ಕರ್ನಾಟಕ

karnataka

ಹಾಸನದ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ವ್ಯಕ್ತಿಯೊಬ್ಬನ ಕೊಲೆ

By

Published : Sep 24, 2021, 8:30 PM IST

ಕಳೆದ ನಾಲ್ಕು ವರ್ಷಗಳಿಂದಲೂ ಈತ ರಾಮು ಎನ್ನುವ ಗುತ್ತಿಗೆದಾರನ ಬಳಿ ಗಾರೆ ಕೆಲಸ ಮಾಡಿಕೊಂಡಿದ್ದ. ನಿನ್ನೆ ರಾತ್ರಿ ವಿದ್ಯಾರ್ಥಿನಿಲಯದಲ್ಲಿ ಮದ್ಯಪಾನ ಸೇವಿಸಿ ತನ್ನ ಸ್ನೇಹಿತನೊಂದಿಗೆ ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ..

ಹಾಸನದ ವಿದ್ಯಾರ್ಥಿ ನಿಲಯದಲ್ಲಿ ವ್ಯಕ್ತಿಯ ಕೊಲೆ
ಹಾಸನದ ವಿದ್ಯಾರ್ಥಿ ನಿಲಯದಲ್ಲಿ ವ್ಯಕ್ತಿಯ ಕೊಲೆ

ಹಾಸನ :ಹಾಸನದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ವಿದ್ಯಾರ್ಥಿನಿಲಯದ ಕೊಠಡಿಯೊಂದರಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಮಂಜುನಾಥ್ (29) ಎಂಬಾತ ಕೊಲೆಯಾದವ.

ಗಾರೆ ಕೆಲಸ ಮಾಡುತ್ತಿದ್ದ ಈತ, ನಿನ್ನೆ ಕಳೆದ ರಾತ್ರಿ ಮನೆಗೆ ಬಂದಿರಲಿಲ್ಲ. ಕುಟುಂಬಸ್ಥರು ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇಂದು ನಗರದ ಎಂಜಿರಸ್ತೆಯ ಸಮೀಪ ನಿರ್ಮಾಣವಾಗುತ್ತಿರುವ ಸರ್ಕಾರಿ ಕಲಾ ಕಾಲೇಜಿನ ಪುರುಷರ ವಿದ್ಯಾರ್ಥಿನಿಲಯದ ಕೊಠಡಿಯೊಂದರಲ್ಲಿ ಶವವಾಗಿ ಮಂಜುನಾಥ್ ಪತ್ತೆಯಾಗಿದ್ದಾನೆ.

ಕಳೆದ ನಾಲ್ಕು ವರ್ಷಗಳಿಂದಲೂ ಈತ ರಾಮು ಎನ್ನುವ ಗುತ್ತಿಗೆದಾರನ ಬಳಿ ಗಾರೆ ಕೆಲಸ ಮಾಡಿಕೊಂಡಿದ್ದ. ನಿನ್ನೆ ರಾತ್ರಿ ವಿದ್ಯಾರ್ಥಿನಿಲಯದಲ್ಲಿ ಮದ್ಯಪಾನ ಸೇವಿಸಿ ತನ್ನ ಸ್ನೇಹಿತನೊಂದಿಗೆ ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ.

ಕುತ್ತಿಗೆ ಭಾಗದಲ್ಲಿ ಕೆಲ ಗುರುತುಗಳು ಪತ್ತೆಯಾಗಿವೆ. ಮೃತದೇಹವನ್ನು ಹಾಸನದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದು, ಹಾಸನದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಮಹಿಳೆಯರ ಬಟ್ಟೆ ತೊಳೆದು, ಇಸ್ತ್ರಿ ಹಾಕುವ ಶಿಕ್ಷೆ ನೀಡಿದ ಕೋರ್ಟ್

ABOUT THE AUTHOR

...view details