ಕರ್ನಾಟಕ

karnataka

ಬಾರದ ಬಸ್... SSLC ಪರೀಕ್ಷೆಗೆ ಎತ್ತಿನ ಗಾಡಿಯಲ್ಲಿ ಬಂದ ವಿದ್ಯಾರ್ಥಿಗಳು!

By

Published : Jul 20, 2021, 4:02 AM IST

Updated : Jul 20, 2021, 6:31 AM IST

ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಎತ್ತಿನ ಗಾಡಿಯಲ್ಲಿ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳು.

SSLC ಪರೀಕ್ಷೆಗೆ ಎತ್ತಿನ ಗಾಡಿಯಲ್ಲಿ ಬಂದ ವಿದ್ಯಾರ್ಥಿಗಳು
SSLC ಪರೀಕ್ಷೆಗೆ ಎತ್ತಿನ ಗಾಡಿಯಲ್ಲಿ ಬಂದ ವಿದ್ಯಾರ್ಥಿಗಳು

ಹುಬ್ಬಳ್ಳಿ: ಬಸ್ ವ್ಯವಸ್ಥೆ ಇಲ್ಲದ ಹಿನ್ನೆಲೆ ವಿದ್ಯಾರ್ಥಿಗಳು ಎತ್ತಿನ ಗಾಡಿಯಲ್ಲಿ SSLC ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದಿದ್ದಾರೆ. ಕುಂದಗೋಳ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಇಂದಿನ ವ್ಯವಸ್ಥೆಗೆ ಹಿಡಿದ ಕನ್ನಡಿಯಂತಿದೆ.

ಕೋವಿಡ್ ಭೀತಿ ಮಧ್ಯೆಯೂ ರಾಜ್ಯಾದ್ಯಂತ ಸೋಮವಾರದಿಂದ ಎಸ್​​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿದೆ. ಆದ್ರೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಕುಂದಗೋಳ ತಾಲೂಕಿನ ಯರಗುಪ್ಪಿಯ ವಿದ್ಯಾರ್ಥಿಗಳು ರೊಟ್ಟಿಗವಾಡ ಪರೀಕ್ಷಾ ಕೇಂದ್ರಕ್ಕೆ ಎತ್ತಿನ ಗಾಡಿ ಕಟ್ಟಿಕೊಂಡು ಹೋಗಿ ಪರೀಕ್ಷೆ ಬರೆದಿದ್ದಾರೆ.

SSLC ಪರೀಕ್ಷೆಗೆ ಎತ್ತಿನ ಗಾಡಿಯಲ್ಲಿ ಬಂದ ವಿದ್ಯಾರ್ಥಿಗಳು

ಸರಿಯಾದ ಸಾರಿಗೆ ವ್ಯವಸ್ಥೆ ಮಾಡದೇ ಬೇಕಾಬಿಟ್ಟಿಯಾಗಿ ಮಕ್ಕಳ ಭವಿಷ್ಯದ ಬಗ್ಗೆ ನಿಷ್ಕಾಳಜಿ ತೋರುತ್ತಿರುವ ಸರ್ಕಾರದ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕಿದ್ದಾರೆ. ರಾಜ್ಯಾದ್ಯಂತ ಇಂದು ಕೂಡ ಪರೀಕ್ಷೆಗಳು ನಡೆಯಲಿವೆ. (ಪರೀಕ್ಷೆಗೆ ಹೆದರಿ ಮನೆಯಲ್ಲೇ ಕುಳಿತಿದ್ದ ಬಾಲಕಿ.. ವಿದ್ಯಾರ್ಥಿನಿಯ ಮನವೊಲಿಸಿ SSLC Exam ಬರೆಸಿದ ಬಿಇಒ)

Last Updated :Jul 20, 2021, 6:31 AM IST

ABOUT THE AUTHOR

...view details