ಕರ್ನಾಟಕ

karnataka

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ ಕೂಲಿ ಕಾರ್ಮಿಕನ ಬರ್ಬರ ಹತ್ಯೆ

By

Published : Mar 11, 2020, 12:32 PM IST

ಕೂಲಿ ಕಾರ್ಮಿಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಆಶೀರ್ವಾದ ಕಲ್ಯಾಣ ಮಂಟಪ ಬಳಿ ನಡೆದಿದೆ. ಜಗನ್ನಾಥ ಸ್ವಾದಿ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ.

Wage labor murder  at kalburgi
ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ ಕೂಲಿ ಕಾರ್ಮಿಕನ ಬರ್ಬರ ಹತ್ಯೆ

ಕಲಬುರಗಿ:ಕೂಲಿ ಕಾರ್ಮಿಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಆಶೀರ್ವಾದ ಕಲ್ಯಾಣ ಮಂಟಪ ಬಳಿ ನಡೆದಿದೆ.

ಜಗನ್ನಾಥ ಸ್ವಾದಿ

ಸಿದ್ದರಾಮೇಶ್ವರ ಕಾಲೋನಿ ನಿವಾಸಿ ಜಗನ್ನಾಥ ಸ್ವಾದಿ (54) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ನಿನ್ನೆ ತಡರಾತ್ರಿ ನಗರದ ಆಶೀರ್ವಾದ ಕಲ್ಯಾಣ ಮಂಟಪ ಬಳಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಚೌಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ABOUT THE AUTHOR

...view details