ಕರ್ನಾಟಕ

karnataka

ETV Bharat / state

Haveri: ಕಾರು ಮತ್ತು ಲಾರಿ ನಡುವೆ ಡಿಕ್ಕಿ - ಇಬ್ಬರು ಸಾವು

ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೆಂಗಳೂರು ಮೂಲದ ಇಬ್ಬರು ಸಾವನ್ನಪ್ಪಿದ್ದಾರೆ.

accident
ಕಾರು ಮತ್ತು ಲಾರಿ ನಡುವೆ ಡಿಕ್ಕಿ

By

Published : Aug 12, 2023, 10:44 AM IST

ಹಾವೇರಿ : ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ‌ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಮನೋಹರ ಬಿ (38) ಮತ್ತು ಪ್ರಿಯಾಂಕಾ (23) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೊನಾಲಿಸಾ (38) ಎಂಬ ಹೆಸರಿನ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಬಾಂಬೆ ಮಾರ್ಗವಾಗಿ ಹೊರಟ್ಟಿದ್ದಾಗ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೈಕ್ ಸವಾರ ಸಾವು : ಇನ್ನು ಕಳೆದ 2 ದಿನಗಳ ಹಿಂದೆ ಗುರುವಾರ ರಾತ್ರಿ ಧಾರವಾಡದ ಬೈಪಾಸ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಬ್ಬ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ನಿವಾಸಿ ಸಂತೋಷ್ ಭೋಸಲೆ (30) ಮೃತರು. ಭೀಕರ ರಸ್ತೆ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಲಾರಿ ಎಡಭಾಗದ ರಸ್ತೆಯಲ್ಲಿ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಓವರ್‌ ಟೇಕ್ ಮಾಡಲು ಹೋದ ಬೈಕ್, ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಸವಾರ ಸ್ಥಳದಲ್ಲೇ ಅಸುನೀಗಿದ್ದರು.​ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :Fire accident : ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ; ಪೊಲೀಸ್ ತನಿಖೆಗೆ ಸಿಎಂ ಸೂಚನೆ - ಡಿಕೆಶಿ

ಕಾರು ಅಪಘಾತ : ಹಾಗೆಯೇ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗ್ರಾಮದ ಬಳಿ ಅತಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್​ಗಳಿಗೆ ಡಿಕ್ಕಿ ಹೊಡೆದಿದ್ದು, ಪಕ್ಕದಲ್ಲೇ ನಿಂತಿದ್ದ ಜನರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ಆ. 5 ರಂದು ಶನಿವಾರ ನಡೆಸಿತ್ತು.

ಇದನ್ನೂ ಓದಿ :Ramanagar accident : ಟ್ಯೂಶನ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಗೂಡ್ಸ್​ ವಾಹನ ಡಿಕ್ಕಿ.. ಸ್ಥಳದಲ್ಲೇ ಇಬ್ಬರು ಮಕ್ಕಳು ಸಾವು

ಗೂಡ್ಸ್​ ವಾಹನ ಡಿಕ್ಕಿ :ಆಗಸ್ಟ್​ 10 ರಂದು ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಬಳಿ ಟ್ಯೂಶನ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಮಕ್ಕಳಿಗೆ ಗೂಡ್ಸ್​ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆಯಿಂದ ಅನೇಕರು ಗಂಭೀರವಾಗಿ ಗಾಯಗೊಂಡಿದ್ದರು. ರೋಹಿತ್ (5), ಶಾಲಿನಿ (8) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಉಳಿದ ಸುಚಿತ್, ಗೌತಮಿ, ಲೇಖನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು.

ಇದನ್ನೂ ಓದಿ :ಓವರ್‌ಟೇಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಬೈಕ್ ಸವಾರ : ಸಿಸಿಟಿವಿ ದೃಶ್ಯ

ABOUT THE AUTHOR

...view details