ಕರ್ನಾಟಕ

karnataka

ETV Bharat / state

ತಹಶೀಲ್ದಾರ್ ಲಂಚ ಪಡೆದ ಪ್ರಕರಣ.. ತಪ್ಪಿತಸ್ಥರನ್ನು ಬಿಡಲ್ಲ ಎಂದ ಡಿಸಿ

ಗಂಗಾವತಿಯ ತಹಶೀಲ್ದಾರ್ ರೇಣುಕಾ ಎಂಬುವರು ಅಕ್ರಮ ಮರಳು ಸಾಗಾಣಿಕೆದಾರರಿಂದ ಬೇಡಿಕೆ ಇಟ್ಟು ಲಂಚ ಸ್ವೀಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಪ್ರತಿಕ್ರಿಯೆ ನೀಡಿದ್ದು, ಈ ಕುರಿತಂತೆ ಸರ್ಕಾರದ ಅಪರ ಕಾರ್ಯದರ್ಶಿ ಗಮನಕ್ಕೆ ತರಲಾಗುವುದು ಎಂದರು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್​​
DC Vikas Kishor Suralkar reacted Tehsildar Bribery case

By

Published : Jan 13, 2021, 3:11 PM IST

ಗಂಗಾವತಿ:ಅಕ್ರಮ ಮರಳು ಸಾಗಾಣಿಕೆದಾರರಿಗೆ ಬೇಡಿಕೆ ಇಟ್ಟು ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ರೇಣುಕಾ ಅವರ ಮೇಲೆ ಚಾರ್ಜ್​ಶೀಟ್​​ ಫೈಲ್ ಮಾಡಿ ಸರ್ಕಾರಕ್ಕೆ ವರದಿ ಕಳಿಸಲಾಗಿದ್ದು, ಮುಂದಿನ ಕ್ರಮಕ್ಕೆ ಕಾಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್​​ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್​​ ಪ್ರತಿಕ್ರಿಯೆ

ಪ್ರಕರಣ ನಡೆದು ಸುಮಾರು ಒಂದೂವರೆ ತಿಂಗಳಾಗುತ್ತಾ ಬಂದರೂ ತಹಶೀಲ್ದಾರ್ ಮೇಲೆ ಯಾವುದೇ ಶಿಸ್ತುಕ್ರಮ ಕೈಗೊಳ್ಳದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ, ಈಗಾಗಲೇ ಸರ್ಕಾರಕ್ಕೆ ವರದಿ ಮಾಡಲಾಗಿದೆ. ಎರಡು-ಮೂರು ಬಾರಿ ಪತ್ರ ವ್ಯವಹಾರ ಮಾಡಲಾಗಿದೆ. ಮತ್ತೊಮ್ಮೆ ಸರ್ಕಾರದ ಅಪರ ಕಾರ್ಯದರ್ಶಿ ಗಮನಕ್ಕೆ ತರಲಾಗುವುದು. ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ABOUT THE AUTHOR

...view details