ಕರ್ನಾಟಕ

karnataka

ಧಾರವಾಡ ಯೋಗೀಶ್ ಗೌಡ ಕೊಲೆ ಪ್ರಕರಣ: ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಸಿಬಿಐ ವಶಕ್ಕೆ

By

Published : Jul 8, 2021, 8:59 AM IST

Updated : Jul 8, 2021, 9:19 AM IST

ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ವಶಕ್ಕೆ ಪಡೆದಿದೆ.

KAS Officer Detained By CBI
ವಿನಯ್ ಕುಲಕರ್ಣಿ ಆಪ್ತ ಸಹಾಯಕ ಸಿಬಿಐ ವಶಕ್ಕೆ

ಧಾರವಾಡ :2016ರ ಜೂನ್​ 15 ರಂದು ನಗರದ ಸಪ್ತಾಪುರದಲ್ಲಿ ನಡೆದಿದ್ದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ವಶಕ್ಕೆ ಪಡೆದಿದೆ.

ಅಧಿಕಾರಿ ಸೋಮು ನ್ಯಾಮಗೌಡ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಮಾಜಿ ಆಪ್ತ ಸಹಾಯಕರಾಗಿದ್ದಾರೆ. ವಿನಯ್ ಕುಲಕರ್ಣಿ ಸಚಿವರಾಗಿದ್ದಾಗ ಸೋಮು ನ್ಯಾಮಗೌಡ ಅವರನ್ನು ಸರ್ಕಾರದಿಂದ ಆಪ್ತ ಸಹಾಯಕರಾಗಿ ನೇಮಕ ಮಾಡಲಾಗಿತ್ತು.

ಓದಿ : ಪತಿಯ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಪತ್ನಿ ಆತ್ಮಹತ್ಯೆ

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋಮು ನ್ಯಾಮಗೌಡ ಅವರು ಈಗಾಗಲೇ 10ಕ್ಕೂ ಹೆಚ್ಚು ಬಾರಿ ಸಿಬಿಐ ವಿಚಾರಣೆ ಎದುರಿಸಿದ್ದಾರೆ. ಇಂದು ಬೆಳಗ್ಗೆ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಹೆಚ್ಚಿನ ವಿಚಾರಣೆಗಾಗಿ ಸಿಬಿಐ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ :

ಧಾರವಾಡ ಜಿಲ್ಲಾ ಪಂಚಾಯತ್​ ಸದಸ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕರಾಗಿದ್ದ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಸಪ್ತಾಪುರದಲ್ಲಿ ಹತ್ಯೆ ಮಾಡಲಾಗಿತ್ತು. ಅವರ ಜಿಮ್​ನ ಹೊರಗೆ ಸುಪಾರಿ ಹಂತಕರು ಮೊದಲಿಗೆ ಕಣ್ಣಿಗೆ ಖಾರದ ಪುಡಿ ಎರಚಿದ್ದರು. ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಬೈಕ್​ನಲ್ಲಿ ಪರಾರಿಯಾಗಿದ್ದರು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಧಾರವಾಡದ 6 ಮಂದಿಯ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ್ದರು. ಬಳಿಕ 2019ರ ಸೆಪ್ಟೆಂಬರ್​ನಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. 2020ರ ನವೆಂಬರ್​ 5ರಂದು ಮಾಜಿ ಸಚಿವ ಕಾಂಗ್ರೆಸ್​ ಮುಖಂಡ ವಿನಯ್​ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು.

ಪ್ರಸ್ತುತ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಸಿಬಿಐ ಬಂಧನದಲ್ಲಿದ್ದಾರೆ. ಇದೀಗ ಸೋಮು ನ್ಯಾಮಗೌಡ ಅವರನ್ನು ವಶಕ್ಕೆ ಪಡೆದುಕೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

Last Updated : Jul 8, 2021, 9:19 AM IST

ABOUT THE AUTHOR

...view details