ಕರ್ನಾಟಕ

karnataka

ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ಸಚಿವ ಆನಂದ ಸಿಂಗ್ ಭೇಟಿ.. ಇಲ್ಲಿನ ಗುಣಮಟ್ಟ ಅಳವಡಿಸಿಕೊಳ್ಳಲು ಉತ್ಸುಕತೆ..

By

Published : Apr 25, 2022, 1:11 PM IST

Updated : Apr 25, 2022, 2:20 PM IST

ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್​ ಸಿಂಗ್​, ಆಸ್ಪತ್ರೆಯ ಚಿಕಿತ್ಸೆ ಹಾಗೂ ಗುಣಮಟ್ಟದ ಬಗ್ಗೆ ಅಲ್ಲಿ ರೋಗಿಗಳ ಬಳಿ ವಿಚಾರಿಸಿದ್ದಾರೆ..

Minister Anand Singh visited government hospital
ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಆನಂದ್​ ಸಿಂಗ್​

ಗಂಗಾವತಿ :ಇಲ್ಲಿನ ಉಪವಿಭಾಗ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಚಿಕಿತ್ಸೆಗಾಗಿ ಅನ್ಯ ಜಿಲ್ಲೆ, ತಾಲೂಕಿನಿಂದ ಬಂದಿದ್ದ ರೋಗಿಗಳೊಂದಿಗೆ ನೇರ ಸಂವಾದ ನಡೆಸಿ ಮಾಹಿತಿ ಪಡೆದರು. ಮೂರನೇ ಬಾರಿಗೆ ಕೇಂದ್ರದ ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡು ರಾಜ್ಯದಲ್ಲಿಯೇ ದಾಖಲೆ ನಿರ್ಮಾಣ ಮಾಡಿದ ಹಿನ್ನೆಲೆ ಭೇಟಿ ನೀಡಿದ ಸಚಿವ ಸಿಂಗ್, ಇದಕ್ಕೂ ಮೊದಲು ಆಸ್ಪತ್ರೆಯಲ್ಲಿ ರೌಂಡ್ಸ್ ನಡೆಸಿದರು.

ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಆನಂದ್​ ಸಿಂಗ್​

ಆಸ್ಪತ್ರೆಯಲ್ಲಿನ ಚಿಕಿತ್ಸೆ, ಗುಣಮಟ್ಟ ಇತ್ಯಾದಿಗಳ ಬಗ್ಗೆ ರೋಗಿಗಳೊಂದಿಗೆ ಚರ್ಚಿಸಿದರು. ಕೊಪ್ಫಳ ಮಾತ್ರವಲ್ಲ ಇಡೀ ರಾಜ್ಯಕ್ಕೆ ಆಸ್ಪತ್ರೆ ಮಾದರಿಯಾಗಿದ್ದು, ಆದಷ್ಟು ತ್ವರಿತವಾಗಿ ಹೊಸಪೇಟೆಯ ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಗಂಗಾವತಿಗೆ ಭೇಟಿ ನೀಡಿ ಇಲ್ಲಿನ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಯತ್ನಿಸುತ್ತೇವೆ ಎಂದರು.

ಇದನ್ನೂ ಓದಿ:ಕೋವಿಡ್ 4ನೇ ಅಲೆ ಆತಂಕ : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

Last Updated : Apr 25, 2022, 2:20 PM IST

ABOUT THE AUTHOR

...view details