ಕರ್ನಾಟಕ

karnataka

ಹಾವೇರಿಯಲ್ಲಿ ಬಸ್ ಸೌಕರ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

By

Published : Feb 4, 2021, 7:55 AM IST

ಬಸ್ ಸೌಕರ್ಯಕ್ಕೆ ಆಗ್ರಹಿಸಿ ಸವಣೂರು ತಾಲೂಕಿನ ಕಡಕೋಳ ಕೃಷ್ಣಾಪುರ ಗ್ರಾಮಗಳ ಸುಮಾರು 60ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

haveri
ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹಾವೇರಿ:ಬಸ್ ಸೌಕರ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಸವಣೂರು ತಾಲೂಕಿನ ಕಡಕೋಳ, ಕೃಷ್ಣಾಪುರ ಗ್ರಾಮಗಳ ಸುಮಾರು 60ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಸ್ ನಿಲ್ದಾಣಕ್ಕೆ ಬರುವ ಮತ್ತು ನಿಲ್ದಾಣಗಳಿಂದ ಹೋಗುವ ಬಸ್‌ಗಳನ್ನು ತಡೆದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳು ಬಸ್ ಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು

ಈ ಮಧ್ಯೆ ಸ್ಥಳಕ್ಕಾಗಮಿಸಿದ ಪೊಲೀಸರನ್ನು ಸಹ ವಿದ್ಯಾರ್ಥಿಗಳು ತರಾಟೆಗೆ ತಗೆದುಕೊಂಡರು. ಸಾರಿಗೆ ಸಚಿವರು ಸಾರ್ವಜನಿಕ ಬಸ್‌ಗಳಲ್ಲಿ ಓಡಾಡಲಿ, ನಮ್ಮಂತಹ ವಿದ್ಯಾರ್ಥಿಗಳ ಸಮಸ್ಯೆ ಆಲಿಸಬೇಕು. ಅದನ್ನು ಬಿಟ್ಟು ಎಸಿ ಕಾರಿನಲ್ಲಿ ಸಂಚರಿಸಿದರೆ ಸಮಸ್ಯೆಗಳು ಗೊತ್ತಾಗುವುದಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details