ಕರ್ನಾಟಕ

karnataka

ದೆಹಲಿ ರೈತರ ಹೋರಾಟ ಬೆಂಬಲಿಸಿ ಧಾರವಾಡದಲ್ಲಿ ಟ್ರ್ಯಾಕ್ಟರ್ ಮೆರವಣಿಗೆ

By

Published : Jan 9, 2021, 1:18 PM IST

ಸರ್ಕಾರದ ನೂತನ ಕೃಷಿ ಕಾನೂನು ಹಿಂಪಡೆಯುವಂತೆ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಧಾರವಾಡ ರೈತರು ಟ್ರ್ಯಾಕ್ಟರ್ ಜಾಥಾ ನಡೆಸಿದ್ದಾರೆ.

tractor jatha in dharwad
ಧಾರವಾಡದಲ್ಲಿ ಟ್ರ್ಯಾಕ್ಟರ್ ಜಾಥಾ

ಧಾರವಾಡ:ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಧಾರವಾಡದಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.

ಧಾರವಾಡದಲ್ಲಿ ಟ್ರ್ಯಾಕ್ಟರ್ ಜಾಥಾ
ಧಾರವಾಡದ ಕಲಾಭವನದಿಂದ ಪ್ರಾರಂಭವಾದ ಟ್ರ್ಯಾಕ್ಟರ್ ಮೆರವಣಿಗೆ, ವಿವೇಕಾನಂದ ವೃತ್ತದ ಮೂಲಕ ಹಾಯ್ದು ಮರಳಿ ಕಲಾಭವನಕ್ಕೆ ಬಂದು ಮುಕ್ತಾಯಗೊಂಡಿತು. ಟ್ರ್ಯಾಕ್ಟರ್ ಜಾಥಾ ಮೂಲಕ ರೈತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಮಾಜಿ ಕೇಂದ್ರ ‌ಸಚಿವ ಬಾಬಾಗೌಡ ಪಾಟೀಲ್, ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ, ಮಾಜಿ ಸಂಸದ ಪ್ರೊ.ಐ.ಜಿ.ಸನದಿ, ಶಂಕರ ಹಲಗತ್ತಿ ಸೇರಿದಂತೆ ಅನೇಕರು ಈ ಹೋರಾಟದಲ್ಲಿ ಪಾಲ್ಗೊಂಡಿದ್ದರು.

ABOUT THE AUTHOR

...view details