ಕರ್ನಾಟಕ

karnataka

ಕೊಪ್ಪಳದಲ್ಲಿ ಭಾರಿ ಮಳೆಗೆ ನೆಲ ಕಚ್ಚಿದ ಬೆಳೆ, ರೈತರು ಕಂಗಾಲು

By

Published : Oct 26, 2021, 1:56 PM IST

ಕೊಪ್ಪಳ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಬೆಳೆಗಳು ನೆಲ ಕಚ್ಚಿದ್ದು, ರೈತರು ಕಂಗಾಲಾಗಿದ್ದಾರೆ.

ಭಾರಿ ಮಳೆಗೆ ನೆಲ ಕಚ್ಚಿದ ಬೆಳೆ
ಭಾರಿ ಮಳೆಗೆ ನೆಲ ಕಚ್ಚಿದ ಬೆಳೆ

ಕೊಪ್ಪಳ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಭತ್ತದ ಬೆಳೆ ನೆಲ ಕಚ್ಚಿದೆ. ಸಾಲ ಮಾಡಿ ಬೆಳೆ ಬೆಳೆದಿದ್ದ ರೈತರು, ಇಂದು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ.

ಕೊಪ್ಪಳದಲ್ಲಿ ಭಾರಿ ಮಳೆಗೆ ನೆಲ ಕಚ್ಚಿದ ಬೆಳೆ

ಕಳೆದ ಎರಡು ದಿನಗಳ ಹಿಂದೆ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಅವಾಂತರ ಸೃಷ್ಟಿಯಾಗಿದೆ. ಭತ್ತ ಸೇರಿದಂತೆ ವಿವಿಧ ಬೆಳೆಗಳು ನೆಲ ಕಚ್ಚಿವೆ. ಕೊಪ್ಪಳ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ಸುಮಾರು 70 ರಿಂದ 80 ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಗೊಳಗಾಗಿದೆ. ಕೆಲವೇ ದಿನಗಳಲ್ಲಿ ಕಟಾವು ಮಾಡಬೇಕಾಗಿದ್ದ ಬೆಳೆ ಹಾನಿಯಾಗಿರುವುದಕ್ಕೆ ರೈತರು ಕಂಗಾಲಾಗಿದ್ದಾರೆ. ಅಲ್ಲದೇ, ಅತಿವೃಷ್ಟಿಯಿಂದಾಗಿ ಸಂಭವಿಸಿರುವ ಹಾನಿಗೆ ಸರ್ಕಾರ ಸೂಕ್ತ ಪರಿಹಾರ ಕೊಡಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಮಳೆಗೆ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಕಾರಂಜಿ ಕೆರೆಯಲ್ಲಿ ಪತ್ತೆ

ABOUT THE AUTHOR

...view details