ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಕಾಡಾನೆ ದಾಳಿ: ಪ್ರಾಣಾಪಾಯದಿಂದ ಕಾರ್ಮಿಕರು ಪಾರು

ಸುರೇಂದ್ರ ಮತ್ತು ಜನಾರ್ದನ ಎನ್ನುವವರು ನಿನ್ನೆ ಮುಂಜಾನೆ ಕಾಫಿ ತೋಟ ಕೆಲಸಕ್ಕೆ‌ ಹೋಗುವ ವೇಳೆ ಕಾಡಾನೆಯೊಮದು ದಾಳಿ ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಮಿಕರ ಮೇಲೆ ಕಾಡಾನೆ ನಿರಂತರ ದಾಳಿ ಮಾಡುತ್ತಿರುವುದನ್ನು ತಡೆಗಟ್ಟಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

forest elephant attack case
ಕೊಡಗಿನಲ್ಲಿ ಕಾಡಾನೆ ದಾಳಿ: ಪ್ರಾಣಾಪಾಯದಿಂದ ಪಾರಾದ ಕಾರ್ಮಿಕರು!

By

Published : May 6, 2021, 7:47 AM IST

ಕೊಡಗು: ನಿನ್ನೆ ಕಾಡಾನೆ ದಾಳಿಯಿಂದ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಸಿದ್ದಾಪುರ ಸಮೀಪದ ಬರಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕಾಡಾನೆ ದಾಳಿ ಪ್ರಕರಣ - ಸ್ಥಳೀಯರ ಆಕ್ರೋಶ

ಸುರೇಂದ್ರ(50), ಜನಾರ್ದನ (45) ಎನ್ನುವವರು ಆನೆ ದಾಳಿಯಿಂದ ಗಾಯಗೊಂಡವರು. ಇವರು ಬೆಳಗ್ಗೆ ಕಾಫಿ ತೋಟದ ಕೆಲಸಕ್ಕೆ‌ ಹೋಗುತ್ತಿದ್ದಾಗ ದಾರಿಯಲ್ಲಿ ಘಟನೆ ಸಂಭವಿಸಿದೆ. ಸುರೇಂದ್ರ ಎನ್ನುವವರು ಆನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದರೆ, ಜನಾರ್ದನ ಎನ್ನುವವರು ಬಿದ್ದು ಬಳಿಕ ಓಡಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರನ್ನೂ ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಸ್ಥಳೀಯರ ಆಕ್ರೋಶ

ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಪಂಚಾಯತ್​​ ವ್ಯಾಪ್ತಿಯ ಬರಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೆಲ ದಿನಗಳಿಂದ ಗ್ರಾಮದ ವ್ಯಾಪ್ತಿಯಲ್ಲಿ ಕಾಡಾನೆ ಕಾಣಿಸಿಕೊಂಡು ಆತಂಕ ಸೃಷ್ಟಿ ಮಾಡಿತ್ತು. ನಿನ್ನೆ ಕಾಡಾನೆ ಇಬ್ಬರ ಮೇಲೆ ದಾಳಿ ಮಾಡಿದ್ದು ಭಯದ ವಾತಾವರಣದಲ್ಲೇ ಜನರು ಜೀವನ‌ ಮಾಡುವಂತಾಗಿದೆ.

ಇದನ್ನೂ ಓದಿ:ಕೈಗೆ ಬಂದ ಬೆಳೆ ಮಾರಲಾಗದೆ ಸಂಕಷ್ಟಕ್ಕೆ ಸಿಲುಕಿದ ರೈತ: ಸಹಾಯ ಮಾಡುವಂತೆ ಮನವಿ

ರಸ್ತೆಯಲ್ಲಿ ಓಡಾಡುವುದು, ಕೂಲಿ ಕೆಲಸಕ್ಕೆ ಹೋಗುವುದು ಕಷ್ಟವಾಗಿದೆ. ತಿಂಗಳ ಹಿಂದೆ ಸಿದ್ದಾಪುರ ಭಾಗದಲ್ಲಿ ಇಬ್ಬರು ಆನೆ ದಾಳಿಗೆ ಬಲಿಯಾಗಿದ್ರು. ಅಲ್ಲದೇ ರೈತರ ಬೆಳೆ ನಾಶಪಡಿಸುತ್ತಿವೆ. ಆದರೆ ಕಾರ್ಮಿಕರ ಮೇಲೆ ನಿರಂತರ ದಾಳಿ ಮಾಡುತ್ತಿರುವುದನ್ನು ತಡೆಗಟ್ಟಲು ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಸ್ಥಳೀಯರು ಮತ್ತು ಕಾರ್ಮಿಕ ಸಂಘಟನೆಯವರು ಆರಣ್ಯ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details