ಕರ್ನಾಟಕ

karnataka

ಕೃಷ್ಣಾ ಮೇಲ್ದಂಡೆ ವಿಚಾರ: ನಮ್ಮ ಪರವೇ ತೀರ್ಪು ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಬೊಮ್ಮಾಯಿ

By

Published : Jul 29, 2021, 1:44 PM IST

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ, ರಂಭಾಪುರಿ ಶ್ರೀ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಅಲ್ಲದೇ, ಕೃಷ್ಣಾ ಮೇಲ್ದಂಡೆ ನಿರ್ಮಾಣ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ಬ್ರಿಜೇಶ್ ಕುಮಾರ್ ಮಿಶ್ರಾ ನ್ಯಾಯಧಿಕರಣ 524 ಮೀಟರ್​​ಗೆ ಹೆಚ್ಚಿಸಲು ಒಪ್ಪಿಗೆ ನೀಡಿದೆ. ಯುಕೆಪಿ ಮೂರನೇ ಹಂತದ ಆರ್‌ ಆಂಡ್ ಆರ್ ರೂಪಿಸಬೇಕಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕೃಷ್ಣಾ ಮೇಲ್ದಂಡೆ ವಿಚಾರ: ತೀರ್ಪು ನಮ್ಮ ಪರ ಬರಲಿದೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ

ನಗರದಲ್ಲಿ ಮಾತನಾಡಿದ ಅವರು, ಅಧಿಸೂಚನೆ ಹೊರಡಿಸುವ ಹಂತದಲ್ಲಿ ಆಂಧ್ರಪ್ರದೇಶ‌ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಪ್ರಕರಣ ಕೋರ್ಟ್​​ನಲ್ಲಿರುವುದರಿಂದ ವಿಳಂಬವಾಗುತ್ತಿದೆ. ಒಂದೆರಡು ತಿಂಗಳಲ್ಲಿ ಪ್ರಕರಣ ವಿಚಾರಣೆಗೆ ಬರಲಿದೆ. ಮಹಾರಾಷ್ಟ್ರ ನಾವು ಸೇರಿ ಕಾನೂನು ಹೋರಾಟ ಮಾಡುತ್ತೇವೆ. ನಮ್ಮ ಪರವಾಗಿ ತೀರ್ಪು ಬರುವ ವಿಶ್ವಾಸ ನನಗಿದೆ. ತೀರ್ಪು ಬಂದ ಕೂಡಲೇ ಕೆಲಸ ಆರಂಭಿಸಲಾಗುವುದು ಎಂದರು.

ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ

ರಂಭಾಪುರಿ ಶ್ರೀ ಭೇಟಿ ಮಾಡಿದ ಸಿಎಂ

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಎಂ ಬೊಮ್ಮಾಯಿ ರಂಭಾಪುರಿ ವೀರ ಸಿಂಹಾಸನಾಧೀಶ್ವರ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ಈ ವೇಳೆ ಸ್ವಾಮೀಜಿ, ನೂತನ ಸಿಎಂಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಅಲ್ಲದೇ, ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಸಲಹೆ ನೀಡಿದರು.

ಸಿಎಂ ಸನ್ಮಾನಿಸಿದ ರಂಭಾಪುರಿ ಶ್ರೀ

ಇದನ್ನೂ ಓದಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ಇಲ್ಲಿನ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಸಿಎಂ ಬೊಮ್ಮಾಯಿ ಭರವಸೆ

ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾಗಿದ್ದು, ಸಿಎಂಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.

ಸಿಎಂ ಸ್ವಾಗತಿಸಿದ ಹೊರಟ್ಟಿ

ABOUT THE AUTHOR

...view details