ಕರ್ನಾಟಕ

karnataka

ನಾಳೆ ಹುಬ್ಬಳ್ಳಿ ರೈಲು ನಿಲ್ದಾಣದ ಮೂರನೇ ಮುಖ್ಯ ದ್ವಾರ ಲೋಕಾರ್ಪಣೆ: ನಿಜಾಮುದ್ದೀನ್ ರೈಲಿಗೆ ಹಸಿರು ನಿಶಾನೆ

By

Published : Oct 10, 2022, 10:35 PM IST

ಈ ಹಿಂದೆ ಇದ್ದ ಹುಬ್ಬಳ್ಳಿ-ನಿಜಾಮುದ್ದೀನ್‌ ಲಿಂಕ್‌ ರೈಲನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿತ್ತು. ಇದನ್ನು ಅರಿತ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತೆ ರೈಲು ಓಡಿಸುವಂತೆ ಒತ್ತಾಯಿಸಿದ್ದರು. ಹೀಗಾಗಿ ಮಂಗಳವಾರ ರೈಲು ಸಂಚಾರ ಆರಂಭವಾಗಲಿದೆ.

third main gate of Hubli railway station will be inaugurated tomorrow
ನಾಳೆ ಹುಬ್ಬಳ್ಳಿ ರೈಲು ನಿಲ್ದಾಣದ ಮೂರನೇ ಮುಖ್ಯ ದ್ವಾರ ಲೋಕಾರ್ಪಣೆ

ಹುಬ್ಬಳ್ಳಿ :ನೈಋತ್ಯ ರೈಲ್ವೆ ವಲಯದ ಬಹು ಬೇಡಿಕೆಯ ಹುಬ್ಬಳ್ಳಿ-ಹಜರತ್ ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲು ಮತ್ತೇ ಪ್ರಾರಂಭವಾಗಲಿದೆ. ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‌ ಅಕ್ಟೋಬರ್​ 11ರಂದು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಲಿದ್ದು, ಇದರೊಂದಿಗೆ ರೈಲ್ವೆ ನಿಲ್ದಾಣದ 3ನೇ ಪ್ರವೇಶ ದ್ವಾರ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ಸವಾಯಿ ಗಂಧರ್ವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಲಾಗುವುದು. ಮಧ್ಯಾಹ್ನ 12.30ಕ್ಕೆ 20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಧಾರವಾಡ ರೈಲ್ವೆ ನಿಲ್ದಾಣ, ಮಧ್ಯಾಹ್ನ 3ಕ್ಕೆ 115 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹುಬ್ಬಳ್ಳಿ ರೈಲ್ವೆ ನಿಲ್ದಾಣದ 3ನೇ ಪ್ರವೇಶ ದ್ವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಆನಂತರ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಹುಬ್ಬಳ್ಳಿ-ನಿಜಾಮುದ್ದೀನ್‌ ಹೊಸ ರೈಲಿಗೆ ಅಶ್ವಿನಿ ವೈಷ್ಣವ್‌ ಹಸಿರು ನಿಶಾನೆ ತೋರಿಸಲಿದ್ದಾರೆ.

ನಾಳೆ ಹುಬ್ಬಳ್ಳಿ ರೈಲು ನಿಲ್ದಾಣದ ಮೂರನೇ ಮುಖ್ಯ ದ್ವಾರ ಲೋಕಾರ್ಪಣೆ

ಈ ಹಿಂದೆ ಇದ್ದ ಹುಬ್ಬಳ್ಳಿ- ನಿಜಾಮುದ್ದೀನ್‌ ಲಿಂಕ್‌ ರೈಲನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿತ್ತು. ಇದನ್ನು ಅರಿತ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತೆ ರೈಲು ಓಡಿಸುವಂತೆ ಒತ್ತಾಯಿಸಿದ್ದರು. ಹೀಗಾಗಿ ಮಂಗಳವಾರ ರೈಲು ಸಂಚಾರ ಆರಂಭವಾಗಲಿದೆ.

ಜನ ದಟ್ಟಣೆ ನಿಯಂತ್ರಸಲು ಸಹಕಾರ :ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದ 3ನೇ ಪ್ರವೇಶ ದ್ವಾರ ನಿರ್ಮಾಣ ಪೂರ್ಣಗೊಂಡಿದೆ. ಮಂಟೂರು ರಸ್ತೆಯಲ್ಲಿ ನಿರ್ಮಿಸಿರುವ ಈ ದ್ವಾರದಿಂದ ರೈಲ್ವೆ ನಿಲ್ದಾಣವನ್ನು ಮೂರು ದಿಕ್ಕಿನಿಂದಲೂ ಪ್ರಯಾಣಿಕರು ಪ್ರವೇಶಿಸಲು ಹಾಗೂ ನಿರ್ಗಮಿಸಲು ಅವಕಾಶ ಕಲ್ಪಿಸಿದಂತೆ ಆಗಿದೆ. ಇದು ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದ್ದು ಜನದಟ್ಟಣೆಯ ನಿಯಂತ್ರಣ ಸಹ ಮಾಡಬಹುದಾಗಿದೆ ಎಂದು ನೈರುತ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗ್ಡೆ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ :ಹುಬ್ಬಳ್ಳಿ ಮೀನು ಮಾರುಕಟ್ಟೆ ನಿರ್ಮಾಣಗೊಂಡರೂ ಉದ್ಘಾಟನೆಯಾಗ್ತಿಲ್ಲ: ವ್ಯಾಪಾರಿಗಳ ಗೋಳು ಕೇಳುವವರಾರು..?

ABOUT THE AUTHOR

...view details