ಕರ್ನಾಟಕ

karnataka

ಭೂ ಸ್ವಾಧೀನ ಕಾಯ್ದೆ ವಿರುದ್ಧ ಭುಗಿಲೆದ್ದ ಆಕ್ರೋಶ... ಕೊಪ್ಪಳದಲ್ಲೂ ಪ್ರತಿಭಟನೆ

By

Published : Jun 10, 2019, 1:01 PM IST

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರುದ್ದ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ()

ರಾಜ್ಯ ಸರ್ಕಾರದ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಮತ್ತು ಬರಗಾಲ ಪರಿಹಾರ ಜಾರಿ ಮಾಡುವಂತೆ ಆಗ್ರಹಿಸಿ ,ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 50 ಚತುಷ್ಪಥ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊಪ್ಪಳ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 50 ಚತುಷ್ಪಥ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲೂಕಿನ ಹಿಟ್ನಾಳ್ ಕ್ರಾಸ್ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರ ಚತುಷ್ಪಥ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರುದ್ದ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಮತ್ತು ಬರಗಾಲ ಪರಿಹಾರ ಜಾರಿ ಮಾಡುವಂತೆ ಆಗ್ರಹಿಸಿ ನಡೆಯುತ್ತಿರುವ ಈ ರಸ್ತಾ ರೋಖೋದಲ್ಲಿ ಕೊಪ್ಪಳ ಜಿಲ್ಲೆಯ ರೈತ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಮಾರ್ಗವನ್ನು ಪೊಲೀಸ್ ಇಲಾಖೆ ಬದಲಾಯಿಸಿದೆ. ಹೀಗಾಗಿ ಹೆದ್ದಾರಿ ಬಿಕೋ ಎನ್ನುತ್ತಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ವ್ಯಾಪಕ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Intro:


Body:ಕೊಪ್ಪಳ:- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 50 ಚತುಷ್ಪಥ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲೂಕಿನ ಹಿಟ್ನಾಳ್ ಕ್ರಾಸ್ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರ ಚತುಷ್ಪತ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಮತ್ತು ಬರಗಾಲ ಪರಿಹಾರ ಕಾಮಗಾರಿ ಜಾರಿ ಮಾಡುವಂತೆ ಆಗ್ರಹಿಸಿ ನಡೆಯುತ್ತಿರುವ ಈ ರಸ್ತಾರೋಖೋದಲ್ಲಿ ಕೊಪ್ಪಳ ಜಿಲ್ಲೆಯ ರೈತ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಹೆದ್ದಾರಿ ಬಂದ್ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಮಾರ್ಗವನ್ನು ಪೊಲೀಸ್ ಇಲಾಖೆ ಬದಲಾಯಿಸಿದೆ. ಹೀಗಾಗಿ ಹೆದ್ದಾರಿ ಬಿಕೋ ಎನ್ನುತ್ತಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ವ್ಯಾಪಕ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.


Conclusion:

TAGGED:

ABOUT THE AUTHOR

...view details