ಕರ್ನಾಟಕ

karnataka

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಗಲಾಟೆ, ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

By ETV Bharat Karnataka Team

Published : Nov 17, 2023, 9:47 PM IST

ತಾವು ಬಿಟ್ಟ ಹೋರಿಯನ್ನು ಹಿಡಿದಿದ್ದಕ್ಕೆ ಕೋಪಗೊಂಡ ಯುವಕರ ಗುಂಪು ಯುವಕನೊಬ್ಬನಿಗೆ ಥಳಿಸಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

Etv Bharatassault-on-a-youth-by-gruop-of-people-in-haveri
ಹೋರಿ ಬೆದರಿಸುವ ಸ್ಪರ್ಧೆ ವೇಳೆ ಗಲಾಟೆ, ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

ಹಾವೇರಿ: ತಾಲೂಕಿನ ಕೋಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ದೀಪಾವಳಿ ನಿಮಿತ್ತ ಕೋಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ನವೆಂಬರ್​ 14ರಂದು ನಡೆದ ಸ್ಪರ್ಧೆ ವೇಳೆ ಯುವಕನೊಬ್ಬ ಬಿಟ್ಟ ಹೋರಿಯನ್ನು ಮತ್ತೊಂದು ಗುಂಪಿನ ಯುವಕ ಹಿಡಿದಿರುವುದೇ ಗಲಾಟೆಗೆ ಕಾರಣವಾಗಿದೆ. ಯುವಕ ಕುಮಾರ್​ ಹೋರಿ ಹಿಡಿದಿದ್ದರಿಂದ ಆಕ್ರೋಶಗೊಂಡ ಮತ್ತೋರ್ವ ಯುವಕ, ನ.16 ರಂದು ತನ್ನ ಸ್ನೇಹಿತರನ್ನು ಕರೆದುಕೊಂಡು ಬಂದು ಮನಬಂದಂತೆ ಥಳಿಸಿದ್ದರು.

ದೊಣ್ಣೆ ಸೇರಿದಂತೆ ಮಾರಕ ಆಯುಧಗಳಿಂದ ಕುಮಾರ್​ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ದೂರಲಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಯುವಕ ಕುಮಾರ್​ನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಬೆನ್ನಲ್ಲೇ ಆರೋಪಿತ ಯುವಕರು ಕೋಳೂರು ಗ್ರಾಮ ತೊರೆದಿದ್ದಾರೆ ಎಂದು ತಿಳುದುಬಂದಿದೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಗಾದ ಯುವಕನ ಕಡೆಯವರು ದೂರು ದಾಖಲಿಸಿದ್ದಾರೆ.

ಅದರ ಅನ್ವಯ 15 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಿವರ್ಷ ಕೋಳೂರು ಗ್ರಾಮದಲ್ಲಿ ದೀಪಾವಳಿ ಸಮಯದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗುತ್ತದೆ. ಹಲವು ದಶಕಗಳಿಂದ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜನೆ ಮಾಡಿದ್ದರೂ ಈ ರೀತಿಯ ಘಟನೆ ನಡೆದಿರಲಿಲ್ಲ. ಈ ಕೂಡಲೇ ಆರೋಪಿಗಳನ್ನು ಬಂಧಿಸಬೇಕು, ಇಲ್ಲದಿದ್ದರೆ ಸೋಮವಾರದಿಂದ ಪ್ರತಿಭಟನೆ ಹಾದಿ ಹಿಡಿಯಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ನೇಜಾರು ಕೊಲೆ ಪ್ರಕರಣ: ಮಹಜರು ವೇಳೆ ಸಾರ್ವಜನಿಕರ ಆಕ್ರೋಶ, ಪೊಲೀಸರಿಂದ ಲಾಠಿ ಪ್ರಹಾರ

ABOUT THE AUTHOR

...view details