ಕರ್ನಾಟಕ

karnataka

ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಭರ್ತಿ.. ಧರೆಗುರುಳಿದ ವಿದ್ಯುತ್ ಕಂಬಗಳು

By

Published : Jul 14, 2022, 7:09 PM IST

ಕೊಡಗಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಅಲ್ಲದೇ ಸೋಮವಾರಪೇಟೆಯಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿವೆ.

ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಭರ್ತಿ
ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಭರ್ತಿ

ಕೊಡಗು:ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮಳೆಯೊಂದಿಗೆ ರಭಸವಾಗಿ ಗಾಳಿ ಕೂಡ ಬೀಸುತ್ತಿದ್ದು, ಜಿಲ್ಲೆಯ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಭಾರಿ ಗಾಳಿ ಮಳೆಗೆ ಅಲ್ಲಲ್ಲಿ ಮರಗಳು ಬೀಳುತ್ತಿರುವುದರಿಂದ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ. ಮರಗಳಷ್ಟೇ ಅಲ್ಲ, ವಿದ್ಯುತ್ ಕಂಬಗಳು ಬಿದ್ದಿದ್ದು, ಗ್ರಾಮೀಣ ಪ್ರದೇಶಗಳು ಕಗ್ಗತ್ತಲ್ಲಲ್ಲಿ ಮುಳುಗುವಂತಾಗಿದೆ.

ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಭರ್ತಿ

ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲುಗೆ ಹೋಗುವ ರಸ್ತೆ ಸಂಪರ್ಕ ಕಡಿತವಾಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತ್ರಿವೇಣಿ ಸಂಗಮ ಭರ್ತಿಯಾದ ಹಿನ್ನೆಲೆ ಜನ ಸಂಚಾರಕ್ಕೆ ತೊಂದರೆಯಾಗಿದೆ. ಗ್ರಾಮಗಳಿಗೆ ತೆರಳಲು ಬೋಟ್ ವ್ಯವಸ್ಥೆ ಮಾಡಲಾಗಿದೆ.

ಗಾಳಿ ಸಹಿತ ಮಳೆಯಾಗುತ್ತಿರುವ ಹಿನ್ನೆಲೆ ಮಡಿಕೇರಿ ನಗರದ ಸೋಮವಾರಪೇಟೆಯಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿವೆ. 6 ಕಂಬಗಳು ವಿದ್ಯುತ್ ತಂತಿ ಸಹಿತ ರಸ್ತೆಗೆ ಬಿದ್ದಿವೆ. ದಕ್ಷಿಣ ಕೊಡಗಿನಲ್ಲಿ ಮಳೆ ಹೆಚ್ಚಾಗಿದ್ದು, ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಮತ್ತಿ ನಾಲ್ಕೇರಿ ತರೆಳುವ ರಸ್ತೆ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ ಸೇತುವೆಯನ್ನು ಬಂದ್ ಮಾಡಲಾಗಿದೆ.

ಇದನ್ನೂ ಓದಿ:ಭಾಗಮಂಡಲದಲ್ಲಿ ರಸ್ತೆ ಸಂಚಾರ ಕಡಿತ; ಭೂಕಂಪನದಿಂದ ಬೆಚ್ಚಿದ ಗಡಿಭಾಗದ ಜನತೆ

ABOUT THE AUTHOR

...view details