ಕರ್ನಾಟಕ

karnataka

ಕಾಂಗ್ರೆಸ್‌ನ​​ ಒಬ್ಬ ಶಾಸಕರಾದರೂ​ ಯತ್ನಾಳ್​ ಸಂಪರ್ಕದಲ್ಲಿದ್ದಾರಾ?: ಸಚಿವ ಶಿವಾನಂದ ಪಾಟೀಲ್

By

Published : Aug 15, 2023, 5:22 PM IST

Minister Shivananda Patil: ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿಕೆಯನ್ನು ಸಚಿವ ಶಿವಾನಂದ ಪಾಟೀಲ್ ಟೀಕಿಸಿದರು.

minister-shivananda-patil-slams-mla-basangowda-patil-yatnal
ಸಚಿವ ಶಿವಾನಂದ ಪಾಟೀಲ್

ಸಚಿವ ಶಿವಾನಂದ ಪಾಟೀಲ್ ಪ್ರತಿಕ್ರಿಯೆ

ಹಾವೇರಿ: "ಕಾಂಗ್ರೆಸ್ಸಿನ 25 ಶಾಸಕರ ವಿಷಯ ಹಾಗಿರಲಿ, ವಿಜಯಪುರ ಜಿಲ್ಲೆಯ 6 ಕಾಂಗ್ರೆಸ್​ ಶಾಸಕರಲ್ಲಿ ಒಬ್ಬರಾದರೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಸಂಪರ್ಕದಲ್ಲಿದ್ದಾರಾ" ಎಂದು ಸಚಿವ ಶಿವಾನಂದ ಪಾಟೀಲ್ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, "ಕಾಂಗ್ರೆಸ್‌ನ 25 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಯತ್ನಾಳ್​ ಹೇಳಿಕೆಗೆ ಪ್ರತಿಕ್ರಿಯಿಸಿ, ಬಸನಗೌಡ ಪಾಟೀಲ್ ಯತ್ನಾಳ್ ಹೇಗೆ ಬೇಕಾದರೂ ಹೇಳಲಿ, ಅದು ನಮಗೆ ಸಂಬಂಧವಿಲ್ಲ" ಎಂದರು.

ತಮಿಳುನಾಡು ಸರ್ಕಾರ ಕಾವೇರಿ ನೀರು ಸಂಬಂಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಬಗ್ಗೆ ಮಾತನಾಡಿ, "ತಮಿಳುನಾಡು ಸರ್ಕಾರ ಪ್ರತಿವರ್ಷ ನ್ಯಾಯಾಲಯದ ಮೊರೆ ಹೋಗುತ್ತದೆ. ರಾಜ್ಯದಲ್ಲಿ ಮಳೆ ಸರಿಯಾಗಿ ಆಗದೇ ನೀರು ಬಿಡುವುದು ಹೇಗೆ?. ರಾಜ್ಯದಲ್ಲಿ ಬರಗಾಲ ಎಂದು ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಸಿಎಂ ಮಾಡಿರುವ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸುವ ನಿರೀಕ್ಷೆ ಇದೆ" ಎಂದು ಹೇಳಿದರು.

ಇದೇ ವೇಳೆ, "ರಾಜ್ಯದಲ್ಲಿ ಬೀಜ ಬಿತ್ತನೆ ಚೆನ್ನಾಗಿ ಆಗಿದೆ. ಇನ್ನೊಂದು ವಾರ ಅಥವಾ ಎರಡು ವಾರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಒಂದು ವೇಳೆ ಮಳೆಯಾಗದೆ ಪರಿಸ್ಥಿತಿ ಹದಗೆಟ್ಟರೆ ಸಿಎಂ ಗಮನಕ್ಕೆ ತಂದು ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗುವುದು" ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿರುವ ಬಗ್ಗೆ ಮಾತನಾಡುತ್ತಾ, "ಕನ್ನಡ ಶಾಲೆಗಳಿಗೆ ಸಿಎಂ ಸಿದ್ದರಾಮಯ್ಯ ಈ ವರ್ಷ ಅಲ್ಲದಿದ್ದರೂ ಮುಂದಿನ ವರ್ಷದಲ್ಲಾದರೂ ಹಣ ನೀಡುವ ಭರವಸೆ ನೀಡಿದ್ದಾರೆ. ಜನರು ಆರ್ಥಿಕರಾಗಿ ಸಬಲರಾಗುತ್ತಿರುವ ಕಾರಣ ಸರ್ಕಾರಿ ಶಾಲೆಗಳ ಮೇಲಿನ ಅವಲಂಬನೆ ಕಡಿಮೆಯಾಗುತ್ತಿದೆ. ಈ ಕಾರಣದಿಂದಲೂ ಸಹ ಕನ್ನಡ ಶಾಲೆಗಳು ಮುಚ್ಚುತ್ತಿವೆ" ಎಂದು ಮಾಹಿತಿ ನೀಡಿದರು.

"ಹಾವೇರಿ ಮೆಡಿಕಲ್ ಕಾಲೇಜು ಸೇರಿದಂತೆ ನಾಲ್ಕು ಮೆಡಿಕಲ್ ಕಾಲೇಜುಗಳಲ್ಲಿನ ಅಕ್ರಮದ ಬಗ್ಗೆ ತನಿಖೆ ಆರಂಭವಾಗಿದೆ. ನಾವು ಕಟ್ಟಡದಲ್ಲಿ ಆದಷ್ಟು ಬೇಗ ತರಗತಿ ಆರಂಭಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ. ಮೊದಲ ಮತ್ತು ಎರಡನೇಯ ವರ್ಷದ ವಿದ್ಯಾರ್ಥಿಗಳು ಇದೇ ಕಟ್ಟಡದಲ್ಲಿ ವಿದ್ಯಾಭ್ಯಾಸ ಮಾಡಬೇಕು ಎನ್ನುವ ಗುರಿ ಇಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಆದಷ್ಟು ಬೇಗ ಈ ಕೆಲಸ ಆಗಲಿದೆ" ಎಂದು ಸಚಿವ ಶಿವಾನಂದ್​ ಪಾಟೀಲ್ ಭರವಸೆ ಕೊಟ್ಟರು.

ಇದನ್ನೂ ಓದಿ :Siddaramaiah: 'ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷ್ ಏಜೆಂಟರ ಬಗ್ಗೆ ಎಚ್ಚರವಿರಲಿ': ಸಿದ್ದರಾಮಯ್ಯ

ABOUT THE AUTHOR

...view details