ಕರ್ನಾಟಕ

karnataka

ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೆಚ್​ಡಿಕೆಗೆ ಆಹ್ವಾನ ನೀಡಿದ ಜೆಡಿಎಸ್ ಮುಖಂಡರು

By

Published : Oct 30, 2022, 4:16 PM IST

ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಹೊರವಲಯದಲ್ಲಿ ಹಮ್ಮಿಕೊಳ್ಳಲಾಗಿರುವ ಪಂಚರತ್ನ ಯಾತ್ರೆ ಕಾರ್ಯಕ್ರಮವನ್ನು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲಾಗುವುದು ಎಂದು ಜೆಡಿಎಸ್ ಮುಖಂಡರು ತಿಳಿಸಿದ್ದಾರೆ.

ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಮೃದ್ದಿ ಮಂಜುನಾಥ್
ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಮೃದ್ದಿ ಮಂಜುನಾಥ್

ಕೋಲಾರ: ಮುಂದಿನ ವಿಧಾನಸಭಾ‌ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಸ್ಪರ್ಧೆ ಮಾಡುವಂತಹ ನೂರು ಅಭ್ಯರ್ಥಿಗಳ ಪಟ್ಟಿಯನ್ನು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಅವರು ಕೋಲಾರದಲ್ಲಿ ಘೋಷಣೆ ಮಾಡಲಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಹೊರವಲಯದಲ್ಲಿ ಹಮ್ಮಿಕೊಳ್ಳಲಾಗಿರುವ ಪಂಚರತ್ನ ಯಾತ್ರೆ ಕಾರ್ಯಕ್ರಮವನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲಾಗುವುದು ಎಂದು ಜೆಡಿಎಸ್ ಮುಖಂಡರು ತಿಳಿಸಿದ್ದಾರೆ.

ಕೋಲಾರದ ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಮೃದ್ದಿ ಮಂಜುನಾಥ್, ಕೋಲಾರದಿಂದ ನವೆಂಬರ್​ ಒಂದರಂದು ಪಂಚರತ್ನ ರಥಯಾತ್ರೆಗೆ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಆರು ದಿನಗಳ ಕಾಲ ಕೋಲಾರದ ವಿವಿಧ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂದರು.

ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಮೃದ್ದಿ ಮಂಜುನಾಥ್ ಅವರು ಮಾತನಾಡಿದರು

ರಾಷ್ಟ್ರೀಯ ಹೆದ್ದಾರಿ ಪಕ್ಕ ಬೃಹತ್ ವೇದಿಕೆ ಸಜ್ಜು: ಇನ್ನು, ಮೊದಲಿಗೆ ಮುಳಬಾಗಿಲಿನ ಕುರುಡುಮಲೆಯ ವಿನಾಯಕನಿಗೆ ಪೂಜೆ ಸಲ್ಲಿಸಿ, ನಂತರ ಮುಳಬಾಗಿಲು ಆಂಜನೇಯಸ್ವಾಮಿ ದೇವಾಲಯ, ಬಳಿಕ ದರ್ಗಾದಲ್ಲಿ ಪೂಜೆ ಸಲ್ಲಿಸಿ ಮೂಡಲಬಾಗಿಲಿನಿಂದ ವಿಧಾನಸಭಾ ಚುನಾವಣೆ ರಣಕಹಳೆ ಮೊಳಗಿಸಲಿದ್ದಾರೆ. ಕಾರ್ಯಕ್ರಮದಲ್ಲಿ 2 ಲಕ್ಷ ಮಂದಿ ಸೇರುವ ನಿರೀಕ್ಷೆ ಇದ್ದು, ಅದರಂತೆ ಮುಳಬಾಗಿಲು ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಬೃಹತ್ ವೇದಿಕೆ ಸಜ್ಜಾಗುತ್ತಿರುವುದಾಗಿ ಹೇಳಿದ್ರು.

ಅಲ್ಲದೆ ಜಿಲ್ಲೆಯ ಮುಳಬಾಗಿಲು, ಬಂಗಾರಪೇಟೆ, ಮಾಲೂರು, ಕೋಲಾರ ಶ್ರೀನಿವಾಸಪುರ ತಾಲೂಕಿನ ಒಂದೊಂದು ಕಡೆ ಗ್ರಾಮ ವಾಸ್ತವ್ಯ ಮಾಡಲಿದ್ದು, ನಂತರ ಕೊನೆಯದಾಗಿ ಶ್ರೀನಿವಾಸಪುರದಲ್ಲಿ ಯಾತ್ರೆಗೆ ಸಮಾರೋಪ ಸಮಾರಂಭ ಹಮ್ಮಿಕೊಂಡಿರುವುದಾಗಿ ತಿಳಿಸಿದ್ರು. ಇದಾದ ನಂತರ ಪಂಚರತ್ನ ಯಾತ್ರೆ ಚಿಕ್ಕಬಳ್ಳಾಪುರ ಜಿಲ್ಲೆಗೆ ತೆರಳುವುದಾಗಿ ಹೇಳಿದ್ರು. ನ.1 ರಂದು ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಸೇರಿದಂತೆ ಜೆಡಿಎಸ್​ನ ಹಿರಿಯ ಮುಖಂಡರು ಜಿಲ್ಲೆಯ ಮುಖಂಡರು ಭಾಗವಹಿಸುವುದಾಗಿ ಹೇಳಿದ್ರು.

ಕುಮಾರಸ್ವಾಮಿ ಸ್ಪರ್ಧೆಯ ಕೂಗು: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರದ ನಂತರ ಇದೀಗ ಜೆಡಿಎಸ್ ವಲಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧೆಯ ಕೂಗು ಕೇಳಿಬಂದಿದೆ.

ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ಅವರು ಮಾತನಾಡಿದರು

ಹೌದು‌, ನವೆಂಬರ್ 1 ರಿಂದ ಜಿಲ್ಲೆಯಾದ್ಯಂತ ಪಂಚರತ್ನ ಯಾತ್ರೆ ಪ್ರಾರಂಭದ ಪೂರ್ವಭಾವಿಯಾಗಿ ಕೋಲಾರದಲ್ಲಿ ಜೆಡಿಎಸ್ ಮುಖಂಡರು ಮಾಧ್ಯಮಗೋಷ್ಟಿ ನಡೆಸಿದ್ರು. ಈ ವೇಳೆ ಕೋಲಾರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ವೆಂಕಟಶಿವಾರೆಡ್ಡಿ ಅವರು, ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಿದರು. ಅಲ್ಲದೆ ಕುಮಾರಸ್ವಾಮಿ ಅವರು ಕೋಲಾರ ಜಿಲ್ಲೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜಿಲ್ಲೆಯ ಸಮಸ್ಯೆಗಳ‌ ಬಗ್ಗೆ ಅರಿವಿದೆ ಎಂದರು.

ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ: ಕೋಲಾರ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗುತ್ತೆ. ಹೀಗಾಗಿ ಈ‌ ಕುರಿತು ಹೆಚ್​ಡಿಕೆಗೆ ಮನವಿ ಮಾಡಿಕೊಳ್ಳುತ್ತೇವೆ ಎಂದರು‌. ಇನ್ನು ಈ ರಾಜ್ಯಕ್ಕೆ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಗಳಾಗುವುದು ಖಚಿತವಾಗಿದ್ದು, ಹೆಚ್​ಡಿಕೆ ಇಲ್ಲಿಂದ ಸ್ಪರ್ಧಿಸಿದರೆ ಕೋಲಾರ ಅಭಿವೃದ್ಧಿ ಆಗಲಿದೆ. ಜೊತೆಗೆ ಜಿಲ್ಲೆಯ ಆರೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಉಳಿದ ಮುಖಂಡರು ಸಹ ಇದಕ್ಕೆ ಕೋರಸ್ ನೀಡಿದ್ದು, ಕೋಲಾರಕ್ಕೆ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರ ಕೊಡುಗೆ ಏನೂ ಇಲ್ಲ, ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿದ್ದಾರೆ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅವರಿಗೆ ಅರಿತಿದ್ದು, ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒಮ್ಮತದಿಂದ ಒತ್ತಾಯಿಸಲಾಗುವುದು ಎಂದು ವೆಂಕಟಶಿವಾರೆಡ್ಡಿ ಹೇಳಿದರು.

ಓದಿ:ಎರಡು ದಿನ ಜೆಡಿಎಸ್​ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ.. ನಾಳೆ ಬೆಂಗಳೂರಲ್ಲಿ ಸಾಂಕೇತಿಕ ಪಂಚರತ್ನ ರಥಯಾತ್ರೆ

ABOUT THE AUTHOR

...view details