ಕರ್ನಾಟಕ

karnataka

ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಸಚಿವ ಶೆಟ್ಟರ್​​

By

Published : Aug 31, 2020, 11:46 AM IST

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇವಲ ಟೀಕೆ ಮಾಡುವುದರಲ್ಲಿ ನಿಸ್ಸೀಮರು ಎಂದು ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ಸಚಿವ ಜಗದೀಶ್​ ಶೆಟ್ಟರ್​
ಸಚಿವ ಜಗದೀಶ್​ ಶೆಟ್ಟರ್​

ಕಲಬುರಗಿ: ಪ್ರತಿಪಕ್ಷದವರಿಗೆ ಟೀಕಿಸಲು ಯಾವುದೇ ವಿಷಯಗಳಿಲ್ಲ. ಹೀಗಾಗಿ ಇಲ್ಲಸಲ್ಲದ ವಿಷಯಗಳನ್ನು ತೆಗೆದುಕೊಂಡು ಕೀಳಾಗಿ ಮಾತನಾಡುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೇವಲ ಟೀಕೆ ಮಾಡುವುದರಲ್ಲಿ ನಿಸ್ಸೀಮರು. ಯಾವುದೇ ವಿಷಯಗಳಿಲ್ಲದ ಕಾರಣ ಕೀಳಾಗಿ ಮಾತಾಡುತ್ತಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದು ಒಳ್ಳೆಯದಲ್ಲ ಎಂದರು.

ಸಚಿವ ಜಗದೀಶ್ ಶೆಟ್ಟರ್

ಇನ್ನು ಡ್ರಗ್ಸ್​ ಮಾಫಿಯಾ ಕುರಿತು ಮಾತನಾಡಿದ ಅವರು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಡ್ರಗ್ಸ್​ ಮಾಫಿಯಾದಲ್ಲಿ ಯಾರ್ಯಾರು ಇದ್ದಾರೆ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ. ಎಂತಹ ಪ್ರಭಾವಿಗಳಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ABOUT THE AUTHOR

...view details