ಕರ್ನಾಟಕ

karnataka

ಮಾಜಿ ಸಿಎಂಗಳ ವಿರುದ್ಧ ಸಚಿವ ಶೆಟ್ಟರ್​ ವಾಗ್ದಾಳಿ

By

Published : Oct 7, 2019, 8:40 PM IST

ಅಕ್ಕಪಕ್ಕದಲ್ಲಿ ಕೂರುತಿದ್ದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಈಗ ಜಗಳ ಮಾಡುತ್ತಿದ್ದಾರೆ ಎಂದು ಸಚಿವ ಜಗದೀಶ್​ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂಗಳ ವಿರುದ್ಧ ಶೆಟ್ಟರ್​ ವಾಗ್ದಾಳಿ

ಹುಬ್ಬಳ್ಳಿ:ಕಾಂಗ್ರೆಸ್-ಜೆಡಿಎಸ್​ ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದ ನಂತರ ಬಿದ್ದು ಹೋಗಿದೆ. ಅಕ್ಕಪಕ್ಕ ಕೂರುತಿದ್ದ ಸಿದ್ದರಾಮಯ್ಯ, ಕುಮಾರಸ್ವಾಮಿ ಪರಸ್ಪರ ಜಗಳ ಮಾಡುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ​ವಾಗ್ದಾಳಿ ನಡೆಸಿದ್ದಾರೆ.

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನಗರದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳಲ್ಲಿ ಒಗ್ಗಟ್ಟು ಇಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುರಿದ ನಂತರ ತಾವು ತಾವೇ ಜಗಳ ಮಾಡುತ್ತಿದ್ದಾರೆ. ಜೆಡಿಎಸ್ ಶಾಸಕರು ಜೆಡಿಎಸ್ ಪಕ್ಷ ಬಿಟ್ಟು ಹೊರಗೆ ಬರುತ್ತೇವೆ ಎಂದು ಹೇಳುತ್ತಿದ್ದಾರೆ. ಇದರ ಲಾಭವನ್ನು ಬಿಜೆಪಿ ಪಡೆದು ಪದವೀಧರ ಚುನಾವಣೆಯನ್ನು ಗೆಲ್ಲಬೇಕು ಎಂದ್ರು.

ಮಾಜಿ ಸಿಎಂಗಳ ವಿರುದ್ಧ ಶೆಟ್ಟರ್​ ವಾಗ್ದಾಳಿ

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಒಗ್ಗಟ್ಟಿನಲ್ಲಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ದೇಶ ಕಾಂಗ್ರೆಸ್ ಮುಕ್ತವಾಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದರು. ಇನ್ನು ವಿಪಕ್ಷಗಳು ಕೇವಲ ನೆರೆ ವಿಚಾರವನ್ನಿಟ್ಟುಕೊಂಡು ಟೀಕೆ ಮಾಡುತ್ತಿವೆ. ಆದರೆ ನರೇಂದ್ರ ಮೋದಿ ಸರ್ಕಾರ ನೆರೆ ಪರಿಹಾರ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಬಗ್ಗೆ ಗೊತ್ತಿಲ್ಲದೇ ಮನಸೋ ಇಚ್ಛೆ ಟೀಕೆ ಮಾಡುತ್ತಿವೆ ಎಂದ್ರು. ಇನ್ನು ಕೇಂದ್ರದಿಂದ ನೆರೆ ಪರಿಹಾರದ ಬಗ್ಗೆ ನಿರಾಶ್ರಿತರಿಂದ ಯಾವುದೇ ದೂರ ಬಂದಿಲ್ಲ. ಕೇವಲ ವಿಪಕ್ಷಗಳು ರಾಜಕಾರಣ ಮಾಡುವ ಉದ್ದೇಶದಿಂದ ಟೀಕೆ ಮಾಡುತ್ತಿವೆ ಎಂದು ಹರಿಹಾಯ್ದರು. ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ, ಶಾಸಕ ಅಮೃತ ದೇಸಾಯಿ, ಶಾಸಕ ಶಂಕರ್ ಪಾಟೀಲ ಮುನ್ಯಾನೇಕೊಪ್ಪ, ಮಹೇಶ್ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ ಮತ್ತಿತ್ತರು ಹಾಜರಿದ್ದರು.

Intro:ಹುಬ್ಬಳಿBody:ಸ್ಲಗ್: ಅಕ್ಕಪಕ್ಕದಲ್ಲಿ ಕುರುತಿದ್ದವ್ರು ಈಗ ಜಗಳ ಮಾಡುತ್ತಿದ್ದಾರೆ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ವಿರುದ್ಧ ಶೆಟ್ಟರ್ ವಾಗ್ದಾಳಿ..

ಹುಬ್ಬಳ್ಳಿ:- ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡ ಮೈತ್ರಿ ಸರ್ಕಾರ ಪಾಪದ ಕೊಡ ತುಂಬಿದ ನಂತರ ಬಿದ್ದು ಹೋಗಿದೆ. ಅಕ್ಕ-ಪಕ್ಕ ಕುರುತಿದ್ದ ಸಿದ್ದರಾಮಯ್ಯ, ಕುಮಾರಸ್ವಾಮಿ ಪರಸ್ಪರ ಕಿತ್ತಾಟ ನಡೆಸಿದ್ದಾರೆಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದರು. ನಗರದಲ್ಲಿ ಹಮ್ಮಿಕೊಂಡಿದ್ದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳಲ್ಲಿ ಒಗ್ಗಟ್ಟು ಇಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುರಿದ ನಂತರ ತಾವು ತಾವೇ ಜಗಳ ಮಾಡುತ್ತಿದ್ದಾರೆ. ಜೆಡಿಎಸ್ ಶಾಸಕರು ಜೆಡಿಎಸ್ ಪಕ್ಷ ಬಿಟ್ಟು ಹೊರಗೆ ಬರುತ್ತೇವೆ ಎಂದು ಜೆಡಿಎಸ್ ನಾಯಕರುಗಳೇ ಹೇಳುತ್ತಿದ್ದಾರೆ. ಇದರ ಲಾಭವನ್ನು ಬಿಜೆಪಿ ಪಡೆದು ಪದವೀಧರ ಚುನಾವಣೆಯನ್ನು ಗೆಲ್ಲಬೇಕು‌. ಈ ಹಿನ್ನಲೆಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ವಿಚಾರದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಎಲ್ಲರ ಜೊತೆಗೆ ಸಮಾಲೋಚನೆ ನಡೆಸಲಾಗುವುದು. ಅಲ್ಲದೇ ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರವಿದ್ದು, ಪ್ರತಿಪಕ್ಷಗಳ ಜಗಳದ ಲಾಭ ಪಡೆದು ಚುನಾವಣೆ ಗೆಲ್ಲುವ ರಣತಂತ್ರ ರೂಪಿಸಲಾಗುವುದು. ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಕಾಂಗ್ರೆಸ್ ನಾಯಕರುಗಳೇ ಕಾಂಗ್ರೆಸ್ ಆಡಳಿತ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಒಗ್ಗಟ್ಟಿನಲ್ಲಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ದೇಶ ಕಾಂಗ್ರೆಸ್ ಮುಕ್ತವಾಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದರು. ಇನ್ನೂ ವಿಪಕ್ಷಗಳು ಕೇವಲ ನೆರೆ ವಿಚಾರವನ್ನಿಟ್ಟುಕೊಂಡು ಟೀಕೆ ಮಾಡುತ್ತಿವೆ. ಆದರೆ ನರೇಂದ್ರ ಮೋದಿ ಸರ್ಕಾರ ನೆರೆ ಪರಿಹಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಬಗ್ಗೆ ಗೊತ್ತಿಲ್ಲದೇ ಮನಸ್ಸೋ ಇಚ್ಛೆ ಟೀಕೆ ಮಾಡುತ್ತಿದ್ದಾರೆ. ಕೇಂದ್ರದಿಂದ ಮಧ್ಯಂತರ ನೆರೆ ಪರಿಹಾರ ಬಿಡುಗಡೆಯಾಗಿದ್ದು, ಎನ್ ಡಿಆರ್ ಎಫ್ ನಿಯಮಗಳ ಪ್ರಕಾರ ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗುವುದು. ಇನ್ನೂ ಕೇಂದ್ರದಿಂದ ನೆರೆ ಪರಿಹಾರದ ಬಗ್ಗೆ ನಿರಾಶ್ರಿತರಿಂದ ಯಾವುದೇ ದೂರ ಬಂದಿಲ್ಲ. ಕೇವಲ ವಿಪಕ್ಷಗಳು ರಾಜಕಾರಣ ಮಾಡುವ ಹಿನ್ನಲೆಯಲ್ಲಿ ಟೀಕೆ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.ಈ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಅಮೃತ ದೇಸಾಯಿ, ಶಾಸಕ ಶಂಕರ್ ಪಾಟೀಲ ಮುನ್ಯಾನೇಕೊಪ್ಪ,ಮಹೇಶ್ ತೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ,ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು...

ಬೈಟ್:- ಜಗದೀಶ್ ಶೆಟ್ಟರ್ ರಾಜ್ಯ ಸಚಿವರು...

__________________________________________


ಹುಬ್ಬಳ್ಳಿ: ಸ್ಟ್ರಿಂಜರ್ ಯಲ್ಲಪ್ ಕುಂದಗೋಳConclusion:ಯಲ್ಲಪ್ಪ‌ ಕುಂದಗೊಳ

ABOUT THE AUTHOR

...view details