ಕರ್ನಾಟಕ

karnataka

ಸ್ವಾತಂತ್ರ್ಯದಿನ ಎಂದರೆ ಭಾರತೀಯರ ಸ್ವಾಭಿಮಾನದ ಗೆಲುವಿನ ಸಂಭ್ರಮ

By

Published : Aug 15, 2019, 5:31 PM IST

73ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಾಸನ ಜಿಲ್ಲಾಧಿಕಾರಿ ಅಕ್ರಂ ಪಾಷಾ ಧ್ವಜಾರೋಹಣ ನೆರವೇರಿಸಿ, ಸಂದೇಶ ಭಾಷಣ ಮಾಡಿದರು. ದೇಶದ ಸ್ವಾತಂತ್ರ್ಯ ಸಮರದಲ್ಲಿ ಪಾಲ್ಗೊಂಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರನ್ನು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸ್ಮರಿಸಿದರು.

ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ, ಸಂದೇಶ ಭಾಷಣ

ಹಾಸನ : ರಾಜಪ್ರಭುತ್ವ, ವಿದೇಶಿಯರ ಆಳ್ವಿಕೆಯ ದಾಸ್ಯದಿಂದ ಹೊರಬಂದ ಜಗತ್ತಿನ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ ಉದಯಿಸಿದ ಸುದಿನ, ಇದು ಭಾರತದ ಸ್ವಾತಂತ್ರ್ಯ ಸ್ವಾಭಿಮಾನದ ಗೆಲುವಿನ ಸಂಭ್ರಮ ದಿನ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.

ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ, ಸಂದೇಶ ಭಾಷಣ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮದು ಶಾಂತಿ ಪ್ರಿಯ ರಾಷ್ಟ್ರ. ಸತ್ಯ, ಅಹಿಂಸೆಯ ಮಾರ್ಗದಲ್ಲಿ ಸ್ವಾತಂತ್ರ್ಯಗಳಿಸಿದ ನಾಡು. ಈ ದೇಶದ ಸ್ವಾತಂತ್ರ್ಯಕ್ಕೆ ಸಾವಿರಾರು ಜನ ತ್ಯಾಗ-ಬಲಿದಾನ ಮಾಡಿದ್ದಾರೆ. ನಮ್ಮ ಜಿಲ್ಲೆಯ ಹಾರನಹಳ್ಳಿ ರಾಮಸ್ವಾಮಿ, ಗೊರೂರು ರಾಮಸ್ವಾಮಿ ಅಯ್ಯಂಗಾರ್, ಜಿ.ಎಸ್ ಸಂಪತ್ ಅಯ್ಯಂಗಾರ್ ಸೇರಿದಂತೆ ನೂರಾರು ಮಂದಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ ಎಂದರು.

ರಾಜ್ಯಾದ್ಯಂತ ಭೀಕರ ಪ್ರವಾಹ ಉಂಟಾಗಿ ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ನೆರವಿಗೆ ಧಾವಿಸಿ ಪ್ರವಾಹಕ್ಕೆ ಸಿಲುಕಿರುವವರನ್ನು ರಕ್ಷಿಸಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಿದೆ. ಎಲ್ಲಾ ಜಿಲ್ಲೆಗಳಿಗೂ ತುರ್ತು ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಜಲ ಸಂರಕ್ಷಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹತ್ತಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗಿದೆ ಎಂದು ಹೇಳಿದರು.

Intro:ಹಾಸನ : ರಾಜಪ್ರಭುತ್ವ ವಿದೇಶಿಯರ ಆಳ್ವಿಕೆಯ ದಾಸ್ಯದಿಂದ ಹೊರಬಂದ ಜಗತ್ತಿನ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ ಉದಯಿಸಿದ ಸುದಿನ, ಇದು ಭಾರತದ ಸ್ವಾತಂತ್ರ್ಯ ಸ್ವಾಭಿಮಾನದ ಗೆಲುವಿನ ಸಂಭ್ರಮ ದಿನ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಮ್ಮ ದೇಶ ಶಾಂತಿ ಪ್ರಿಯ ರಾಷ್ಟ್ರ . ಸತ್ಯ, ಅಹಿಂಸೆಯ ಮಾರ್ಗದಲ್ಲಿ ಸ್ವಾತಂತ್ರ್ಯಗಳಿಸಿದ ನಾಡು ಆದರೆ ಈ ದೇಶ ಸ್ವಾತಂತ್ರ್ಯಕ್ಕೆ ಸಾವಿರಾರು ಜನ ತ್ಯಾಗ-ಬಲಿದಾನ ಕೊಂಡಿದ್ದಾರೆ.
ಜಿಲ್ಲೆಯಲ್ಲಿ ಹಾರನಹಳ್ಳಿ ರಾಮಸ್ವಾಮಿ, ಗೊರೂರು ರಾಮಸ್ವಾಮಿ ಅಯ್ಯಂಗಾರ್, ಜಿ.ಎಸ್ ಸಂಪತ್ ಅಯ್ಯಂಗಾರ್ ಸೇರಿದಂತೆ ನೂರಾರು ಮಂದಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ.



Body:ರಾಜ್ಯದ್ಯಂತ ಭೀಕರ ಪ್ರವಾಹ ಉಂಟಾಗಿ ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿಸಿದೆ ರಾಜ್ಯ ಸರ್ಕಾರ ಅವರೆಲ್ಲರ ನೆರವಿಗೆ ತಕ್ಷಣವೇ ಧಾವಿಸಿ ಪ್ರವಾಹಕ್ಕೆ ಸಿಲುಕಿರುವ ರಚಿಸಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಿದೆ.
ಎಲ್ಲ ಜಿಲ್ಲೆಗಳಿಗೂ ತುರ್ತು ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.
ಜಲ ಸಂರಕ್ಷಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹತ್ತಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗಿದೆ. ಹಾಸನ ಜಿಲ್ಲೆಯಲ್ಲಿರುವ ಕುಸಿತ ಕಂಡಿರುವ ಅರಸೀಕೆರೆ ಮತ್ತು ಜನರ ತಾಲೂಕುಗಳಲ್ಲಿ ಜನಶಕ್ತಿಯನ್ನು ಆಂದೋಲನ ರೂಪದಲ್ಲಿ ಕೈಗೊಳ್ಳಲಾಗಿದೆ ದೇಶದ ಮುಂಚೂಣಿಯಲ್ಲಿದೆ ಎಂದರು.
ಜನರ ಮನೆಯ ಬಾಗಿಲಿಗೆ ತೆರಳಿ ಸರ್ಕಾರದ ಯೋಜನೆಗಳನ್ನು ತಲುಪಿಸುವ ಉದ್ದೇಶದಿಂದ ಜಿಲ್ಲಾಡಳಿತದಿಂದ ಗ್ರಾಮವಾಸ್ತವ್ಯ ರಾಮದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಾವಿರಾರು ಅರ್ಜಿಗಳನ್ನು ಸ್ವೀಕರಿಸಿ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗುತ್ತಿದೆ. ಇದಲ್ಲದೇ ವಿಶೇಷ ಪೌತಿ ಆಂದೋಲನ ಹಮ್ಮಿ ಕೊಳ್ಳಲಾಗಿದ್ದು, ಇಲ್ಲ ಪೌತಿ ಖಾತೆಗಳನ್ನು ನ್ಯಾಯಸಮ್ಮತವಾಗಿ ಬದಲಾವಣೆ ಮಾಡಲು ಅಗತ್ಯ ಕ್ರಮ ವಹಿಸಲಾಗಿದೆ. ಇದರಿಂದ ಸುಮಾರು ಒಂದು ಲಕ್ಷ ಭೂ ಹಿಡುವಳಿದಾರರಿಗೆ ಅನುಕೂಲವಾಗಲಿದೆ ಎಂದರು.
ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸೇರಿದ ಎಲ್ಲ ಜಮೀನು ಸರ್ವೆ ಕಾರ್ಯ ಮುಕ್ತಾಯಗೊಂಡಿದ್ದು ದಾಖಲೆ ಇಂಡೀಕರಣ ಮಾಡಲಾಗುತ್ತಿದೆ.



Conclusion:ಎಲ್ಲಾ ಸರ್ಕಾರಿ ಕೆರೆಗಳ ಸರ್ವೆ ಕಾರ್ಯ ನಡೆಸಿ ಒತ್ತುವರಿ ತೆರವುಗೊಳಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳ ತಹಸೀಲ್ದಾರರು ಪೊಲೀಸ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು 20 ಹೊಸ ವಾಹನಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

-ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.

ABOUT THE AUTHOR

...view details