ಕರ್ನಾಟಕ

karnataka

ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ನಾಲ್ವರ ಬಂಧನ..

By

Published : Nov 27, 2019, 7:17 PM IST

ತಿರುಪತಿಯಿಂದ ತುಮಕೂರು ಕಡೆಗೆ ಖಾಸಗಿ ಬಸ್​​ನಲ್ಲಿ ನಾಲ್ವರು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವೇಳಿ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Four people were arrested
ಬಂಧಿತ ಆರೋಪಿಗಳು

ಕೋಲಾರ:ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಮಾದಕ ನಿಗ್ರಹ ದಳದ ಪೊಲೀಸರು ಕಾರ್ಯಚಾರಣೆ ನಡೆಸಿ ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ‌.

ಆರೋಪಿಗಳು ತಿರುಪತಿಯಿಂದ ತುಮಕೂರು ಕಡೆಗೆ ಖಾಸಗಿ ಬಸ್​​ನಲ್ಲಿ ಗಾಂಜಾವನ್ನ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ‌ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಡ್ಡರಹಳ್ಳಿ ಗ್ರಾಮದ ಬಳಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತರು ಆಂಧ್ರಪ್ರದೇಶದ ಪುಂಗನೂರಿನ ಬಿ ಸಿ ಕಾಲೋನಿ ನಿವಾಸಿಗಳು ಎಂದು ತಿಳಿದು ಬಂದಿದೆ. ನಾಲ್ವರು ಆರೋಪಿಗಳ ಬಳಿ‌ ಇದ್ದ 80 ಕೆಜಿ ಗಾಂಜಾ ಸೊಪ್ಪನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ABOUT THE AUTHOR

...view details