ಕರ್ನಾಟಕ

karnataka

ಧಾರವಾಡ: ಖಾಸಗಿ ಆಸ್ಪತ್ರೆಗೆ ದಾಖಲಾಗುವ ಬಡ ರೋಗಿಗಳ ಕೊರೊನಾ ಟೆಸ್ಟ್ ಉಚಿತ

By

Published : Sep 26, 2020, 10:33 AM IST

ಖಾಸಗಿ ಆಸ್ಪತ್ರೆಗಳಲ್ಲಿ ತಪಾಸಣೆಗೆ ವಿಧಿಸುವ ಶುಲ್ಕ ಭರಿಸಲು ಸಾಧ್ಯವಾಗದ ರೋಗಿಗಳ ಗಂಟಲು ದ್ರವ ಸಂಗ್ರಹಿಸಿ ಸರ್ಕಾರದ ಕಿಮ್ಸ್ ಮತ್ತು ಡಿಮ್ಹಾನ್ಸ್ ಪ್ರಯೋಗಾಲಯಗಳಿಗೆ ಕಳುಹಿಸಿದರೆ ಉಚಿತವಾಗಿ ಪರೀಕ್ಷಿಸಿ ವರದಿ ನೀಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

DC meeting
DC meeting

ಧಾರವಾಡ: ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗುವ ಒಳ ರೋಗಿಗಳು ಹಾಗೂ ಎಲ್ಲಾ ಹೊರ ರೋಗಿಗಳನ್ನು ಕಡ್ಡಾಯವಾಗಿ ತಪಾಸಣೆಗೊಳಪಡಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿ, ಖಾಸಗಿ ಆಸ್ಪತ್ರೆಗಳಲ್ಲಿ ತಪಾಸಣೆಗೆ ವಿಧಿಸುವ ಶುಲ್ಕ ಭರಿಸಲು ಸಾಧ್ಯವಾಗದ ರೋಗಿಗಳ ಗಂಟಲು ದ್ರವ ಸಂಗ್ರಹಿಸಿ ಸರ್ಕಾರದ ಕಿಮ್ಸ್ ಮತ್ತು ಡಿಮ್ಹಾನ್ಸ್ ಪ್ರಯೋಗಾಲಯಗಳಿಗೆ ಕಳುಹಿಸಿದರೆ ಉಚಿತವಾಗಿ ಪರೀಕ್ಷಿಸಿ ವರದಿ ನೀಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕೋವಿಡ್ ತಪಾಸಣೆಯ ಶುಲ್ಕ ಭರಿಸುವ ಸಾಮರ್ಥ್ಯವಿಲ್ಲದವರು ಚಿಕಿತ್ಸೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಗಂಟಲು ದ್ರವ ಸಂಗ್ರಹಣೆ ಸಂದರ್ಭದಲ್ಲಿ ವ್ಯಕ್ತಿಗಳ ಸಮರ್ಪಕ ವಿಳಾಸ, ಸಂಪರ್ಕ ಸಂಖ್ಯೆ ಮತ್ತು ಜಿಲ್ಲೆಯ ಹೆಸರನ್ನು ನಿಖರವಾಗಿ ದಾಖಲಾಗಿಸಬೇಕು. ಅನ್ಯ ಜಿಲ್ಲೆಗಳ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಬೇಕು. ಆದರೆ ಧಾರವಾಡ ಜಿಲ್ಲೆಯ ಹೆಸರಲ್ಲಿ ನೋಂದಾಯಿಸಬಾರದು. ಸೋಂಕಿತ ರೋಗಿಗಳ ಪ್ರಾಥಮಿಕ ಸಂಪರ್ಕದಲ್ಲಿರುವವರು ಹಾಗೂ ಕುಟುಂಬದ ಸದಸ್ಯರನ್ನು ಕೋವಿಡ್ ತಪಾಸಣೆಗೆ ಒಳಪಡಿಸಬೇಕು ಎಂದರು.

ವೆಂಟಿಲೇಟರ್, ಹೈ ಫ್ಲೋ ಆಕ್ಸಿಜನ್ ಉಪಕರಣಗಳ ಪೂರೈಕೆ:
ಖಾಸಗಿ ಆಸ್ಪತ್ರೆಗಳು ಸರ್ಕಾರದಿಂದ ವೆಂಟಿಲೇಟರ್ ಹಾಗೂ ಹೈ ಫ್ಲೋ ಆಕ್ಸಿಜನ್ ಉಪಕರಣಗಳ ನೆರವು ಬಯಸಿದರೆ ತ್ವರಿತವಾಗಿ ಪೂರೈಸಲಾಗುವುದು. ಈ ಕಾರ್ಯಕ್ಕಾಗಿ ಜಿಲ್ಲಾ ಆರ್​​ಸಿಹೆಚ್ ಅಧಿಕಾರಿ ಡಾ. ಎಸ್.ಎಂ.ಹೊನಕೇರಿ ಅವರನ್ನು ಸಂಪರ್ಕಿಸಬಹುದು. ಸೋಂಕು ದೃಢಪಟ್ಟ ವ್ಯಕ್ತಿಗಳಿಗೆ ಆಯುಷ್ಮಾನ್​ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲು ನೋಡಲ್ ಅಧಿಕಾರಿಗಳಾದ ಡಾ. ಸುಜಾತಾ ಹಸವಿಮಠ ಹಾಗೂ ಡಾ. ಶಶಿ ಪಾಟೀಲ ಅವರನ್ನು ಖಾಸಗಿ ಆಸ್ಪತ್ರೆಗಳು ಸಂಪರ್ಕಿಸಬಹುದು ಎಂದು ಡಿಸಿ ತಿಳಿಸಿದರು.

ABOUT THE AUTHOR

...view details