ಕರ್ನಾಟಕ

karnataka

ಟಾಸ್ಕ್​ ಪೋರ್ಸ್​​ ಸಮಿತಿ ಸಭೆ ನಂತರ ಪ್ರಾಥಮಿಕ ತರಗತಿ ಆರಂಭಕ್ಕೆ ನಿರ್ಧಾರ: ಬಿ.ಸಿ.ನಾಗೇಶ್​​

By

Published : Aug 26, 2021, 4:42 PM IST

ಆರೋಗ್ಯ ತಜ್ಞ ಡಾ. ದೇವಿಶೆಟ್ಟಿ ಅವರು 6 ರಿಂದ 8 ನೇ ತರಗತಿ ಆರಂಭಿಸಬಹುದೆಂದು ಸಲಹೆ ನೀಡಿದ್ದಾರೆ. ಶಿಕ್ಷಕರು, ಪೋಷಕರು, ಶಿಕ್ಷಣ ತಜ್ಞ ಶಾಲೆ ಆರಂಭಕ್ಕೆ ಉತ್ಸಾಹ ತೋರಿದ್ದು, ಟಾಸ್ಕ್​ ಪೋರ್ಸ್​​ ಸಮಿತಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್​ ತಿಳಿಸಿದರು.

task-force-committee-meeting
ಪ್ರೌಢ ಶಿಕ್ಷಣ ಸಚಿವ

ಹುಬ್ಬಳ್ಳಿ : ಆಗಸ್ಟ್ 30 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ಇದೆ. ಅಂದು 1 ರಿಂದ 8 ನೇ ಶಾಲಾ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಟಾಸ್ಕ್​ ಪೋರ್ಸ್​​ ಸಮಿತಿ ಸಭೆ ನಂತರ ಪ್ರಾಥಮಿಕ ತರಗತಿ ಆರಂಭಕ್ಕೆ ನಿರ್ಧಾರ

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈಗಾಗಲೇ ಆಗಸ್ಟ್ 23 ರಿಂದ ಪ್ರೌಢಶಾಲೆ ಮತ್ತು ಕಾಲೇಜು ತರಗತಿಗಳನ್ನು ಆರಂಭಿಸಲಾಗಿದ್ದು, ಅಲ್ಲಿನ ಸಾಧಕ, ಭಾದಕಗಳನ್ನು ಆಧರಿಸಿ ಪ್ರಾಥಮಿಕ ತರಗತಿಗಳನ್ನು ಆರಂಭಿಸುವ ಕುರಿತು ಚಿಂತನೆ ಮಾಡಲಾಗುವುದು ಎಂದರು.

ಆರೋಗ್ಯ ತಜ್ಞ ಡಾ. ದೇವಿಶೆಟ್ಟಿ ಅವರು 6 ರಿಂದ 8 ನೇ ತರಗತಿ ಆರಂಭಿಸಬಹುದೆಂದು ಸಲಹೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು, ಶಿಕ್ಷಣ ತಜ್ಞರಿಂದ ಶಾಲೆ ಆರಂಭ ಕುರಿತು ಉತ್ತಮ ಉತ್ಸಾಹ ತೋರಿದ್ದಾರೆ. ಇದರಿಂದ ಶಾಲೆಗಳನ್ನು ಆರಂಭಿಸಬೇಕೆಂಬ ಆಲೋಚನೆ ವ್ಯಕ್ತವಾಗುತ್ತಿದೆ‌. ಆದರೆ, ತಾಂತ್ರಿಕ ಸಮಿತಿಯ ವರದಿ ಮೇಲೆ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಕ್ಕಳ ತಜ್ಞರು ಹಾಗೂ ಶಿಕ್ಷಣ ತಜ್ಞರು ಸೇರಿದಂತೆ ಎಲ್ಲರೂ ಮೂರನೇ ಅಲೆ ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಆಧಾರದ ಮೇಲೆ ಶಾಲೆಗಳನ್ನು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಆರಂಭಿಸಲಾಗುವುದು. ಆಕಸ್ಮಾತ್ ಕೋವಿಡ್ ಮೂರನೇ ಅಲೆ ವ್ಯಾಪಿಸಿದರೆ ಶಾಲೆಗಳನ್ನು ಬಂದ್ ಮಾಡುವ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಿಕ್ಷಕರ ವರ್ಗಾವಣೆ :ಹೆಚ್ಚಿನ ಶಿಕ್ಷಕರಿಗೆ ಅನುಕೂಲವಾಗುವಂತೆ ಶಿಕ್ಷಕರ ವರ್ಗಾವಣೆ ನಡೆಸಲಾಗುತ್ತಿದೆ. ಸಪ್ಟೆಂಬರ್ 5 ರಿಂದ ಕೌನ್ಸೆಲಿಂಗ್​​ ಆರಂಭವಾಗಲಿದೆ ಎಂದರು.

ABOUT THE AUTHOR

...view details