ಕರ್ನಾಟಕ

karnataka

ಕಲಬುರಗಿಯಲ್ಲಿ ಅದ್ಧೂರಿ ಕಲ್ಯಾಣ ಕರ್ನಾಟಕೋತ್ಸವ: ಅಭಿವೃದ್ಧಿಯ ಪಣ ತೊಟ್ಟಿರುವುದಾಗಿ ಸಿಎಂ ಘೋಷಣೆ

By

Published : Sep 17, 2020, 6:24 PM IST

ಕಲಬುರಗಿ ನಗರದಲ್ಲಿ ಇಂದು ಕಲ್ಯಾಣ ಕರ್ನಾಟಕ ಉತ್ಸವ ಅದ್ಧೂರಿಯಾಗಿ ನಡೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.

Kalyana Karnatakotsava
ಕಲ್ಯಾಣ ಕರ್ನಾಟಕೋತ್ಸವ ಕಾರ್ಯಕ್ರಮ

ಕಲಬುರಗಿ: ಮಳೆಯ ಆತಂಕದ ನಡುವೆಯೂ ಇಂದು ಕಲ್ಯಾಣ ಕರ್ನಾಟಕ ಉತ್ಸವ ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲಾದ ಕಲಬುರಗಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಬಂದಿಳಿದ ಯಡಿಯೂರಪ್ಪ, ನೇರವಾಗಿ ಎಸ್.ವಿ.ಪಿ ವೃತ್ತಕ್ಕೆ ತೆರಳಿ ಸರ್ದಾರ್ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಡಿ.ಎ.ಆರ್ ಮೈದಾನಕ್ಕೆ ತೆರಳಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ಪರೇಡ್ ಪರಿವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕರಿಸಿದರು.

ಕಾರ್ಯಕ್ರಮದ ಬಳಿಕ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ವರುಣದೇವನಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಕಲಬುರಗಿಯಲ್ಲಿ ಮಳೆ ಜೋರಾಗಿರುವ ಕಾರಣ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಕಡಿಮೆ ಇತ್ತು. ಆದರೆ ಮಳೆರಾಯ ಶಾಂತವಾಗಿ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟಿರುವುದು ಅತೀವ ಸಂತಸ ತಂದಿದೆ ಎಂದರು.

ಕಲ್ಯಾಣ ಕರ್ನಾಟಕೋತ್ಸವ ಕಾರ್ಯಕ್ರಮ

ನಿಜಾಮರ ಕಪಿಮುಷ್ಟಿಯಲ್ಲಿದ್ದ ಕಲ್ಯಾಣ ಕರ್ನಾಟಕಕ್ಕೆ ಸರ್ದಾರ್ ಪಟೇಲರ ಪ್ರಯತ್ನದಿಂದಾಗಿ ಒಂದು ವರ್ಷ ತಡವಾಗಿ ಸ್ವಾತಂತ್ರ್ಯ ದೂರೆತಿದೆ. ಹೈದರಾಬಾದ್​​ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿ ವರ್ಷ ತುಂಬಿದ್ದು, ನಮ್ಮ ಎರಡು ವರ್ಷ ಅವಧಿಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಆಯಾಮ ನೀಡುತ್ತೇವೆ. ಕೃಷಿ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಆಶ್ವಾಸನೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ಕನಸುಗಾರ. ಅವರು ಈ ಭಾಗದ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹೊಂದಿದ್ದಾರೆ. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಗೋವಿಂದ ಕಾರಜೋಳ ಹೇಳಿದರು.

ಕಾಗಿಣಾ ನದಿ ವ್ಯಾಪ್ತಿಯಲ್ಲಿ 10 ಏತ ನೀರಾವರಿ ಯೋಜನೆ ಸ್ಥಾಪನೆಯ ಭರವಸೆ:

ಕಲ್ಯಾಣ ಕರ್ನಾಟಕ ಉತ್ಸವ ವೇಳೆ ಸಿಎಂ ಯಡಿಯೂರಪ್ಪ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಜಯದೇವ ಹೃದ್ರೋಗ ಸಂಸ್ಥೆಯ ಸಹಯೋಗದೊಂದಿಗೆ ನಗರಕ್ಕೆ 24ಗಂಟೆಗಳ ಕಾಲ ನಿರಂತರ ನೀರು ಪೂರೈಕೆ ಯೋಜನೆಗೆ ಅಡಿಗಲ್ಲು, ರಸ್ತೆ ಅಗಲೀಕರಣ, ಜೇವರ್ಗಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇನ್ನು ಇದೇ ವೇಳೆ ಕಾಗಿಣಾ ನದಿ ವ್ಯಾಪ್ತಿಯಲ್ಲಿ 10 ಏತ ನೀರಾವರಿ ಯೋಜನೆ ಸ್ಥಾಪನೆಗೆ ಭರವಸೆ ನೀಡಿದರು.

ABOUT THE AUTHOR

...view details