ಹುಬ್ಬಳ್ಳಿ:ಯಾವುದೇ ಚುನಾವಣೆಯನ್ನು ಕಣ್ಮುಂದೆ ಇಟ್ಟುಕೊಂಡು ಈ ರೀತಿ ತೀರ್ಮಾನ ಮಾಡಿಲ್ಲ. ನಮ್ಮ ಕಾಯ್ದೆಯಲ್ಲಿ ಲೋಪದೋಷ ಇಲ್ಲ ಅಂತ ಹೇಳಿದ್ದು ನಿಜ. ಆದರೆ, ರೈತರ ಹಿತಕ್ಕಾಗಿ ಮೂರು ಕೃಷಿ ಕಾನೂನುಗಳು ರದ್ದು (Repeal of three agriculture laws) ಮಾಡಲಾಗಿದೆ. ಇದರಲ್ಲಿ ಸೋಲು ಗೆಲುವಿನ ಪ್ರಶ್ನೆ ಇಲ್ಲ, ಇದು ಉತ್ತಮ ನಿರ್ಧಾರ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(Ex minister B S yeddyurappa) ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಠಿ(yeddyurappa press meet in hubballi) ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಮೂರು ಕೃಷಿ ಕಾನೂನುಗಳು ರದ್ದು ಮಾಡುವ ಐತಿಹಾಸಿಕ ತೀರ್ಮಾನ ತೆಗೆದುಕೊಂಡು ರೈತ ಸಮೂಹಕ್ಕೆ ಖುಷಿ ನೀಡಿದೆ. ಕೃಷಿ ಕಾಯ್ದೆ ಹೋರಾಟದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇವೆ ಎಂದು ಇದೇ ವೇಳೆ ಮಾಜಿ ಸಿಎಂ ಬಿಎಸ್ವೈ ಹೇಳಿದರು.
ಚುನಾವಣೆಗಾಗಿ ಅಲ್ಲ ಈ ನಿರ್ಧಾರ:
ಚುನಾವಣೆ ಆಧಾರದ ಮೇಲೆ ಈ ನಿರ್ಧಾರ ಕೈಗೊಂಡಿಲ್ಲ. ಆ ಸಂದರ್ಭದಲ್ಲಿ ಏನೆಲ್ಲಾ ಆಯ್ತು ಎನ್ನುವುದು ಬೇರೆ. ಆದರೆ, ಒಣ ಪ್ರತಿಷ್ಠೆಗೆ ಒಳಗಾಗದೇ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಿಎಸ್ವೈ ಹೇಳಿದರು.
ಬಿಟ್ ಕಾಯಿನ್(bitcoin scam) ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಪ್ರಧಾನಿ ಸಹ ಹೇಳಿದ್ದಾರೆ. ಇದೊಂದು ಅಕ್ಷಮ್ಯ ಅಪರಾಧ, ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ. ರಾಕೇಶ್ ಸಿದ್ದರಾಮಯ್ಯ(rakesh siddaramaiah) ಅವರ ಹೆಸರು ಪ್ರಸ್ತಾಪ ಮಾಡಿದ್ದರಲ್ಲಿ ತಪ್ಪೇನು ಇಲ್ಲ. ಎಲ್ಲ ಸಮಗ್ರವಾದ ತನಿಖೆಯಾಗಬೇಕು ಎಂದರು.
ಕಡಿವಾಣ ನನಗಿಲ್ಲ:
ನನಗೆ ಯಾವುದೇ ಕಡಿವಾಣ ಹಾಕಿಲ್ಲ. ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೂ ಕೂಡ ಹಿಂದೆ ಮುಂದೆ ನೋಡುತ್ತಾರೆ. ಆದರೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದೇನೆ. ರಾಜ್ಯದ ಉದ್ದಗಲಕ್ಕೂ ಸಹ ಪ್ರವಾಸ ಮಾಡುತ್ತಿದ್ದೇನೆ. ಎಲ್ಲಿಯೇ ಹೋದರೂ ನಮ್ಮ ಯಡಿಯೂರಪ್ಪ ಅಂತ ಅಭಿಮಾನ ತೋರಿಸುತ್ತಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಬೆಳೆಹಾನಿ ಬಗ್ಗೆ ಮಾತನಾಡಿದ ಅವರು, ಇತ್ತೀಚೆಗೆ ಮಳೆಯಿಂದಾಗಿ(karnataka rain) ರೈತರ ಬೆಳೆ ಸಂಪೂರ್ಣ ನಾಶವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಪರವಾಗಿವೆ. ಅವರ ಸಂಕಷ್ಟಕ್ಕೆ ನಾವು ಸಹ ಸಹಕರಿಸಲಿದ್ದೇವೆ. ಈ ಮಳೆಯ ಅಬ್ಬರದಿಂದ ಬಹಳ ದೊಡ್ಡ ಪ್ರಮಾಣದಲ್ಲಿ ಸಮಸ್ಯೆಯಾಗಿದೆ. ಬೆಂಗಳೂರು ಸೇರಿದಂತೆ ಎಲ್ಲ ಕಡೆ ಇದೆ ಪರಿಸ್ಥಿತಿ ಇದೆ ಎಂದರು.
ಇದನ್ನೂ ಓದಿ:Big Breaking.. ಮೂರು ಕೃಷಿ ಕಾನೂನುಗಳು ರದ್ದು: ಪ್ರಧಾನಿ ಮೋದಿ ಘೋಷಣೆ..!