ಕರ್ನಾಟಕ

karnataka

ಸಿಎಂ ರೇಸ್​​ಗೆ ಹೋಗಿ ನಾನು ಸ್ಲೈಡಿಂಗ್ ಆಗೋದು ಬೇಡ: ಸಚಿವ ಆರ್. ಅಶೋಕ್

By

Published : Jul 24, 2021, 5:40 PM IST

ಸಿಎಂ ಬದಲಾವಣೆ ವಿಚಾರವಾಗಿ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

Minister R. Ashok
ಕಂದಾಯ ಸಚಿವ ಆರ್.ಅಶೋಕ್

ಹಾಸನ: ಸಿಎಂ ರೇಸ್​ಗೆ ಹೋಗಿ ನಾನು ಸ್ಲೈಡಿಂಗ್ ಆಗೋದು ಬೇಡ ಎನ್ನುವ ಮೂಲಕ ನಾನು ಸಿಎಂ ರೇಸ್​​ನಲ್ಲಿ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ. ಹಾಸನದ ಸಕಲೇಶಪುರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಗಾಲ ಪ್ರಾರಂಭವಾಗಿದೆ. ಮೊದಲು ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕಾಗಿದೆ. ಯಡಿಯೂರಪ್ಪ ಅವರನ್ನೇ ಮುಂದುವರಿಸುವಂತೆ ಸ್ವಾಮೀಜಿಗಳು ಒತ್ತಡ ಹೇರಿದ್ದಾರೆ. ಸ್ವಾಮೀಜಿಗಳ ಬಗ್ಗೆ ನಮಗೆ ಗೌರವವಿದೆ. ಆದ್ರೆ ಸಿಎಂ ಬದಲಾವಣೆ ವಿಚಾರವಾಗಿ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಸದ್ಯಕ್ಕೆ ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ. ಸ್ವಾಮೀಜಿಗಳ ಸಲಹೆಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಕೇಂದ್ರದಲ್ಲಿ ಪಕ್ಷದ ನಾಯಕರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ, ಅದರಂತೆ ನಾವು ನಡೆಯುತ್ತೇವೆ. ನಮ್ಮದು ರಾಷ್ಟ್ರೀಯ ಪಕ್ಷ. ಸದ್ಯ ಜನರ ಸಮಸ್ಯೆಯನ್ನು ಆಲಿಸಲು ಬಂದಿದ್ದೇನೆ. ಹಾಗಾಗಿ ಇದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.

ಇದನ್ನೂ ಓದಿ:ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ: ರೇಣುಕಾಚಾರ್ಯ

ABOUT THE AUTHOR

...view details