ಕರ್ನಾಟಕ

karnataka

ಡಿಕೆಶಿ ಆಪ್ತನಿಗೆ ಐಟಿ ಶಾಕ್: ದಾಖಲೆ ಪರಿಶೀಲನೆ ಮಾಡುತ್ತಿರುವ ಅಧಿಕಾರಿಗಳು

By

Published : May 8, 2023, 7:18 PM IST

ಧಾರವಾಡದ ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪೂರಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪೂರಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ
ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪೂರಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ

ಧಾರವಾಡ : ಪಶ್ವಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಕ ಚಿಂಚೂರೆ ಬೆಂಬಲಿಗ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್​ ಆಪ್ತನಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಧಾರವಾಡದ ಕಾಂಗ್ರೆಸ್ ಮುಖಂಡ ರಾಬರ್ಟ್ ದದ್ದಾಪೂರಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ಇಲಾಖಾ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ :ಜೆಡಿಎಸ್​​ನದ್ದು ಕುಟುಂಬಸ್ಥರ ನವರತ್ನ ಕಾರ್ಯಕ್ರಮ.. ಸಿದ್ದರಾಮಯ್ಯ ಮಜಾರಾಮಯ್ಯ: ಸಂಸದ ಶ್ರೀನಿವಾಸ್ ಪ್ರಸಾದ್

ಧಾರವಾಡದ ವಿವೇಕಾನಂದ ನಗರದಲ್ಲಿರುವ ರಾಬರ್ಟ್ ದದ್ದಾಪುರಿ ಅವರ ಮನೆಗೆ ಬಂದ 8 ಜನ ಅಧಿಕಾರಿಗಳ ತಂಡ ವಿವಿಧ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದೆ. ರಾಬರ್ಟ್ ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಿಂಚೋರೆ ಅವರೊಂದಿಗೆ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲ ಅವರ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಕೆಪಿಸಿಸಿ ಸದಸ್ಯ ಕೂಡಾ ಆಗಿರುವ ರಾಬರ್ಟ್, ಡಿ.ಕೆ ಶಿವಕುಮಾರ್ ಜೊತೆ ಕೂಡ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

ವಿನಯ್​ ಕುಲಕರ್ಣಿ ಆಪ್ತರ ಮನೆ ಮೇಲೆ ಐಟಿ ರೇಡ್​ : ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಜಿಲ್ಲೆಯ ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್‌ನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ ಕೇಕರೆ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಹಾಗೂ ಈಶ್ವರ ಶಿವಳ್ಳಿ ಅವರ ಮನೆ ಮೇಲೆ ಕೂಡಾ ಐಟಿ ಇಲಾಖೆ ಅಧಿಕಾರಿಗಳ ತಂಡ ದಾಳಿ ಮಾಡಿತ್ತು.

ಇದನ್ನೂ ಓದಿ :ಜೆಡಿಎಸ್ ಅಧಿಕಾರಕ್ಕೆ ಬಂದರೆ ಚಾಚೂ ತಪ್ಪದೆ ಪಂಚರತ್ನ ಯೋಜನೆ ಜಾರಿ : ಹೆಚ್.ಡಿ. ಕುಮಾರಸ್ವಾಮಿ

ಇದಾದ ನಂತರ ವಿನಯ‌್​ ಪರ ಚುನಾವಣಾ ಪ್ರಚಾರದಲ್ಲಿ ಓಡಾಡುತ್ತಿದ್ದ ಧಾರವಾಡ ಗ್ರಾಮೀಣ‌ ಕ್ಷೇತದ ಕಾಂಗ್ರೆಸ್ ಅಧ್ಯಕ್ಷರಾಗಿರುವ ಅರವಿಂದ ಏಗನಗೌಡರ್ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ನಿನ್ನೆ (ಶನಿವಾರ) ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿ ಐಟಿ ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಿತ್ತು. ಅದರಂತೆ ಅರವಿಂದ ಏಗನಗೌಡರ್ ಐಟಿ ಕಚೇರಿಗೆ ತನ್ನ ದಾಖಲೆಗಳನ್ನು ತೆಗೆದುಕೊಂಡು ಬಂದಿದ್ದರು.

ಮಾಜಿ ಸಿಎಂ ಎಸ್​.ಎಂ ಕೃಷ್ಣ ಸಹೋದರಿಗೂ ಐಟಿ ಶಾಕ್​ : ಇನ್ನು ಮಾಜಿ ಮುಖ್ಯಮಂತ್ರಿ ಎಸ್ .ಎಂ.‌ ಕೃಷ್ಣ ಸಹೋದರಿ ಎಸ್.ಎಂ. ಸುನಿತಾ ಅವರ ಮನೆಯಲ್ಲಿಯೂ ಆದಾಯ ತೆರಿಗೆ ಅಧಿಕಾರಿಗಳಿಂದ ಪರಿಶೀಲನೆ ನಡೆದಿತ್ತು. ಕೋರಮಂಗಲದ ಮೊದಲನೇ ಹಂತದಲ್ಲಿರುವ ಭಾಗ್ಮನೆ ಹೆಸರಿನ ಎಸ್.ಎಂ. ಕೃಷ್ಣ ಸಹೋದರಿ ಮನೆ, ಬಾಗ್ಮನೆ ಬಿಲ್ಡರ್ ಕಚೇರಿಗಳು ಟ್ರಾನ್ ಇನ್ಸೈನಿಯಾ ಅಪಾರ್ಟ್ಮೆಂಟ್ ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ :ನನ್ನ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ: ಜಗದೀಶ್​​ ಶೆಟ್ಟರ್​​​​

ABOUT THE AUTHOR

...view details