ಕರ್ನಾಟಕ

karnataka

ಪೋಲಿಯೋ ಲಸಿಕೆ ಹಾಕಿಸಿ ಅಂಗವೈಕಲ್ಯ ಹೋಗಲಾಡಿಸಿ: ಹಾಸನ ಜಿಲ್ಲಾಧಿಕಾರಿ ಕರೆ

By

Published : Jan 19, 2020, 5:33 PM IST

ಹಾಸನ, ಆರೋಗ್ಯಕರ ಭಾರತ ನಿರ್ಮಾಣಕ್ಕೆ ಪ್ರತಿ ಮಗುವಿಗೂ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆಯನ್ನು ಹೋಗಲಾಡಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಕರೆ ನೀಡಿದರು.

DC, R. Girish
ಜಿಲ್ಲಾಧಿಕಾರಿ ಆರ್.ಗಿರೀಶ್

ಹಾಸನ: ಆರೋಗ್ಯಕರ ಭಾರತ ನಿರ್ಮಾಣಕ್ಕೆ ಪ್ರತಿ ಮಗುವಿಗೂ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆಯನ್ನು ಹೋಗಲಾಡಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಕರೆ ನೀಡಿದ್ದಾರೆ.

ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕರ ಆಸ್ಪತ್ರೆಯಲ್ಲಿ ನಡೆದ 2020ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಾಸನ ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳ ಸಂಖ್ಯೆ 1.25 ಲಕ್ಷ ಇದ್ದು, ಆ ಎಲ್ಲಾ ಮಕ್ಕಳಿಗಾಗಿ 872 ಪಲ್ಸ್ ಪೋಲಿಯೋ ಲಸಿಕಾ ಬೂತ್‍ಗಳನ್ನು ಜಿಲ್ಲೆಯಾದ್ಯಂತ ಸ್ಥಾಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ರು.

ಜಿಲ್ಲಾಧಿಕಾರಿ ಆರ್.ಗಿರೀಶ್

ರೋಗ ನಿರೋಧಕ ಶಕ್ತಿ ಕುಂಠಿತವಾಗಿ, ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ಮಕ್ಕಳು ಈ ಅಭಿಯಾನದಿಂದ ಹೊರಗುಳಿಯುವ ಸಂಭವವಿದೆ. ಹಾಗಾಗಿ ಅಭಿಯಾನದ ಮೊದಲನೇ ದಿನ ಬೂತ್ ಮಟ್ಟದಲ್ಲಿ ಅಂಗನವಾಡಿ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದ್ದು, ಉಳಿದ 2 ದಿನಗಳಲ್ಲಿ ಅಭಿಯಾನದಿಂದ ಹೊರಗುಳಿದ ಮಕ್ಕಳಿಗೆ ಆರೋಗ್ಯ ಇಲಾಖೆ ಕಾರ್ಯಕರ್ತರು ಮನೆ-ಮನೆ ಭೇಟಿ ಮಾಡಿ ಪೋಲಿಯೋ ಲಸಿಕೆ ಹಾಕುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Intro:ಹಾಸನ : ಆರೋಗ್ಯಕರ ಭಾರತ ನಿರ್ಮಾಣಕ್ಕೆ ಪ್ರತಿ ಮಗುವಿಗೂ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆಯನ್ನು ಹೋಗಲಾಡಿಸಿ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದ್ದಾರೆ.
         ಹಾಸನ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ಮತ್ತು ಭೋದಕ ಆಸ್ಪತ್ರೆಯಲ್ಲಿಂದು ನಡೆದ 2020ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಾಸನ ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳ ಸಂಖ್ಯೆ 1.25 ಲಕ್ಷಯಿದ್ದು, ಆ ಎಲ್ಲಾ ಮಕ್ಕಳಿಗಾಗಿ 872 ಪಲ್ಸ್ ಪೋಲಿಯೋ ಲಸಿಕಾ ಬೂತ್‍ಗಳನ್ನು ಜಿಲ್ಲಾದ್ಯಂತ ಸ್ಥಾಪನೆ ಮಾಡಲಾಗಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ತಿಸಿದರು.

ರೋಗ ನಿರೋಧಕ ಶಕ್ತಿ ಕುಂಠಿತವಾಗಿರುವಂತಹ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ಮಕ್ಕಳು ಈ ಅಭಿಯಾನದಿಂದ ಹೊರಗುಳಿಯುವ ಸಂಭವವಿದೆ ಹಾಗಾಗಿ ಅಭಿಯಾನದ ಮೊದಲನೇ ದಿನ ಬೂತ್ ಮಟ್ಟದಲ್ಲಿ ಅಂಗನವಾಡಿ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದ್ದು, ಉಳಿದ 2 ದಿನಗಳಲ್ಲಿ ಅಭಿಯಾನದಿಂದ ಹೊರಗುಳಿದ ಮಕ್ಕಳಿಗೆ ಆರೋಗ್ಯ ಕಾರ್ಯಕರ್ತರು ಮನೆ-ಮನೆ ಭೇಟಿ ಮಾಡಿ ಪೋಲಿಯೋ ಲಸಿಕೆ ನೀಡುತ್ತಾರೆ. ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಪ್ರತಿಯೊಬ್ಬ ಮಕ್ಕಳಿಗೂ ಲಸಿಕೆಯನ್ನು ತಪ್ಪದೇ ಕೊಡುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್ ಮಾತನಾಡಿ ಅಂಗವಿಕಲತೆ ಚಿಕ್ಕ ಮಕ್ಕಳಲ್ಲಿ ಕಂಡು ಬರುವ ರೋಗವಾಗಿದೆ. ದೈಹಿಕವಾಗಿ ಶಾಶ್ವತ ಅಂಗವೈಕಲ್ಯವನ್ನು ಉಂಟು ಮಾಡುವ ಈ ಸಾಂಕ್ರಾಮಿಕ ರೋಗದ ತಡೆಗಾಗಿ ಪಲ್ಸ್ ಪೋಲಿಯೋ ಲಸಿಕೆಯನ್ನು ಪೋಷಕರು ತಪ್ಪದೇ ಹಾಕಿಸಬೇಕು ಎಂದರು.
ಪ್ರತಿಯೊಂದು ಮಗುವು ಪೋಲಿಯೋ ಲಸಿಕೆ ಪಡೆದಾಗ ಅದು ವಿವಿಧ ವೈರಸ್‍ನ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅಂಗವಿಕಲತೆಯನ್ನು ಹೋಗಲಾಡಿಸುತ್ತದೆ ಎಂದರು.

Body:ಬೈಟ್ : ಆರ್. ಗಿರೀಶ್, ಜಿಲ್ಲಾಧಿಕಾರಿ.Conclusion:- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.

ABOUT THE AUTHOR

...view details