ಕರ್ನಾಟಕ

karnataka

ಹುಬ್ಬಳ್ಳಿಯಲ್ಲಿ ರಸ್ತೆ ಡಿವೈಡರ್​ಗೆ ಬೈಕ್​ ಡಿಕ್ಕಿ​: ಇಬ್ಬರು ಯುವಕರು ದಾರುಣ ಸಾವು

By

Published : Aug 26, 2021, 1:04 PM IST

Updated : Aug 26, 2021, 1:46 PM IST

ಯುವಕರು ಬೈಕ್​ನಲ್ಲಿ ವೇಗವಾಗಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಇಬ್ಬರು ಯುವಕರು ಸಹ ಸ್ಥಳದಲ್ಲಿಯೇ ಇಬ್ಬರು ಸಾವಿಗೀಡಾಗಿದ್ದಾರೆ.

hubli
ಹುಬ್ಬಳ್ಳಿಯಲ್ಲಿ ಅಪಘಾತ

ಹುಬ್ಬಳ್ಳಿ: ವೇಗವಾಗಿ ಚಲಿಸುತ್ತಿದ್ದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಉಣಕಲ್ ಕೆರೆ ಬಳಿಯ ಪ್ರೆಸಿಡೆಂಟ್ ಹೋಟೆಲ್ ಮುಂಭಾಗ ಸಂಭವಿಸಿದೆ.

ವೇಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಬೈಕ್​ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಇಬ್ಬರು ಯುವಕರೂ ಸಹ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಮೃತ ಯುವಕರ ಗುರುತು ಇನ್ನೂ ಪತ್ತೆಯಾಗಿಲ್ಲ.

ಹುಬ್ಬಳ್ಳಿಯಲ್ಲಿ ಅಪಘಾತ

ಘಟನೆ ಬಗ್ಗೆ ಮಾಹಿತಿ ಪಡೆದ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕರನ್ನು ಆಸ್ಪತ್ರೆಗೆ ರವಾನಿಸಿದ್ದರೂ ಸಹ ಪ್ರಯೋಜನವಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Aug 26, 2021, 1:46 PM IST

ABOUT THE AUTHOR

...view details