ಕರ್ನಾಟಕ

karnataka

ಬೆಳೆ ವಿಮೆ ಪ್ರಿಮಿಯಂ ಹಣ ವರ್ಗಾಯಿಸದ ಬ್ಯಾಂಕ್​ಗೆ 50 ಸಾವಿರ ರೂ ದಂಡ

By

Published : Sep 8, 2022, 5:14 PM IST

ಕೃಷಿಕ ಬಸಪ್ಪ ಚೆನ್ನಪ್ಪ ಕಾಮಧೇನು ಎಂಬುವರು 2018-19ನೇ ಸಾಲಿನಲ್ಲಿ ತಮ್ಮ ಮಾವಿನ ಬೆಳೆಗೆ ವಿಮಾ ಸೌಲಭ್ಯ ಬಯಸಿ 3,399 ರೂ. ಪ್ರಿಮಿಯಂ ಅನ್ನು ಕಲಘಟಗಿಯ ಬ್ಯಾಂಕ್ ಆಫ್ ಬರೋಡಾದಲ್ಲಿ ಪಾವತಿಸಿದ್ದರು.

Dharwada
ಧಾರವಾಡ

ಧಾರವಾಡ:ರೈತರೊಬ್ಬರು ತಮ್ಮ ಮಾವಿನ ಬೆಳೆಗೆ ವಿಮಾ ಸೌಲಭ್ಯ ಪಡೆಯಲು ಪಾವತಿಸಿದ್ದ ಪ್ರಿಮಿಯಂ ಹಣವನ್ನು ಅಗತ್ಯ ವಿವರಗಳೊಂದಿಗೆ ವಿಮಾ ಕಂಪನಿಗೆ ವರ್ಗಾಯಿಸದೇ ನಿರ್ಲಕ್ಷ್ಯ ತೋರಿದ ಕಲಘಟಗಿಯ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ಇಲ್ಲಿನ ಜಿಲ್ಲ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ 50 ಸಾವಿರ ರೂ ದಂಡ ವಿಧಿಸಿದೆ.

ಕಲಘಟಗಿ ತಾಲೂಕು ಯಲಿವಾಳ ಗ್ರಾಮದ ಕೃಷಿಕ ಬಸಪ್ಪ ಚೆನ್ನಪ್ಪ ಕಾಮಧೇನು ಎಂಬುವರು 2018-19ನೇ ಸಾಲಿನಲ್ಲಿ ತಮ್ಮ ಮಾವಿನ ಬೆಳೆಗೆ ವಿಮಾ ಸೌಲಭ್ಯ ಬಯಸಿ 3,399 ರೂ. ಪ್ರಿಮಿಯಂ ಅನ್ನು ಕಲಘಟಗಿಯ ಬ್ಯಾಂಕ್ ಆಫ್ ಬರೋಡಾದಲ್ಲಿ ಪಾವತಿಸಿದ್ದರು. ಬ್ಯಾಂಕ್​ ವಿಮಾ ಕಂಪನಿಗೆ ಹಣದೊಂದಿಗೆ ರೈತ‌ನ ವಿವರಗಳನ್ನು ಕಳುಹಿಸದೇ ನಿರ್ಲಕ್ಷ್ಯ ಹಾಗೂ ಸೇವಾ ನ್ಯೂನ್ಯತೆ ಎಸಗಿದೆ ಎಂದು ಆಯೋಗದಲ್ಲಿ ದೂರು ದಾಖಲಿಸಿದ್ದರು.

ವಿಚಾರಣೆ ನಡೆಸಿದ ಆಯೋಗವು ಕಲಘಟಗಿಯ ಬ್ಯಾಂಕ್ ಆಫ್ ಬರೋಡಾ ಶಾಖೆಗೆ 40 ಸಾವಿರ ರೂ. ದಂಡ ಮತ್ತು ಪರಿಹಾರ ಹಾಗೂ ಪ್ರಕರಣ ನ್ಯಾಯಾಲಯದ ಖರ್ಚಿಗೆ 10 ಸಾವಿರ ರೂ.ಗಳನ್ನು ಪಾವತಿಸುವಂತೆ ಆದೇಶಿಸಿದೆ. ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಸದಸ್ಯರಾದ ವಿ.ಅ. ಬೋಳಶೆಟ್ಟಿ ಮತ್ತು ಪಿ.ಸಿ.ಹಿರೇಮಠ ಈ ತೀರ್ಪು ನೀಡಿದ್ದಾರೆ.

ಇದನ್ನೂ ಓದಿ:ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯಗೊಳಿಸಿದ ಬ್ಯಾಂಕಿಗೆ 85 ಸಾವಿರ ರೂ. ದಂಡ

ABOUT THE AUTHOR

...view details