ಕರ್ನಾಟಕ

karnataka

ಕೊರೊನಾ​​ ರೂಪಾಂತರಿ JN.1 ವೈರಸ್​ಗೆ ಹಾಸನದಲ್ಲಿ ಮೊದಲ ಬಲಿ

By ETV Bharat Karnataka Team

Published : Dec 26, 2023, 6:28 AM IST

Updated : Dec 26, 2023, 9:27 AM IST

ಹಾಸನ ಜಿಲ್ಲೆಯಲ್ಲಿ ಕೊರೊನಾ ಜೆಎನ್​​.1 ರೂಪಾಂತರಿ ತಳಿಗೆ ವಯೋವೃದ್ಧ ವ್ಯಕ್ತಿ ಬಲಿಯಾಗಿದ್ದಾರೆ.

covid
JN.1 ವೈರಸ್

ಹಾಸನ: ಜಿಲ್ಲೆಯಲ್ಲಿ ಕೊರೊನಾ ರೂಪಾಂತರಿ ತಳಿಗೆ ಮೊದಲ ಬಲಿಯಾಗಿದೆ. ಮಹಾಮಾರಿ ಕೋವಿಡ್ ಆತಂಕದ ಅಲೆ ಮತ್ತೆ ಎದ್ದಿದ್ದು ಕೊರೊನಾ ಜೆಎನ್​​.1 ರೂಪಾಂತರಿ ತಳಿಗೆ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ್ದಾನೆ. ಚನ್ನರಾಯಪಟ್ಟಣ ಮೂಲದ ವ್ಯಕ್ತಿ ಮೃತಪಟ್ಟಿದ್ದು, ಈತ ಮೊದಲೇ ಇತರ ರೋಗಗಳಿಂದ ಬಾಧಿತನಾಗಿದ್ದ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವ್ಯಕ್ತಿಯ ಸಾವಿನ ನಂತರ ಪರೀಕ್ಷೆಗಾಗಿ ಗಂಟಲು ದ್ರವವನ್ನು ತಳಿಪತ್ತೆ ಟೆಸ್ಟ್​​ಗೆ ಒಳಪಡಿಸಿದಾಗ ಆತನಲ್ಲಿ ಕೊರೊನಾ ರೂಪಾಂತರಿ ತಳಿ ವೈರಸ್​​ ಪತ್ತೆಯಾಗಿದೆ. ಇದಲ್ಲದೇ ಜಿಲ್ಲೆಯಲ್ಲಿ ಶೀತ, ಜ್ವರ ಬಾಧಿತರಾಗಿರುವ ಐವರು ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ ಒಬ್ಬ ಮೃತಪಟ್ಟಿದ್ದು ನಾಲ್ವರು ಹೋಂ ಐಸೋಲೇಷನ್​ನಲ್ಲಿದ್ದಾರೆ. ಸಾರ್ವಜನಿಕರು ಭಯಪಡುವ ಅಗತ್ಯ ಇಲ್ಲ. ಆದರೆ, ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿಂದು ಕೋವಿಡ್‌ಗೆ ಮೂವರು ಬಲಿ

ರಾಜ್ಯದಲ್ಲಿ ನಿನ್ನೆ 125 ಜನರಲ್ಲಿ ಕೊರೊನಾ ರೂಪಾಂತರಿ ತಳಿ ಸೋಂಕು ಕಾಣಿಸಿಕೊಂಡಿದೆ. ಹಾಸನ, ದಕ್ಷಿಣ ಕನ್ನಡ ಮತ್ತು ಬೆಂಗಳೂರು ನಗರದಲ್ಲಿ ತಲಾ ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ 436 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ 400 ಮಂದಿ ಗೃಹ ಆರೈಕೆಯಲ್ಲಿದ್ದಾರೆ. 36 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಜನ ಐಸಿಯು ಹಾಗೂ 29 ಜನ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ ಸುಮಾರು 94, ಮೈಸೂರಿನಲ್ಲಿ 13, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ತಲಾ 5, ವಿಜಯನಗರ ಮತ್ತು ಶಿವಮೊಗ್ಗದಲ್ಲಿ ತಲಾ 2 ಹಾಗೂ ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗದಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ.

ಇಂದು ಸಂಪುಟ ಉಪ ಸಮಿತಿ ಸಭೆ:ಕೋವಿಡ್ ಸೋಂಕು ಹೆಚ್ಚುತ್ತಿದ್ದು ಸುಮಾರು 34 ಜನ ಕೋವಿಡ್ ಸೋಂಕಿತರಿಗೆ JN.1 ಪಾಸಿಟಿವ್ ದೃಢಪಟ್ಟಿದೆ. ಹಾಗಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮ ವಹಿಸುವ ಕುರಿತು ಇಂದು ಕೋವಿಡ್ ನಿರ್ವಹಣೆಗೆ ರಚಿಸಿರುವ ಸಂಪುಟ ಉಪ ಸಮಿತಿ ಸಭೆ ನಡೆಸಲಿದೆ. ಈ ಸಭೆಯಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ತಿಳಿಸಿದ್ದಾರೆ.

ಸಭೆಯಲ್ಲಿ ಜೆಎನ್ 1 ಪ್ರಕರಣಗಳೂ ಸೇರಿದಂತೆ, ಕೋವಿಡ್ ನಿಯಂತ್ರಣ ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ.‌ ಈಗಾಗಲೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಉತ್ತಮ ಎಂಬುದು ಸಲಹೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟವರು, ಇತರ ಕಾಯಿಲೆ ಹೊಂದಿದವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Last Updated :Dec 26, 2023, 9:27 AM IST

ABOUT THE AUTHOR

...view details