ಕರ್ನಾಟಕ

karnataka

ಗೋವಾದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವು

By

Published : May 1, 2021, 5:26 PM IST

ಗೋವಾದ ಬಿಚ್ಚೋಲಿಯಲ್ಲಿ ಕೂಲಿ‌ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದ. ಕೊರೊನಾ ಹಿನ್ನೆಲೆ ಅಲ್ಲಿ ಸರಿಯಾದ ಚಿಕಿತ್ಸೆ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಕುಷ್ಟಗಿ ಕರೆತಂದು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.

Kustagi Byalihal labor death
Kustagi Byalihal labor death

ಕುಷ್ಟಗಿ:ಗೋವಾದಲ್ಲಿ ಕಾರ್ಯ ಕೆಲಸ ಮಾಡುತ್ತಿದ್ದ ತಾಲೂಕಿನ ಬ್ಯಾಲಿಹಾಳ ಗ್ರಾಮದ ಕಾರ್ಮಿಕ ಆಕಸ್ಮಿಕವಾಗಿ ಬಿದ್ದು ಗಾಯಗೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕುಷ್ಟಗಿಯಲ್ಲಿ ನಡೆದಿದೆ.

ಹನಮಂತಪ್ಪ ತಿಪ್ಪಣ್ಣ ಉಚ್ಚಳ್ಳಿ (40) ಕಳೆದೆರಡು ತಿಂಗಳಿನಿಂದ ಗೋವಾದ ಬಿಚ್ಚೋಲಿಯಲ್ಲಿ ಕೂಲಿ‌ ಕೆಲಸ ಮಾಡುತ್ತಿದ್ದ. ಕಳೆದ ಮೂರು ದಿನಗಳ‌ ಹಿಂದೆ ಆಯಾತಪ್ಪಿ ಬಿದ್ದು ಗಾಯಗೊಂಡಿದ್ದ.

ಕೊರೊನಾ ಹಿನ್ನೆಲೆ ಅಲ್ಲಿ ಸರಿಯಾದ ಚಿಕಿತ್ಸೆ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಕುಷ್ಟಗಿ ಕರೆತಂದು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದರು. ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾನೆ. ಗೋವಾದಲ್ಲಿ ಚಿಕಿತ್ಸೆ ನೀಡಿದ್ದರೆ ಬದುಕುಳಿಯುವ ಸಾದ್ಯತೆಗಳಿದ್ದವು ಎಂದು ಕುಟುಂಬದವರು ತಿಳಿಸಿದ್ದಾರೆ.

ABOUT THE AUTHOR

...view details