ಕರ್ನಾಟಕ

karnataka

ಸಿದ್ದಗಂಗಾಮಠದ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

By

Published : Mar 2, 2021, 8:14 AM IST

ಜಾತ್ರಾ ಮಹೋತ್ಸವದ ಹಿನ್ನೆಲೆ, ಮಠದ ಆವರಣದಲ್ಲಿ ಸಂಭ್ರಮ ಮನೆ ಮಾಡಿದೆ. ಮಠದ ತುಂಬೆಲ್ಲ ದೀಪಾಲಂಕಾರದಿಂದ ಸಿಂಗರಿಸಲಾಗಿದೆ. 15 ದಿನಗಳ ಕಾಲ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ನಡೆಯಲಿದ್ದು, ರೈತಾಪಿ ವರ್ಗಕ್ಕೆ ಸಹಕಾರಿ ಆಗುವ ಯೋಜನೆಗಳ ಪರಿಚಯಿಸಲಾಗಿದೆ.

siddhalingamaswara-swamy-jatra-
ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

ತುಮಕೂರು:ಪ್ರತಿ ವರ್ಷದಂತೆ ಈ ಬಾರಿಯೂ ಸಿದ್ದಗಂಗಾ ಮಠದಲ್ಲಿ ಮಹಾಶಿವರಾತ್ರಿ ವೇಳೆ ನಡೆಯಲಿರುವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಂಸ್ಕೃತಿ ಕಾರ್ಯಕ್ರಮಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಡೋಲು ಬಾರಿಸುವ ಮೂಲಕ ಚಾಲನೆ ನೀಡಿದರು.

ಓದಿ: ಕೇರಳದಲ್ಲಿ ರಾಜಕೀಯ ಬದಲಾವಣೆಗೆ ಇದು ಸಕಾಲ: ಡಿಸಿಎಂ ಅಶ್ವತ್ಥ​ ನಾರಾಯಣ

ಜಾತ್ರಾ ಮಹೋತ್ಸವದ ಹಿನ್ನೆಲೆ, ಮಠದ ಆವರಣದಲ್ಲಿ ಸಂಭ್ರಮ ಮನೆ ಮಾಡಿದೆ. ಮಠದ ತುಂಬೆಲ್ಲ ದೀಪಾಲಂಕಾರದಿಂದ ಸಿಂಗರಿಸಲಾಗಿದೆ. 15 ದಿನಗಳ ಕಾಲ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ನಡೆಯಲಿದ್ದು, ರೈತಾಪಿ ವರ್ಗಕ್ಕೆ ಸಹಕಾರಿ ಆಗುವ ಯೋಜನೆಗಳ ಪರಿಚಯಿಸಲಾಗಿದೆ.

ಕೈಗಾರಿಕಾ ಕೃಷಿ ಆರೋಗ್ಯ ತೋಟಗಾರಿಕೆ, ಅರಣ್ಯ, ರೇಷ್ಮೆ ನೀರಾವರಿ, ಶಿಕ್ಷಣ, ಪಶುಪಾಲನೆ, ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳು ಕಾರ್ಯಕ್ರಮದ ಯೋಜನೆಗಳನ್ನು ಪ್ರದರ್ಶಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಹಾಜರಿದ್ದರು.

ABOUT THE AUTHOR

...view details