ ಮಲ್ಲಿಕಾರ್ಜುನ

ಬೆಂಗಳೂರು/ದಾವಣಗೆರೆ: ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್ ಮಲ್ಲಿಕಾರ್ಜುನ ಅವರು ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರಿಗೆ ಈ ಬಾರಿ ಮತ್ತೊಮ್ಮೆ ಸಚಿವ ಸ್ಥಾನ ದಕ್ಕಿದೆ.

2013ರಲ್ಲಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮಲ್ಲಿಕಾರ್ಜುನ ಅವರಿಗೆ ಹೈ ಕಮಾಂಡ್ ಮತ್ತೊಮ್ಮೆ ಮಣೆ ಹಾಕಿದೆ. ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ್ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಜಿಲ್ಲೆಯಲ್ಲಿ ನಡೆದ ಸಿದ್ದರಾಮಯ್ಯ ಅಮೃತ ಮಹೋತ್ಸವದ ಯಶಸ್ವಿಗೆ ಕಾರಣಕರ್ತರಾಗಿದ್ದರು.

ಇದನ್ನೂ ಓದಿ:ಮೂರನೇ ಬಾರಿಯೂ ಅಜಯ್​ ಸಿಂಗ್​ಗೆ ತಪ್ಪಿದ ಸಚಿವ ಸ್ಥಾನ

ರಾಜಕೀಯ ಜೀವನ:ಬಿಕಾಂ ಪದವೀಧರರಾಗಿರುವ ಮಲ್ಲಿಕಾರ್ಜುನ ಅವರು 1989ರಲ್ಲಿ ದಾವಣಗೆರೆ ಮತ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1999ರಲ್ಲಿ ದಾವಣಗೆರೆ ಉತ್ತರ ಹಾಗೂ ದಕ್ಷಿಣ ಕ್ಷೇತ್ರಗಳಾಗಿ ವಿಂಗಡಣೆಯಾದ ಬಳಿಕ ಗೆಲುವು ಸಾಧಿಸಿ ಎಸ್.ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವರಾಗಿದ್ದರು.

ಬಳಿಕ 2013ರಲ್ಲಿ ಗೆಲುವು ಸಾಧಿಸಿದ್ದರು. 2016ರಲ್ಲಿ ಶಾಮನೂರು ಶಿವಶಂಕರಪ್ಪ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ‌ ನೀಡಲಾಗಿತ್ತು. ಅಂದು ಅವರು ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾಗಿದ್ದರು. 2018 ರಲ್ಲಿ ಬಿಜೆಪಿ ಶಾಸಕ ಎಸ್. ಎ ರವೀಂದ್ರನಾಥ್ ವಿರುದ್ಧ ಸೋಲುಂಡ ಅವರು ಇದೀಗ 2023ರ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ:ಶಾಮನೂರು ಶಿವಶಂಕರಪ್ಪಗೆ ಸಿಎಂ ಸ್ಥಾನ ಕೊಡಿ: ಅಭಿಮಾನಿಗಳ ಆಗ್ರಹ

ಪತ್ನಿ, ಮಕ್ಕಳು ಸಾಥ್​: 2023ರ ಚುನಾವಣೆಯಲ್ಲಿ ಶಾಸಕರಾದ ಮಲ್ಲಿಕಾರ್ಜುನ ಅವರ ಗೆಲುವಿನ ಹಿಂದೆ ಪತ್ನಿ ಪ್ರಭಾ ಮಲ್ಲಿಕಾರ್ಜುನ, ಪುತ್ರಿ ಶ್ರೇಷ್ಠ ಶಾಮನೂರು ಹಾಗೂ ಪುತ್ರ ಸಮರ್ಥ್ ಶಾಮನೂರು ಅವರ ಶ್ರಮವಿದೆ. ಕ್ಷೇತ್ರದಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡು ಪ್ರಚಾರ ಮಾಡಿ ಮಲ್ಲಿಕಾರ್ಜುನ ಅವರನ್ನು ಗೆಲ್ಲಿಸುವಲ್ಲಿ ಸಫಲರಾಗಿದ್ದಾರೆ.

ಇದನ್ನೂ ಓದಿ:ಮಾಜಿ ಶಾಸಕ ಬೋಸರಾಜುಗೆ ಒಲಿದ ಸಚಿವ ಸ್ಥಾನ

ನೂತನ ಸಚಿವರಿಂದ ಪ್ರಮಾಣ ವಚನ:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಜೊತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಂಪುಟ ವಿಸ್ತರಣೆಯ ಕಗ್ಗಂಟನ್ನು ಬಗೆಹರಿಸಿದೆ. ಇಂದು ರಾಜಭವನದ ಗಾಜಿನ ಮನೆಯಲ್ಲಿ ಕಾಂಗ್ರೆಸ್​ನ 24 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಿತು. ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ನೂತನ ಸಚಿವರಲ್ಲಿ 8 ಮಂದಿ ಶಾಸಕರು ಇದೇ ಮೊದಲ ಬಾರಿಗೆ ಸಚಿವರಾಗುತ್ತಿದ್ದಾರೆ.

ಇದನ್ನೂ ಓದಿ:ಇಂದು ನೂತನ‌ ಸಚಿವರ ಪ್ರಮಾಣವಚನ: ರಾಜಭವನದ ಸುತ್ತಮುತ್ತ ಸಂಚಾರ ಮಾರ್ಗಗಳಲ್ಲಿ ಬದಲಾವಣೆ

ABOUT THE AUTHOR

...view details