ಕರ್ನಾಟಕ

karnataka

ಇಂದು ನಡೆದ ಖಾತೆ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ: ರಮೇಶ್ ಜಾರಕಿಹೊಳಿ

By

Published : Jan 22, 2021, 7:50 PM IST

ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ, ಹಾಗೇನಾದರೂ ಇದ್ದರೆ ಮುಖ್ಯಮಂತ್ರಿಗಳು ಎಲ್ಲವನ್ನು ಸರಿ ಮಾಡುತ್ತಾರೆ. ಇಂದು ನಡೆದ ಖಾತೆ ಬದಲಾವಣೆ ಬಗ್ಗೆ ಕೂಡ ನನಗೆ ಗೊತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಸನದಲ್ಲಿ ಹೇಳಿದರು.

Ramesh Jarkiholi
ರಮೇಶ್ ಜಾರಕಿಹೊಳಿ

ಹಾಸನ: ಖಾತೆ ಹಂಚಿಕೆ ಹಾಗೂ ಇಂದು ನಡೆದ ಖಾತೆ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ಯಡಿಯೂರಪ್ಪನವರ ನಿರ್ಧಾರಕ್ಕೆ ನಾವು ಬದ್ಧ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಜಾರಕಿಹೊಳಿ

ಹಾಸನದ ಆಲೂರು ತಾಲೂಕಿನಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಹಾಗೇನಾದರೂ ಇದ್ದರೆ ಮುಖ್ಯಮಂತ್ರಿಗಳು ಎಲ್ಲವನ್ನು ಸರಿ ಮಾಡುತ್ತಾರೆ. ಇಂದು ನಡೆದ ಖಾತೆ ಬದಲಾವಣೆಯೂ ಕೂಡ ನನಗೆ ಗೊತ್ತಿಲ್ಲ. ನಾನು ಬೆಂಗಳೂರಿಗೆ ಹೋದ ಬಳಿಕ ವಿಷಯವನ್ನು ತಿಳಿದುಕೊಳ್ಳುತ್ತೇನೆ ಎಂದರು.

ರಾಜ್ಯದಲ್ಲಿ ಜನರು ಸಾಕಷ್ಟು ಸಂಕಷ್ಟ ಎದುರಿಸಿದ್ದಾರೆ. ಹಾಗಾಗಿ ನಮ್ಮ ಬಿಜೆಪಿ ಸಚಿವರು ಮತ್ತು ಶಾಸಕರ ಜೊತೆ ಮಾತುಕತೆ ನಡೆಸಿ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಡುವಂತೆ ಹಾಗೂ ಮುಖ್ಯಮಂತ್ರಿಗಳ ಬೆನ್ನುಲುಬಾಗಿ ನಿಲ್ಲಬೇಕು ಎಂಬುದನ್ನು ನಾನು ಮನವರಿಕೆ ಮಾಡಿಕೊಡುತ್ತೇನೆ. ಆದರೆ ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಮತ್ತೊಮ್ಮೆ ಪುನರುಚ್ಚಾರ ಮಾಡಿದರು.

ಇನ್ನು ನೂತನ ಸಚಿವರ ಪ್ರಮಾಣ ವಚನ ಸಮಾರಂಭದಲ್ಲಿ ಸಾಕಷ್ಟು ಮಂದಿ ಗೈರಾಗಿದ್ದರು ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಮ್ಮ ಮುಖ್ಯಮಂತ್ರಿಯವರಿಗೆ ಎಲ್ಲರನ್ನೂ ಸಮಾಧಾನಪಡಿಸುವ ಶಕ್ತಿ ಇದೆ. ಅವರೇ ಎಲ್ಲವನ್ನು ನೋಡಿಕೊಳ್ಳುತ್ತಾರೆ ಎಂದು ಮಾತಿಗೆ ವಿರಾಮವಿಟ್ಟರು.

ABOUT THE AUTHOR

...view details