ಕರ್ನಾಟಕ

karnataka

ಮಳೆಯಿಂದ ಹಾನಿಯಾದ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಲು ಸೂಚನೆ: ಸಚಿವ ಕೆ.ಗೋಪಾಲಯ್ಯ

By

Published : Aug 7, 2021, 3:42 PM IST

ಹಾಸನದ ಮಲೆನಾಡು ಭಾಗದಲ್ಲಿ ಸುಮಾರು ನೂರಕ್ಕೂ ಅಧಿಕ ಮನೆಗಳು ಹಾನಿಗೊಳಗಾಗಿದ್ದು, 25ಕ್ಕೂ ಅಧಿಕ ಮನೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿವೆ. ಅಂತಹ ಮನೆಗಳಿಗೆ ಈಗಾಗಲೇ ಸರ್ಕಾರದಿಂದ ಮೊದಲ ಹಂತದಲ್ಲಿ 47 ಸಾವಿರ ರೂ. ಅವರ ಖಾತೆಗೆ ಹಾಕಲಾಗುತ್ತಿದೆ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು.

Minister K. Gopalya
ಅತಿವೃಷ್ಟಿ ಮತ್ತು ಅನಾವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಕೆ.ಗೋಪಾಲಯ್ಯ

ಹಾಸನ:ಕೋವಿಡ್ 3ನೇ ಅಲೆಗೆ ತಡೆಗೆ ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಜತೆಗೆ ಮಳೆಯಿಂದ ಹಾನಿಯಾದ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ನೂತನ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಅತಿವೃಷ್ಟಿ ಮತ್ತು ಅನಾವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಕೆ.ಗೋಪಾಲಯ್ಯ

ಅತಿವೃಷ್ಟಿ ಮತ್ತು ಅನಾವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಬೊಮ್ಮಾಯಿ ಸರ್ಕಾರದಲ್ಲಿ ಈಗಾಗಲೇ ಕೋವಿಡ್ -19ರ ಮುನ್ಸೂಚನಾ ಮಾರ್ಗಸೂಚಿಗಳನ್ನು ಪ್ರಕಟ ಮಾಡಲಾಗಿದೆ. ಹಾಸನದ ಮಲೆನಾಡು ಭಾಗದಲ್ಲಿ ಸುಮಾರು ನೂರಕ್ಕೂ ಅಧಿಕ ಮನೆಗಳು ಹಾನಿಗೊಳಗಾಗಿದ್ದು, 25ಕ್ಕೂ ಅಧಿಕ ಮನೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿವೆ. ಅಂತಹ ಮನೆಗಳಿಗೆ ಈಗಾಗಲೇ ಸರ್ಕಾರದಿಂದ ಮೊದಲ ಹಂತದಲ್ಲಿ 47 ಸಾವಿರ ರೂ. ಅವರ ಖಾತೆಗೆ ಹಾಕಲಾಗುತ್ತಿದೆ. ಸಂಪೂರ್ಣವಾಗಿ ಬಿದ್ದು ಹೋದ ಮನೆಗಳಿಗೆ 5 ಲಕ್ಷ ರೂ. ನೀಡುವ ಕಾರ್ಯವನ್ನು ಶೀಘ್ರದಲ್ಲಿ ಮಾಡುತ್ತೇವೆ ಎಂದರು.

ಅತಿವೃಷ್ಟಿ ಮತ್ತು ಅನಾವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಕೆ.ಗೋಪಾಲಯ್ಯ

ಮಲೆನಾಡು ಪ್ರದೇಶದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳ ನಿರ್ಮಾಣ ಸಂಬಂಧ ನಾನೇ ಖುದ್ದು ಸಿಎಂ ಭೇಟಿ ಮಾಡಿ ವಿಶೇಷ ಅನುದಾನ ಬಿಡುಗಡೆಗೆ ಆಗ್ರಹಿಸುತ್ತೇನೆ. ಹಾಸನದಿಂದ ಸಕಲೇಶಪುರ ಹೋಗುವ ರಾಷ್ಟ್ರೀಯ ಹೆದ್ದಾರಿ 75 ಬಾಳುಪೇಟೆ ಹಾಗೂ ಭಾಗ್ಯ ಗ್ರಾಮ ಸಮೀಪದ 2 ಹಳ್ಳಿಗೆ ಭೇಟಿ ನೀಡಿ ಬಿದ್ದು ಹೋದ ಮನೆಗಳ ಕುಟುಂಬಕ್ಕೆ ಸಾಂತ್ವನ ಹೇಳಿ, ಈಗಾಗಲೇ ತಾತ್ಕಾಲಿಕವಾಗಿ ತಮ್ಮ ಖಾತೆಗೆ ಹಣ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.

ಅತಿವೃಷ್ಟಿ ಮತ್ತು ಅನಾವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಕೆ.ಗೋಪಾಲಯ್ಯ

ಕೋವಿಡ್​​ 3ನೇ ಅಲೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಗೆ ವೈದ್ಯರನ್ನು ನೇಮಕ ಮಾಡಿಕೊಂಡರು ಅವರು ಕರ್ತವ್ಯಕ್ಕೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ತಕ್ಷಣ ನಾನು ಸರ್ಕಾರದ ಮಟ್ಟದಲ್ಲಿ ಸೂಕ್ತ ಕ್ರಮಕೈಗೊಳ್ಳುವಂತೆ ನೂತನ ಸಚಿವರ ಗಮನ ಸೆಳೆದು ತಕ್ಷಣ ಮಕ್ಕಳ ತಜ್ಞರು, ಅರಿವಳಿಕೆ ಹಾಗೂ ಇತರ ತಜ್ಞರ ವೈದ್ಯರಗಳನ್ನು ನೇಮಕಾತಿ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

ಅತಿವೃಷ್ಟಿ ಮತ್ತು ಅನಾವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಕೆ.ಗೋಪಾಲಯ್ಯ

ಮಳೆಯಿಂದ ಹಾನಿಯಾಗಿರುವ ಬೆಳೆ ಹಾಗೂ ಕಾಡಾನೆ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ABOUT THE AUTHOR

...view details