ಕರ್ನಾಟಕ

karnataka

ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ

By

Published : Apr 20, 2022, 6:01 PM IST

ಸಿಎಂ ನೇತೃತ್ವದಲ್ಲಿ ಕಲಬುರಗಿಯಲ್ಲಿ ವಿಭಾಗ ಮಟ್ಟದ ಪದಾಧಿಕಾರಿಗಳ ಸಂಘಟನಾ ಸಭೆ ನಾಳೆಯಿಂದ ನಡೆಯಲಿದೆ.

2 day BJP Core Committee meeting in Kalaburagi from tomorrow
ಕೋರ್ ಕಮೀಟಿ ಸಭೆ

ಕಲಬುರಗಿ:ನಾಳೆಯಿಂದ ಎರಡು ದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕಲಬುರಗಿಯಲ್ಲಿ ವಿಭಾಗ ಮಟ್ಟದ ಪದಾಧಿಕಾರಿಗಳ ಸಂಘಟನಾ ಸಭೆ ನಡೆಯಲಿದೆ. ಈ ಮೂಲಕ ಕಲಬುರಗಿ, ಬೀದರ್ ಮತ್ತು ಯಾದಗಿರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲು ಬಿಜೆಪಿ ಮುಂದಾಗಿದೆ.

ಸೇಡಂ ರಸ್ತೆಯಲ್ಲಿರುವ ಗೀತಾ ನಗರದ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಕೋರ್ ಕಮಿಟಿ ಪ್ರಾರಂಭಗೊಳ್ಳಲಿದೆ. ಬಸವರಾಜ ಬೊಮ್ಮಾಯಿ ನೇತೃತ್ವ ವಹಿಸಲಿದ್ದಾರೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ, ಭಗವಂತ ಖೂಭಾ ಮತ್ತು ಅಶ್ವತ್ಥ ನಾರಾಯಣ್, ವಿಜಯೇಂದ್ರ, ಲಕ್ಷ್ಮಣ ಸವದಿ, ನಿರ್ಮಲ್‌ ಕುಮಾರ ಸುರನ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.

ಮಹತ್ವದ ಕಾರ್ಯ ಯೋಜನೆಗಳ ಬಗ್ಗೆ ಚರ್ಚೆ:ಕಲಬುರಗಿ, ಬೀದರ್, ಯಾದಗಿರಿ, ಮೂರು ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು, ಸಂಸದರು, ಪಕ್ಷದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಪಕ್ಷದ ಸಂಘಟನೆ, ಕಾರ್ಯಕರ್ತರ ಕುಂದುಕೊರತೆ ಸೇರಿ ಅನೇಕ ಮಹತ್ವದ ಕಾರ್ಯ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ ಹೇಳಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಅಲ್ಲ ಸುಳ್ಳಿನರಾಮಯ್ಯ, ಬಿಜೆಪಿ ಬೆಂಕಿಗೆ ಕಾಂಗ್ರೆಸ್ ಪೆಟ್ರೋಲ್ : ಹೆಚ್​​​​​.ಡಿ.ಕುಮಾರಸ್ವಾಮಿ

TAGGED:

ABOUT THE AUTHOR

...view details