ಕರ್ನಾಟಕ

karnataka

ಒಂದೇ ಕುಟುಂಬದ ಮೂವರು ಆತ್ಮಹತ್ಯೆ... ದಾವಣಗೆರೆಯಲ್ಲಿ ಹೃದಯ ವಿದ್ರಾವಕ ಘಟನೆ

By

Published : Jan 29, 2021, 3:52 PM IST

ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ.

suicide
ಘಟನೆ

ದಾವಣಗೆರೆ- ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ.

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೃತರನ್ನು ತಾಯಿ ಕಮಲಮ್ಮ, ಮಗ ಸಂಜಯ್ (21), ಮಗಳು ಶೃತಿ (24) ಎಂದು ಗುರುತಿಸಲಾಗಿದೆ. ಸೂಳೆಕೆರೆ ಚಾನಲ್​ಗೆ ಬಿದ್ದು ಮೃತಪಟ್ಟಿದ್ದಾರೆ. ಸದ್ಯ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.

ಶೃತಿ ಮದುವೆ ವಿಚಾರಕ್ಕೆ ಕುಟುಂಬದ ಸದಸ್ಯರ ನಡುವೆ ಮನಸ್ತಾಪ ಆಗಿದ್ದರಿಂದ‌ ಆತ್ಮಹತ್ಯೆಗೆ ಮದುವೆ ವಿಚಾರವೇ ಕಾರಣ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details