ಕರ್ನಾಟಕ

karnataka

ETV Bharat / state

ಧಾರವಾಡದಲ್ಲಿ 10ಕ್ಕೂ ಹೆಚ್ಚು ಎಸ್​ಡಿಪಿಐ ಮತ್ತು ಪಿಎಫ್​ಐ ಮುಖಂಡರು ಪೊಲೀಸ್​ ವಶಕ್ಕೆ

ಧಾರವಾಡದಲ್ಲಿ ಪೊಲೀಸರ ದಾಳಿ ನಡೆದಿದ್ದು, 10ಕ್ಕೂ ಹೆಚ್ಚು ಎಸ್​ಡಿಪಿಐ-ಪಿಎಫ್​ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

State police raid on PFI and SDPI workers in Hubli  police raid on PFI  Karnataka police raid on PFI  Police raid on PFI in Karnataka  PFI and SDPI workers in Hubli  ಧಾರವಾಡದಲ್ಲಿ ಪೊಲೀಸರ ದಾಳಿ  ಎಸ್​ಡಿಪಿಐ ಪಿಎಫ್​ಐ ಮುಖಂಡರ ವಶ  ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ  ಮನೆ ಮತ್ತು ಕಚೇರಿ ಮೇಲೆ ರಾಜ್ಯ ಪೊಲೀಸರು ದಾಳಿ  ಕಸಬಾಪೇಟ್ ಪೇಟ್ ಪೊಲೀಸ್ ಠಾಣಾ ವ್ಯಾಪ್ತಿ  ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿ
ಧಾರವಾಡದಲ್ಲಿ ಪೊಲೀಸರ ದಾಳಿ

By

Published : Sep 27, 2022, 9:31 AM IST

ಹುಬ್ಬಳ್ಳಿ : ರಾಜ್ಯಾದ್ಯಂತ SDPI ಮತ್ತು PFI ಮುಖಂಡರ ಮನೆ ಮತ್ತು ಕಚೇರಿಗಳ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿದ್ದು, ಇದರ ಭಾಗವಾಗಿ ಹಳೇ ಹುಬ್ಬಳ್ಳಿಯ ಕಸಬಾಪೇಟ್ ಮತ್ತು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು SDPI-PFI ಮುಖಂಡರನ್ನು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.‌

ಕಸಬಾಪೇಟ್ ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ಜನರನ್ನು ಬಂಧಿಸಿದ್ದು, ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಫಾರುಕ್, ಸಿಕಂದರ್​ ಮತ್ತು ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಅಬ್ಬಾಸಲಿ ಮಂಟಗಣಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿಪಿಐ ರಮೇಶ್​ ಗೋಕಾಕ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಸಿಆರ್​ಪಿಸಿ 107, 151 ಅಡಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಓದಿ:ರಾಜ್ಯಾದ್ಯಂತ ಪೊಲೀಸರ ಮಿಂಚಿನ ಕಾರ್ಯಾಚರಣೆ.. 40ಕ್ಕೂ ಹೆಚ್ಚು ಪಿಎಫ್​ಐ ಕಾರ್ಯಕರ್ತರು ವಶಕ್ಕೆ

ABOUT THE AUTHOR

...view details